Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:20 - ಪರಿಶುದ್ದ ಬೈಬಲ್‌

20 “ಬಂಡೆನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಅಂಗೀಕರಿಸುವ ಮನುಷ್ಯನೇ ಬೀಜ ಬಿದ್ದ ಬಂಡೆನೆಲವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬೇರೊಬ್ಬನು ಈ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಒಬ್ಬನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕಲ್ಲು ನೆಲದ ಮೇಲೆ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಗುಂಡ್ಯಾಚೊ ತಳಾಪ್ ಹೊತ್ತ್ಯಾ ಜಾಗ್ಯಾರ್ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ದೆವಾಚ್ಯಾ ಗೊಸ್ಟಿಯಾ ಆಯ್ಕಲ್ಲ್ಯಾ ತನ್ನಾ ಕುಶಿನ್ ಸ್ವಿಕಾರ್ ಕರ್‍ತಲ್ಯಾ ಲೊಕಾಂಚ್ಯಾ ಬಾಸೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:20
17 ತಿಳಿವುಗಳ ಹೋಲಿಕೆ  

ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ.


ಆದರೆ ಆಕೆಗೆ ಸಾಧ್ಯವಾಗಲಿಲ್ಲ. ಹೆರೋದನು ಯೋಹಾನನನ್ನು ಕೊಲ್ಲಿಸಲು ಭಯಪಟ್ಟನು. ಯೋಹಾನನನ್ನು ಒಳ್ಳೆಯವನೆಂದೂ ಪವಿತ್ರನೆಂದೂ ಜನರೆಲ್ಲರು ನಂಬಿದ್ದಾರೆಂಬುದು ಹೆರೋದನಿಗೆ ತಿಳಿದಿತ್ತು. ಆದ್ದರಿಂದ ಹೆರೋದನು ಯೋಹಾನನನ್ನು ರಕ್ಷಿಸಿದನು. ಹೆರೋದನು ಯೋಹಾನನ ಉಪದೇಶವನ್ನು ಕೇಳಿದಾಗಲೆಲ್ಲಾ ಗಲಿಬಿಲಿಗೊಳ್ಳುತ್ತಿದ್ದನು. ಆದರೂ ಅವನ ಉಪದೇಶವನ್ನು ಸಂತೋಷದಿಂದ ಕೇಳುತ್ತಿದ್ದನು.


ಆಗ ಅವರು ದಿನನಿತ್ಯ ನನ್ನನ್ನು ಆರಾಧಿಸಲು ಬರುವರು. ಜನರು ನನ್ನ ವಿಧಿಗಳನ್ನು ಕಲಿತುಕೊಳ್ಳಲು ಇಷ್ಟಪಡುವರು. ಆಗ ಅವರು ಸರಿಯಾಗಿ ಜೀವಿಸುವ ಜನಾಂಗವಾಗುವರು. ಅವರು ದೇವರ ಒಳ್ಳೆಯ ಆಜ್ಞೆಗಳನ್ನು ಬಿಡದೆ ಅನುಸರಿಸುವರು. ಅವರು ಪಕ್ಷಪಾತವಿಲ್ಲದೆ ನ್ಯಾಯತೀರಿಸಲು ನನ್ನನ್ನು ಕೇಳುವರು. ದೇವರ ನಿರ್ಧಾರವನ್ನು ಕೇಳಲು ಆತನ ಬಳಿಗೆ ಹೋಗಲು ಇಚ್ಛಿಸುವರು.


ಯಾಜಕನಾದ ಯೆಹೋಯಾದನು ಜೀವದಿಂದಿರುವ ತನಕ ಯೆಹೋವಾಷನು ಯೆಹೋವನಿಗೆ ಯೋಗ್ಯವಾಗಿ ನಡೆದುಕೊಂಡನು.


ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು.


ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.


ಆಗ ಅರಸನಾದ ಯೆಹೋವಾಷನು ಮಹಾಯಾಜಕನಾದ ಯೆಹೋಯಾದನನ್ನು ಕರೆದು, “ದೇವಾಲಯಕ್ಕೆ ಕೊಡಬೇಕಾದ ಹಣವನ್ನು ಯೆಹೂದ ಮತ್ತು ಜೆರುಸಲೇಮಿನ ಜನರಿಂದ ಲೇವಿಯರು ಸಂಗ್ರಹಿಸಿಕೊಂಡು ಬರಲು ನೀನೇಕೆ ಅವರನ್ನು ಒತ್ತಾಯಿಸಲಿಲ್ಲ? ಮೋಶೆಯೂ ಇಸ್ರೇಲರೂ ಆ ಹಣವನ್ನು ಪವಿತ್ರ ಗುಡಾರಕ್ಕಾಗಿ ಉಪಯೋಗಿಸುತ್ತಿರಲಿಲ್ಲವೇ?” ಎಂದು ಕೇಳಿದನು.


ಹೌದು, ಕೇಳುತ್ತಲೇ ಇರುವವನು ಪಡೆದುಕೊಳ್ಳುತ್ತಾನೆ, ಹುಡುಕುತ್ತಲೇ ಇರುವವನು ಕಂಡುಕೊಳ್ಳುತ್ತಾನೆ, ತಟ್ಟುತ್ತಲೇ ಇರುವವನಿಗೆ ಬಾಗಿಲು ತೆರೆಯುತ್ತದೆ.


“ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ.


ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು