Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:45 - ಪರಿಶುದ್ದ ಬೈಬಲ್‌

45 ಆಗ ಅದು ಹೊರಗೆ ಹೋಗಿ ತನಗಿಂತಲೂ ಹೆಚ್ಚು ದುಷ್ಟರಾದ ಏಳು ದುರಾತ್ಮಗಳನ್ನು ಕರೆದುಕೊಂಡು ಬರುತ್ತದೆ. ಆ ದುರಾತ್ಮಗಳೆಲ್ಲಾ ಆ ಮನುಷ್ಯನೊಳಗೆ ಸೇರಿಕೊಂಡು ವಾಸಮಾಡಲಾರಂಭಿಸುತ್ತವೆ. ಆಗ ಆ ಮನುಷ್ಯನಿಗೆ ಮೊದಲಿಗಿಂತಲೂ ಹೆಚ್ಚಿನ ಕಷ್ಟಗಳು ಉಂಟಾಗುತ್ತವೆ. ಈ ದಿನಗಳಲ್ಲಿ ಜೀವಿಸುವ ದುಷ್ಟ ಜನರಿಗೆ ಅದೇ ರೀತಿ ಆಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಪುನಃ ಹೊರಟುಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಡನೆ ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲಸುತ್ತವೆ. ಆಗ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗಿಳಿಯುತ್ತದೆ. ಈ ದುಷ್ಟ ಪೀಳಿಗೆಗೆ ಸಂಭವಿಸುವ ಗತಿಯೂ ಅದೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರಕೊಂಡು ಬರುವದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು. ಇದರಂತೆಯೇ ಈ ಕೆಟ್ಟ ಸಂತತಿಗೆ ಆಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆಗ ಅದು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುವವು. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅದರಂತೆಯೇ ಈ ದುಷ್ಟ ಸಂತತಿಗೂ ಆಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತನ್ನಾ ತೊ ಗಿರೊ ಪರ್ತುನ್ ಜಾತಾ ಅನಿ ಅಪ್ನಾಚ್ಯಾನ್ಕಿ ಬುರ್ಶ್ಯಾ,ಸತ್ತ್ ಗಿರ್‍ಯಾಕ್ನಿ ವಾಂಗ್ಡಾ ಬಲ್ವುನ್ ಘೆವ್ನ್ ಯೆತಾ. ಅನಿ ತಿ ಥೈ ರ್‍ಹಾತ್ಯಾತ್. ಸಗ್ಳೆ ಹೊಲ್ಲ್ಯಾ ಮಾನಾ ತೊ ಮಾನುಸ್ ಅದ್ದಿ ಹೊತ್ತ್ಯಾಚ್ಯಾನ್ಕಿ ಬುರ್ಶ್ಯಾ ಸ್ಥಿತಿಕ್ ಪಾವ್ತಾ. ಅತ್ತಾಚ್ಯಾ ಬುರ್ಶ್ಯಾ ಲೊಕಾಕ್ನಿ ಅಸೆಚ್ ಹೊತಾ. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:45
23 ತಿಳಿವುಗಳ ಹೋಲಿಕೆ  

ಆಗ ಹೊರಟುಹೋಗಿ ತನಗಿಂತಲೂ ಹೆಚ್ಚು ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಬಳಿಕ ಆ ದೆವ್ವಗಳೆಲ್ಲಾ ಆ ಮನುಷ್ಯನೊಳಗೆ ಹೋಗಿ ಅಲ್ಲೇ ವಾಸಿಸುತ್ತವೆ. ಆಗ ಆ ವ್ಯಕ್ತಿಯು ಮೊದಲಿಗಿಂತಲೂ ಹೆಚ್ಚಿನ ಸಂಕಟಕ್ಕೆ ಒಳಗಾಗುತ್ತಾನೆ” ಎಂದು ಹೇಳಿದನು.


ಆಗ ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದನು. ಅವನು “ನನ್ನ ಹೆಸರು ದಂಡು, ಏಕೆಂದರೆ ನನ್ನಲ್ಲಿ ಅನೇಕ ದೆವ್ವಗಳಿವೆ” ಎಂದು ಉತ್ತರಕೊಟ್ಟನು.


ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಜೀವಂತನಾಗಿ ಎದ್ದನು. ಯೇಸು ಮೊಟ್ಟಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು. ಹಿಂದೊಮ್ಮೆ ಯೇಸು ಮರಿಯಳಿಂದ ಏಳು ದೆವ್ವಗಳನ್ನು ಬಿಡಿಸಿದ್ದನು.


ಆದರೆ ನಾವು ಹಿಂಜರಿಯುವ ಜನರಲ್ಲ, ನಾಶವಾಗುವ ಜನರೂ ಅಲ್ಲ. ನಾವು ನಂಬಿಕೆಯುಳ್ಳವರಾಗಿದ್ದೇವೆ ಮತ್ತು ರಕ್ಷಣೆ ಹೊಂದಿದವರಾಗಿದ್ದೇವೆ.


ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು! ಒಬ್ಬನು ತಾನು ಕುಡಿಯುವ ಪಾನೀಯದೊಳಗಿಂದ ಸಣ್ಣ ಸೊಳ್ಳೆಯನ್ನು ತೆಗೆದುಹಾಕಿ ಆಮೇಲೆ ಒಂಟೆಯನ್ನು ನುಂಗುವವನಂತೆ ನೀವಿದ್ದೀರಿ.


ಜನರು ಹೀಗೆ ಮಾತಾಡುತ್ತಿದ್ದುದನ್ನು ಕೇಳಿಸಿಕೊಂಡ ಫರಿಸಾಯರು, “ಯೇಸು ಬೆಲ್ಜೆಬೂಲನ ಶಕ್ತಿಯ ಮೂಲಕ ಜನರನ್ನು ದೆವ್ವಗಳಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದರು.


ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮ ಮಾರ್ಗಗಳನ್ನು ಹಿಂಬಾಲಿಸುವ ಒಬ್ಬನನ್ನು ಕಂಡುಕೊಳ್ಳಲು ನೀವು ಸಮುದ್ರಗಳನ್ನು ದಾಟಿ ಬೇರೆಬೇರೆ ದೇಶಗಳಲ್ಲಿ ಪ್ರಯಾಣ ಮಾಡುತ್ತೀರಿ. ಅವನನ್ನು ಕಂಡುಕೊಂಡ ಮೇಲೆ ನಿಮಗಿಂತಲೂ ಹೆಚ್ಚು ಕೆಟ್ಟವನನ್ನಾಗಿ ಮಾಡುತ್ತೀರಿ. ನೀವು ನರಕಪಾತ್ರರಾಗುವಷ್ಟು ಕೆಟ್ಟವರಾಗಿದ್ದೀರಿ.


ಆಗ ಅದು, ‘ನಾನು ಬಿಟ್ಟುಬಂದ ಮನೆಗೇ ಹಿಂತಿರುಗಿ ಹೋಗುತ್ತೇನೆ’ ಎಂದು ಅಂದುಕೊಳ್ಳುತ್ತದೆ. ಬಳಿಕ ಅದು ಅವನ ಬಳಿಗೆ ಮತ್ತೆ ಬಂದಾಗ ಆ ಮನೆಯು ಇನ್ನೂ ಬರಿದಾಗಿರುತ್ತದೆ. ಚೊಕ್ಕಟವಾಗಿ ಗುಡಿಸಿ ಅಲಂಕರಿಸಲ್ಪಟ್ಟಿರುತ್ತದೆ.


ಯಾಜಕನು ಅದನ್ನು ಪರೀಕ್ಷಿಸಬೇಕು. ಅದು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರ ಮೇಲಿರುವ ರೋಮವು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಆ ಕಲೆಯು ಕುಷ್ಠದ ಸೋಂಕಾಗಿದೆ. ಹುಣ್ಣಿನಿಂದ ಕುಷ್ಠ ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು