Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:27 - ಪರಿಶುದ್ದ ಬೈಬಲ್‌

27 ಆಗ ಆ ರೈತನ ಸೇವಕರು ಅವನ ಬಳಿಗೆ ಬಂದು, ‘ನಿನ್ನ ಹೊಲದಲ್ಲಿ ನೀನು ಒಳ್ಳೆಯ ಬೀಜ ಬಿತ್ತಿದೆ. ಹಣಜಿ ಎಲ್ಲಿಂದ ಬಂತು?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಆಳುಗಳು ತಮ್ಮ ಯಜಮಾನನ ಬಳಿಗೆ ಬಂದು, ‘ಸ್ವಾಮೀ, ನಿಮ್ಮ ಹೊಲದಲ್ಲಿ ಬಿತ್ತಿದ್ದು ಉತ್ತಮವಾದ ಗೋದಿ ಅಲ್ಲವೆ? ಜೊತೆಗೆ ಕಳೆಯೂ ಕಾಣಿಸಿಕೊಂಡಿದೆಯಲ್ಲಾ. ಅದೆಲ್ಲಿಂದ ಬಂತು?’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು - ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜ ಬಿತ್ತಿದಿಯಲ್ಲಾ; ಹಣಜಿ ಎಲ್ಲಿಂದ ಬಂತು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಮನೆಯ ಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, ‘ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದೆಯಲ್ಲಾ? ಆದರೆ ಈ ಕಳೆಯು ಎಲ್ಲಿಂದ ಬಂತು?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ತ್ಯಾ ಮಾನ್ಸಾಚಿ ಅಳಾ ಯೆಲಿ. ಅನಿ “ಧನಿಯಾಕ್, ತುಮ್ಚ್ಯಾ ಶೆತಾತ್ ತುಮಿ ಬರೆ ಭ್ಹಿಂಯ್ ಪೆರಲ್ಲ್ಯಾಶಿ ನ್ಹಯ್; ತರ್ ಕಳೆ ಖೈತ್ನಾ ಯೆಲೆ?” ಮನುನ್ ತ್ಯಾ ಮಾನ್ಸಾಕ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:27
17 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಡಕುಗಳನ್ನು ಉಂಟುಮಾಡುವ ಜನರ ವಿಷಯದಲ್ಲಿ ನೀವು ಬಹು ಜಾಗ್ರತೆಯಿಂದ ಇರಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇತರರ ನಂಬಿಕೆಯನ್ನು ಕೆಡಿಸುವಂಥವರ ಬಗ್ಗೆ ಬಹು ಎಚ್ಚರದಿಂದಿರಿ. ನೀವು ಕಲಿತಿರುವ ಉಪದೇಶಕ್ಕೆ ಅವರು ವಿರುದ್ಧವಾಗಿದ್ದಾರೆ. ನೀವು ಅವರಿಂದ ದೂರವಿರಿ.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ಆದರೆ ಪ್ರತಿಯೊಂದು ವಿಷಯದಲ್ಲಿಯೂ ನಾವು ದೇವರ ಸೇವಕರೆಂಬುದನ್ನು ತೋರ್ಪಡಿಸುತ್ತೇವೆ. ನಾವು ಸಂಕಟಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ


ತಿಮೊಥೆಯನು ನಿಮ್ಮ ಬಳಿಗೆ ಬರಬಹುದು. ಅವನು ನಿಮ್ಮೊಂದಿಗಿರುವಾಗ ಅವನಿಗೆ ಚಿಂತೆಯಾಗದಂತೆ ನೋಡಿಕೊಳ್ಳಿರಿ. ನಾನು ಪ್ರಭುವಿಗೋಸ್ಕರ ಕೆಲಸ ಮಾಡುತ್ತಿರುವಂತೆ ಅವನು ಸಹ ಮಾಡುತ್ತಿದ್ದಾನೆ.


ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.


ಆ ರಾತ್ರಿ ಜನರೆಲ್ಲರೂ ನಿದ್ರಿಸುತ್ತಿದ್ದಾಗ ಅವನ ವೈರಿ ಬಂದು ಗೋಧಿಯ ನಡುವೆ ಹಣಜಿಯನ್ನು ಬಿತ್ತಿ ಹೊರಟುಹೋದನು.


ಬಳಿಕ ಗೋಧಿ ಬೆಳೆದು ತೆನೆಬಿಟ್ಟಿತು. ಅದರೊಡನೆ ಹಣಜಿ ಸಹ ಬೆಳೆಯಿತು.


“ಆ ಮನುಷ್ಯನು, ‘ಒಬ್ಬ ವೈರಿ ಹಣಜಿಯನ್ನು ಬಿತ್ತಿದ್ದಾನೆ’ ಎಂದು ಉತ್ತರಕೊಟ್ಟನು. “ಆ ಸೇವಕರು ‘ನಾವು ಹೋಗಿ ಹಣಜಿಗಳನ್ನು ಕೀಳಬೇಕೆ?’ ಎಂದು ಕೇಳಿದರು.


“ಪರಲೋಕರಾಜ್ಯವು ಒಬ್ಬ ದ್ರಾಕ್ಷಿತೋಟದ ಯಜಮಾನನಿಗೆ ಹೋಲಿಕೆಯಾಗಿದೆ. ಒಂದು ಮುಂಜಾನೆ ಅವನು ತನ್ನ ತೋಟದಲ್ಲಿ ಕೆಲಸ ಮಾಡಲು ಬೇರೆ ಕೂಲಿಯಾಳುಗಳನ್ನು ಕರೆಯುವುದಕ್ಕೆ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು