ಮತ್ತಾಯ 12:31 - ಪರಿಶುದ್ದ ಬೈಬಲ್31 “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಜನರು ಮಾಡುವ ಪ್ರತಿಯೊಂದು ಪಾಪಕ್ಕೂ ಹೇಳುವ ಪ್ರತಿಯೊಂದು ದೂಷಣೆ ಮಾತಿಗೂ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆ ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ಮಾನವರು ಮಾಡುವ ಪ್ರತಿಯೊಂದು ಪಾಪಕ್ಕೂ ಆಡುವ ದೇವದೂಷಣೆಗೂ ಕ್ಷಮೆ ಉಂಟು. ಆದರೆ ಪವಿತ್ರಾತ್ಮನ ವಿರುದ್ಧ ಆಡುವ ದೂಷಣೆಗೆ ಕ್ಷಮೆಯೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆದಕಾರಣ ನಿಮಗೆ ಹೇಳುತ್ತೇನೆ, ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವದು; ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆದಕಾರಣ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಕ್ಕೂ ದೂಷಣೆಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತಸೆಮನುನ್ ಮಿಯಾ ತುಮ್ಕಾ ಸಾಂಗ್ತಾ, ಕೊನ್ಬಿ ಬುರ್ಶೆ ಬೊಲ್ಲ್ಯಾರ್ ನಾಹೊಲ್ಯಾರ್ ಪಾಪಾ ಕರಲ್ಲ್ಯಾಕ್ನಿ ಮಾಪಿ ಗಾವ್ತಾ, ಖರೆ ಪವಿತ್ರ್ ಆತ್ಮ್ಯಾಚ್ಯಾ ವಿರೊದ್ ಬುರ್ಶೆ ಬೊಲ್ತಾ ತೆಕಾ ಕನ್ನಾಚ್ ಮಾಪಿ ಗಾವಿನಾ. ಅಧ್ಯಾಯವನ್ನು ನೋಡಿ |
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.
ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.
ಕ್ರಿಸ್ತನ ಮಾರ್ಗವನ್ನು ಜನರು ಬಿಟ್ಟುಹೋದ ನಂತರ, ನೀವು ಅವರ ಜೀವನವನ್ನು ಮತ್ತೆ ಪರಿವರ್ತಿಸಲು ಸಾಧ್ಯವೇ? ನಾನು ಸತ್ಯವನ್ನು ತಿಳಿದುಕೊಂಡ ಜನರನ್ನು ಕುರಿತು ಮಾತಾಡುತ್ತಿದ್ದೇನೆ. ಅವರು ದೇವರ ವರಗಳನ್ನು ಪಡೆದವರೂ ಪವಿತ್ರಾತ್ಮನಲ್ಲಿ ಪಾಲುಗಾರರೂ ಆಗಿದ್ದಾರೆ. ದೇವರು ಹೇಳಿದ ಸಂಗತಿಗಳನ್ನು ಅವರು ಕೇಳಿದವರೂ ದೇವರ ಹೊಸಲೋಕದ ಮಹಾಶಕ್ತಿಗಳನ್ನು ನೋಡಿದವರೂ ಆಗಿದ್ದಾರೆ. ಅವುಗಳೆಲ್ಲ ಉತ್ತಮವಾದವುಗಳೆಂಬುದನ್ನು ಅವರು ಕಲಿತುಕೊಂಡಿದ್ದಾರೆ. ಆದರೂ ಅವರು ಕ್ರಿಸ್ತನ ಮಾರ್ಗವನ್ನು ಬಿಟ್ಟುಹೋದರು. ಅವರ ಜೀವಿತವನ್ನು ಮತ್ತೆ ಪರಿವರ್ತಿಸಿ ಕ್ರಿಸ್ತನ ಬಳಿಗೆ ಬರಮಾಡಲು ಸಾಧ್ಯವಿಲ್ಲ. ಏಕೆಂದರೆ ಕ್ರಿಸ್ತನನ್ನು ಬಿಟ್ಟುಹೋದ ಅವರು ಕ್ರಿಸ್ತನನ್ನು ಮತ್ತೆ ಶಿಲುಬೆಗೇರಿಸಿ ಮೊಳೆಗಳನ್ನು ಹೊಡೆಯುವವರೂ ಜನರೆಲ್ಲರ ಮುಂದೆ ಕ್ರಿಸ್ತನಿಗೆ ಅವಮಾನ ಮಾಡುವವರೂ ಆಗಿದ್ದಾರೆ.
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’