Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:48 - ಪರಿಶುದ್ದ ಬೈಬಲ್‌

48 ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಉತ್ತರಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅದಕ್ಕಾತನು ಆ ಮಾತು ಹೇಳಿದವನಿಗೆ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಅದಕ್ಕೆ ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎನ್ನುತ್ತಾ, ತಮ್ಮ ಶಿಷ್ಯರ ಕಡೆಗೆ ಕೈತೋರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅದಕ್ಕಾತನು ಆ ಮಾತು ಹೇಳಿದವನಿಗೆ - ನನಗೆ ತಾಯಿ ಯಾರು? ನನಗೆ ಸಹೋದರರು ಯಾರು? ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಅದಕ್ಕೆ ಯೇಸು ತಮಗೆ ಹೇಳಿದವನಿಗೆ ಉತ್ತರವಾಗಿ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಜೆಜುನ್ ತೆಕಾ ಮಾಜಿ ಬಾಯ್ ಕೊನ್? ಮಾಜಿ ಭಾವಾ ಕೊನ್? ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:48
9 ತಿಳಿವುಗಳ ಹೋಲಿಕೆ  

“ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.


ಯೇಸುವು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು. ದೇವರಿಗೂ ಜನರಿಗೂ ಅಚ್ಚುಮೆಚ್ಚಾದನು.


ಯೆಹೋವನೇ, ಅವರು ನಿನಗಾಗಿ ಚಿಂತಿಸಿದರು; ಸ್ವಂತ ಸಂಸಾರಕ್ಕಿಂತಲೂ ಹೆಚ್ಚಾಗಿ ನಿನ್ನನ್ನು ಪ್ರೀತಿಸಿದರು; ಅವರು ನಿನಗಾಗಿ ತಮ್ಮ ತಂದೆತಾಯಿಗಳನ್ನು ನಿರ್ಲಕ್ಷಿಸಿದರು; ಒಡಹುಟ್ಟಿದವರನ್ನೂ ಗುರುತಿಸಲಿಲ್ಲ. ಅವರು ತಮ್ಮ ಮಕ್ಕಳಿಗೆ ಪ್ರಾಮುಖ್ಯತೆಯನ್ನು ಕೊಡಲಿಲ್ಲ; ಅವರು ನಿನ್ನ ಕಟ್ಟಳೆಗಳನ್ನು ಅನುಸರಿಸಿ ಒಡಂಬಡಿಕೆಯನ್ನು ಕಾಪಾಡಿದರು.


ಹೀಗಿರಲಾಗಿ, ಲೋಕವು ಜನರ ವಿಷಯವಾಗಿ ಯೋಚಿಸುವಂತೆ ಇಂದಿನಿಂದ ನಾವು ಯಾರ ಬಗ್ಗೆಯೂ ಯೋಚಿಸುವುದಿಲ್ಲ. ಲೋಕವು ಯೋಚಿಸುವಂತೆ ಹಿಂದಿನ ಕಾಲದಲ್ಲಿ ನಾವು ಕ್ರಿಸ್ತನ ಬಗ್ಗೆ ಯೋಚಿಸಿಕೊಂಡಿದ್ದೆವು. ಆದರೆ ಈಗ ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ.


ಯೇಸು ಅವರಿಗೆ, “ನೀವು ನನಗೋಸ್ಕರ ಏಕೆ ಹುಡುಕಬೇಕಿತ್ತು? ನನ್ನ ತಂದೆಯ (ದೇವರ) ಕೆಲಸ ಎಲ್ಲಿರುತ್ತದೋ ಅಲ್ಲಿ ನಾನು ಇರಬೇಕು ಎಂಬುದನ್ನು ನೀವು ತಿಳಿದಿರಬೇಕಾಗಿತ್ತು!” ಎಂದು ಹೇಳಿದನು.


ಒಬ್ಬನು ಯೇಸುವಿಗೆ, “ನಿನ್ನ ತಾಯಿ ಮತ್ತು ಸಹೋದರರು ನಿನಗಾಗಿ ಹೊರಗಡೆ ಕಾದಿದ್ದಾರೆ, ಅವರು ನಿನ್ನೊಂದಿಗೆ ಮಾತಾಡಬೇಕೆಂದಿದ್ದಾರೆ” ಎಂದನು.


ತನ್ನ ಶಿಷ್ಯರ ಕಡೆಗೆ ಕೈ ತೋರಿಸಿ, “ನೋಡಿ! ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು