Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:38 - ಪರಿಶುದ್ದ ಬೈಬಲ್‌

38 ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಬೋಧಕನೇ, ನೀನು ಹೇಳಿದ್ದನ್ನು ನಿರೂಪಿಸುವುದಕ್ಕಾಗಿ ಒಂದು ಸೂಚಕಕಾರ್ಯವನ್ನು ಮಾಡು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು, “ಬೋಧಕನೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು” ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಬಳಿಕ ಕೆಲವುಮಂದಿ ಧರ್ಮಶಾಸ್ತ್ರಿಗಳೂ ಫರಿಸಾಯರೂ ಯೇಸುಸ್ವಾಮಿಯನ್ನು ಉದ್ದೇಶಿಸಿ, “ಬೋಧಕರೇ, ನೀವು ಒಂದು ಸೂಚಕಕಾರ್ಯ ಮಾಡುವುದನ್ನು ನೋಡಬೇಕೆಂದಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು - ಬೋಧಕನೇ, ನಿನ್ನಿಂದಾಗುವ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು ನಮಗೆ ಅಪೇಕ್ಷೆಯದೆ ಎಂದು ಆತನನ್ನು ಕೇಳಲಾಗಿ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆಗ ನಿಯಮ ಬೋಧಕರೂ ಫರಿಸಾಯರೂ, “ಬೋಧಕರೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ಕಾಣಬೇಕೆಂದಿದ್ದೇವೆ,” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತನ್ನಾ ಉಲ್ಲೆ ಶಾಸ್ತರಾ ಶಿಕ್ವುತಲೆ ಅನಿ ಉಲ್ಲೆ ಫಾರಿಜೆವ್, “ಗುರುಜಿ, ಅಮ್ಕಾ ತಿಯಾ ಎಕ್ ಮೊಟೆ ವಿಚಿತ್ರ್ ಕರಲ್ಲೆ ಬಗುಕ್ ಪಾಜೆ,” ಮನುನ್ ಸಾಂಗುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:38
9 ತಿಳಿವುಗಳ ಹೋಲಿಕೆ  

ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರಿಗೆ ಜ್ಞಾನವು ಬೇಕಾಗಿದೆ.


ಯೆಹೂದ್ಯರು ಯೇಸುವಿಗೆ, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತುಪಡಿಸಲು ಯಾವ ಸೂಚಕಕಾರ್ಯವನ್ನು ಮಾಡುವೆ?” ಎಂದು ಕೇಳಿದರು.


ಇತರ ಜನರು ಯೇಸುವನ್ನು ಪರೀಕ್ಷಿಸಬೇಕೆಂದು ದೇವರಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸು ಎಂದು ಕೇಳಿದರು.


ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ನೋಡದ ಹೊರತು ನನ್ನನ್ನು ನಂಬುವುದೇ ಇಲ್ಲ” ಎಂದು ಹೇಳಿದನು.


ಜನರ ಗುಂಪು ದೊಡ್ಡದಾಗುತ್ತಿರಲು ಯೇಸು ಅವರಿಗೆ, “ಈ ಸಂತತಿಯು ಕೆಟ್ಟ ಸಂತತಿಯೇ ಸರಿ! ಇದು ಸೂಚಕಕಾರ್ಯವನ್ನು ನೋಡಬೇಕೆನ್ನುತ್ತದೆ. ಆದರೆ ಯೋನನ ಜೀವಿತದಲ್ಲಾದ ಸೂಚಕಕಾರ್ಯದ ಹೊರತು ಬೇರೆ ಯಾವುದೂ ಇದಕ್ಕೆ ದೊರೆಯುವುದಿಲ್ಲ.


ಆದ್ದರಿಂದ ಜನರು, “ದೇವರಿಂದ ಕಳುಹಿಸಲ್ಪಟ್ಟಾತನು ನೀನೇ ಎಂಬುದನ್ನು ನಿರೂಪಿಸುವುದಕ್ಕಾಗಿ ನೀನು ಯಾವ ಸೂಚಕಕಾರ್ಯವನ್ನು ಮಾಡುವೆ?


ನಿಮ್ಮ ಮಾತುಗಳಿಂದಲೇ ನಿಮಗೆ ನೀತಿವಂತರೆಂದಾಗಲಿ ಅಪರಾಧಿಗಳೆಂದಾಗಲಿ ತೀರ್ಪು ನೀಡಲಾಗುವುದು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು