Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:31 - ಪರಿಶುದ್ದ ಬೈಬಲ್‌

31 ನಂತರ ಯೇಸು ಜನರಿಗೆ ಮತ್ತೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯ ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ತನ್ನ ಹೊಲದಲ್ಲಿ ಬಿತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕರಾಜ್ಯವು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು, ಒಬ್ಬ ಮನುಷ್ಯನು ಸಾಸಿವೆ ಕಾಳನ್ನು ತೆಗೆದುಕೊಂಡುಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದಕ್ಕೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಜೆಜುನ್ ತೆಂಕಾ ಅನಿಎಕ್ ಕಾನಿ ಸಾಂಗಟ್ಲ್ಯಾನ್, “ಸರ್ಗಾಚೊ ರಾಜ್ ಮಟ್ಲ್ಯಾರ್, ಎಕ್ ಮಾನುಸ್ ಎಕ್ ಸಾಸಾವಾಚಿ ಭ್ಹಿಂಯ್ ಘೆತಾ ಅನಿ ಅಪ್ನಾಚ್ಯಾ ಶೆತಾತ್ ಉಗಾತ್ ಘಾಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:31
8 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು.


ಪ್ರಭುವು ಅವರಿಗೆ ಹೀಗೆಂದನು: “ನಿಮ್ಮ ನಂಬಿಕೆ ಸಾಸಿವೆ ಕಾಳಷ್ಟು ದೊಡ್ಡದಾಗಿದ್ದರೆ, ನೀವು ಈ ಅತ್ತಿಮರಕ್ಕೆ, ‘ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿದರೂ ಅದು ನಿಮಗೆ ವಿಧೇಯವಾಗುತ್ತದೆ.


ಬಳಿಕ ಯೇಸು ಅವರಿಗೆ ಇನ್ನೊಂದು ಸಾಮ್ಯದ ಮೂಲಕ ಬೋಧಿಸಿದನು. ಅದೇನೆಂದರೆ: “ಪರಲೋಕರಾಜ್ಯ ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ರೈತನಂತಿದೆ.


ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ಮನುಷ್ಯನು ಒಂದು ದ್ರಾಕ್ಷಿತೋಟವನ್ನು ಮಾಡಿ ಅದನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟನು. ಬಳಿಕ ಅವನು ಅಲ್ಲಿಂದ ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.


ಯೇಸು ಪ್ರಯಾಣ ಮಾಡುತ್ತಾ ಜೆರುಸಲೇಮಿನ ಸಮೀಪಕ್ಕೆ ಬಂದನು. ಕೆಲವು ಜನರು ದೇವರ ರಾಜ್ಯವು ಬೇಗನೆ ಬರಲಿದೆ ಎಂದುಕೊಂಡರು.


ಅವನು ಇನ್ನೂ ಒಂದು ಸಾವಿರ ಮೊಳ ದೂರ ಅಳೆದನು. ಅಲ್ಲಿ ನೀರು ಹೆಚ್ಚಿದ್ದು ನನ್ನಿಂದ ದಾಟಲು ಆಗದಷ್ಟು ಆಳವಿತ್ತು. ಅದು ನದಿಯಾಗಿತ್ತು. ಆ ನೀರಿನಲ್ಲಿ ಈಜಾಡಬಹುದಾಗಿತ್ತು. ದಾಟಲಾಗದ ಆಳವಾದ ಹೊಳೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು