Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:28 - ಪರಿಶುದ್ದ ಬೈಬಲ್‌

28 ಆದರೆ ನಾನು ದೇವರಾತ್ಮನ ಶಕ್ತಿಯ ಮೂಲಕ ದೆವ್ವಗಳನ್ನು ಬಿಡಿಸುತ್ತೇನೆ. ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಾನು ದೇವರ ಆತ್ಮದಿಂದ ದೆವ್ವಗಳನ್ನು ಬಿಡಿಸುವುದಾದರೆ, ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವದಾದರೆ ದೇವರ ರಾಜ್ಯವು ನಿಮ್ಮ ಹತ್ತರಕ್ಕೆ ಬಂತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ದೇವರ ಆತ್ಮನಿಂದ ದೆವ್ವಗಳನ್ನು ಓಡಿಸುವುದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಗಿರ್‍ಯಾಂಚೊ ಮುಖಂಡ್ ಬೆಎಲ್ಜೆಬುಲ್ ನ್ಹಯ್, ಪವಿತ್ರ್ ಆತ್ಮೊ ಮಾಕಾ ಗಿರೆ ಸೊಡ್ಸುತಲಿ ತಾಕತ್ ದಿತಾ, ಅನಿ ಅಶೆ, ಹೆ ಸಗ್ಳೆ ದೆವಾಚೆ ರಾಜ್ ತುಮ್ಚ್ಯಾ ಮದ್ದಿ ಯೆವ್ನ್ ಹೊಲಾ ಮನುನ್ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:28
23 ತಿಳಿವುಗಳ ಹೋಲಿಕೆ  

ಆದರೆ ನಾನು ದೆವ್ವಗಳನ್ನು ದೇವರ ಬಲದಿಂದ ಹೊರಡಿಸುವುದಾದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ.


“ಮನುಷ್ಯಕುಮಾರನಂತಿರುವ ಆ ವ್ಯಕ್ತಿಗೆ ದೊರೆತನ, ಮಹಿಮೆ ಮತ್ತು ಆಳುವ ಸಂಪೂರ್ಣ ಅಧಿಕಾರವನ್ನು ಕೊಡಲಾಯಿತು. ಸಕಲ ಜನರು, ಜನಾಂಗಗಳು ಮತ್ತು ಎಲ್ಲ ಭಾಷೆಯ ಜನರು ಆತನನ್ನು ಸೇವಿಸುವರು. ಆತನ ಅಧಿಕಾರವು ಶಾಶ್ವತ, ಆತನ ರಾಜ್ಯವು ಎಂದಿಗೂ ಅಳಿಯದು.


“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ದೇವರ ರಾಜ್ಯವು ನಿಮ್ಮಿಂದ ತೆಗೆದುಹಾಕಲ್ಪಟ್ಟು ಆ ರಾಜ್ಯದಲ್ಲಿ ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಮಾಡುವವರಿಗೆ ಕೊಡಲ್ಪಡುವುದು.


ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


ದೇವರು ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡುಗಡೆ ಮಾಡಿದ್ದಾನೆ. ಆತನು ನಮ್ಮನ್ನು ತನ್ನ ಪ್ರಿಯ ಮಗನ (ಯೇಸುವಿನ) ರಾಜ್ಯದೊಳಗೆ ಸೇರಿಸಿದ್ದಾನೆ.


ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ.


“ಜನರು ಮೋಶೆಯ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಗ್ರಂಥಗಳಿಗೂ ಅನುಸಾರವಾಗಿ ಜೀವಿಸಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಸ್ನಾನಿಕನಾದ ಯೋಹಾನನು ಬಂದ ಕಾಲದಿಂದ ದೇವರ ರಾಜ್ಯದ ಸುವಾರ್ತೆಯು ತಿಳಿಸಲ್ಪಡುತ್ತಿದೆ. ಅನೇಕ ಜನರು ದೇವರ ರಾಜ್ಯದೊಳಗೆ ಹೋಗಲು ಬಹಳ ಪ್ರಯಾಸಪಡುತ್ತಿದ್ದಾರೆ.


“ಕಾಲ ಪರಿಪೂರ್ಣವಾಯಿತು. ದೇವರ ರಾಜ್ಯ ಸಮೀಪಿಸಿತು. ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ” ಎಂಬ ದೇವರ ಸುವಾರ್ತೆಯನ್ನು ಉಪದೇಶಿಸಿದನು.


“ಈ ಇಬ್ಬರು ಗಂಡುಮಕ್ಕಳಲ್ಲಿ ತಂದೆಗೆ ಯಾರು ವಿಧೇಯರಾದರು?” ಆಗ ಯೆಹೂದ್ಯ ನಾಯಕರು, “ಮೊದಲನೆಯ ಮಗ” ಎಂದು ಉತ್ತರಕೊಟ್ಟರು. ಯೇಸು ಅವರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸುಂಕವಸೂಲಿಗಾರರನ್ನು ಮತ್ತು ವೇಶ್ಯೆಯರನ್ನು ಕೆಟ್ಟಜನರೆಂದು ನೀವು ಅಂದುಕೊಂಡಿದ್ದೀರಿ. ಆದರೆ ಅವರು ನಿಮಗಿಂತ ಮುಂಚೆಯೇ ದೇವರ ರಾಜ್ಯಕ್ಕೆ ಪ್ರವೇಶಿಸುತ್ತಾರೆ.


ದೇವರ ರಾಜ್ಯದ ಬಗ್ಗೆ ತಿಳಿಸುವುದಕ್ಕೂ ಅಸ್ವಸ್ಥರಾದವರನ್ನು ವಾಸಿಮಾಡುವುದಕ್ಕೂ ಯೇಸು ಅಪೊಸ್ತಲರನ್ನು ಕಳುಹಿಸಿದನು.


ನಂಬುವವರಾದರೋ ಅದ್ಭುತಕಾರ್ಯಗಳನ್ನು ಮಾಡುವರು. ಅವರು ನನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುವರು. ತಾವೆಂದೂ ಕಲಿತಿಲ್ಲದ ಭಾಷೆಗಳಲ್ಲಿ ಮಾತನಾಡುವರು.


“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.


ಆದ್ದರಿಂದ, ನಡುಗಿಸಲಾಗದಿರುವ ರಾಜ್ಯವನ್ನು ನಾವು ಹೊಂದಿರುವುದರಿಂದ ದೇವರಿಗೆ ಕೃತಜ್ಞತೆಯಿಂದಿರಬೇಕು. ಆತನಿಗೆ ಮೆಚ್ಚಿಕೆಕರವಾದ ಆರಾಧನೆಯನ್ನು ಭಯಭಕ್ತಿಯಿಂದ ಮಾಡಬೇಕು.


‘ನಮ್ಮ ಕಾಲುಗಳಿಗೆ ಹತ್ತಿದ ನಿಮ್ಮ ಊರಿನ ಧೂಳನ್ನು ನಿಮಗೆ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ದೇವರ ರಾಜ್ಯ ಸಮೀಪಿಸುತ್ತಿದೆ ಎಂಬುದು ನಿಮಗೆ ತಿಳಿದಿರಲಿ’ ಎಂದು ಹೇಳಿರಿ.


“ನಮ್ಮ ಪಿತೃವಾದ ದಾವೀದನ ರಾಜ್ಯವು ಬರಲಿ! ಮೇಲೋಕಗಳಲ್ಲಿ ದೇವರಿಗೆ ಜಯವಾಗಲಿ” ಎಂದು ಕೂಗಿದರು.


“ಇಗೋ, ನನ್ನ ಸೇವಕನು. ನಾನು ಆತನನ್ನು ಆರಿಸಿಕೊಂಡಿದ್ದೇನೆ. ಆತನನ್ನು ಪ್ರೀತಿಸುತ್ತೇನೆ, ಆತನನ್ನು ಮೆಚ್ಚಿದ್ದೇನೆ. ಆತನ ಮೇಲೆ ನನ್ನ ಆತ್ಮವನ್ನು ಇರಿಸುವೆನು. ಆತನು ಜನಾಂಗಗಳಿಗೆ ನ್ಯಾಯವಾದ ತೀರ್ಪು ಮಾಡುವನು.


ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.


ಒಬ್ಬ ವ್ಯಕ್ತಿಯು ಬಲಿಷ್ಠನೊಬ್ಬನ ಮನೆಗೆ ನುಗ್ಗಿ ಅವನ ಸ್ವತ್ತನ್ನು ಕದಿಯಬೇಕಿದ್ದರೆ, ಮೊದಲು ಅವನು ಆ ಬಲಿಷ್ಠನನ್ನು ಕಟ್ಟಿಹಾಕಬೇಕು. ಆಗ ಆ ಬಲಿಷ್ಠನ ಮನೆಯ ಸ್ವತ್ತನ್ನು ಕದಿಯಲು ಅವನಿಗೆ ಸಾಧ್ಯವಾಗುವುದು.


ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು