Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:13 - ಪರಿಶುದ್ದ ಬೈಬಲ್‌

13 ಈ ಕಾರಣದಿಂದಲೇ ನಾನು ಈ ಸಾಮ್ಯಗಳ ಮೂಲಕ ಇವರಿಗೆ ಬೋಧಿಸುತ್ತೇನೆ. ಈ ಜನರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರೊಡನೆ ಸಾಮತಿ ರೂಪದಲ್ಲಿ ಮಾತನಾಡುವುದಕ್ಕೆ ಕಾರಣ ಇದು: ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕಿವಿಯಾರೆ ಕೇಳಿದರೂ ಕಿವಿಗೊಡುವುದಿಲ್ಲ; ಗ್ರಹಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ಕಾರಣವೇನಂದರೆ ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ, ಕಿವಿಯಿದ್ದರೂ ಕೇಳುವದಿಲ್ಲ ಮತ್ತು ತಿಳುಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ, ನಾನು ಅವರೊಡನೆ ಸಾಮ್ಯಗಳಲ್ಲಿ ಮಾತನಾಡುತ್ತೇನೆ: “ಏಕೆಂದರೆ ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕೇಳಿದರೂ ತಿಳಿದುಕೊಳ್ಳುವುದಿಲ್ಲ; ಅವರು ಗ್ರಹಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಿಯಾ ತೆಂಚ್ಯಾಕ್ಡೆ ಕಾನಿಯಾಂಚ್ಯಾ ವೈನಾ ಕಶ್ಯಾಕ್ ಬೊಲ್ತಾ ಮಟ್ಲ್ಯಾರ್, ತೆನಿ ಬಗ್ತ್ಯಾತ್, ಖರೆ ತೆಂಕಾ ದಿಸಿನಾ, ಅನಿ ತೆನಿ ಆಯಿಕ್ತ್ಯಾತ್ ಖರೆ ತೆಂಕಾ ಕಳಿನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:13
12 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ದಂಗೆಕೋರರ ಮಧ್ಯೆ ವಾಸಿಸುತ್ತೀ. ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ; ಅವರಿಗೆ ಕಿವಿಗಳಿದ್ದರೂ ಕೇಳುವದಿಲ್ಲ; ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ.


ಬುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನ್ನು ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.


ನೀವಾದರೋ ಧನ್ಯರು. ನಿಮಗೆ ಕಾಣುವ ಸಂಗತಿಗಳನ್ನೂ ನಿಮಗೆ ಹೇಳುವ ವಿಷಯಗಳನ್ನೂ ಅರ್ಥಮಾಡಿಕೊಳ್ಳಬಲ್ಲಿರಿ.


ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೋ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ.


ಆಗ ನಾನು (ಯೆಹೆಜ್ಕೇಲ್), “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಇದನ್ನೆಲ್ಲಾ ಹೇಳಿದರೆ, ನಿಗೂಢವಾದ ಕಥೆಗಳನ್ನು ಹೇಳುತ್ತಿದ್ದೇನೆಂದು ಹೇಳುವರು. ಮತ್ತು ನನಗೆ ಇನ್ನೆಂದಿಗೂ ಕಿವಿಗೊಡುವದಿಲ್ಲ” ಎಂದು ಹೇಳಿದೆನು.


ಪವಿತ್ರ ಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ಜನರಿಗೆ ಅರ್ಥವಾಗದಂತೆ ದೇವರು ಅವರನ್ನು ಮಂಕುಗೊಳಿಸಿದನು.” “ಅವರು ಇಂದಿನವರೆಗೂ ಕಣ್ಣಿದ್ದರೂ ಕಾಣದಂತೆ ಕಿವಿಯಿದ್ದರೂ ಕೇಳದಂತೆ ದೇವರು ಅವುಗಳನ್ನು ಮುಚ್ಚಿಬಿಟ್ಟನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು