ಮತ್ತಾಯ 13:33 - ಪರಿಶುದ್ದ ಬೈಬಲ್33 ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತಕ್ಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಜೆಜುನ್ ತೆಂಕಾ, ಅನಿಎಕ್ ಕಾನಿ ಸಾಂಗಟ್ಲ್ಯಾನ್: “ಸರ್ಗಾಚೊ ರಾಜ್ ಮಟ್ಲ್ಯಾರ್, ಎಕ್ ಬಾಯ್ಕೊಮನುಸ್ ಸೊಡಾ ಘೆತಾ ಅನಿ ತಿನ್ ಶೆರ್ ಪಿಟ್ಟಾತ್ ಘಾಲುನ್ ಥವ್ತಾ ಅನಿ ತೆ ಪಿಟ್ಟ್ ಸಗ್ಳೆ ಫುಗ್ತಾ.” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಗಿದ್ಯೋನನು ಒಳಗೆ ಹೋಗಿ ಒಂದು ಆಡಿನ ಮರಿಯನ್ನು ಬೇಯಿಸಿದನು. ಅವನು ಸುಮಾರು ಇಪ್ಪತ್ತು ಸೇರಿನಷ್ಟು ಹಿಟ್ಟನ್ನು ತೆಗೆದುಕೊಂಡು ಹುಳಿಯಿಲ್ಲದ ರೊಟ್ಟಿಯನ್ನು ಮಾಡಿದನು. ತರುವಾಯ ಗಿದ್ಯೋನನು ಆ ಮಾಂಸವನ್ನು ಒಂದು ಬುಟ್ಟಿಯಲ್ಲಿಟ್ಟನು, ಮಾಂಸ ಬೇಯಿಸಿದ ನೀರನ್ನು ಒಂದು ಪಾತ್ರೆಯಲ್ಲಿ ಹಾಕಿದನು. ಗಿದ್ಯೋನನು ಆ ಮಾಂಸವನ್ನೂ ಮಾಂಸ ಬೇಯಿಸಿದ ನೀರನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತೆಗೆದುಕೊಂಡು ಬಂದನು. ಗಿದ್ಯೋನನು ಏಲಾ ಮರದ ಕೆಳಗೆ ಯೆಹೋವನಿಗೆ ಆಹಾರವನ್ನು ಕೊಟ್ಟನು.
ಅಮ್ನೋನನು ಹಾಸಿಗೆಯಲ್ಲಿ ಮಲಗಿ ಕಾಯಿಲೆಯವನಂತೆ ನಟಿಸಿದನು. ಅವನನ್ನು ನೋಡಲು ರಾಜನಾದ ದಾವೀದನು ಅಲ್ಲಿಗೆ ಬಂದನು. ಅಮ್ನೋನನು ರಾಜನಾದ ದಾವೀದನಿಗೆ, “ದಯವಿಟ್ಟು ನನ್ನ ಸೋದರಿಯಾದ ತಾಮಾರಳನ್ನು ಒಳಕ್ಕೆ ಕರೆಯಿರಿ. ನಾನು ನೋಡುತ್ತಿರುವಂತೆ ಅವಳು ನನಗಾಗಿ ಎರಡು ಸಿಹಿ ರೊಟ್ಟಿಗಳನ್ನು ತಯಾರಿಸಲಿ. ಅವಳ ಕೈಗಳಿಂದ ಮಾಡಿದ ರೊಟ್ಟಿಗಳನ್ನೇ ನಾನು ತಿನ್ನುತ್ತೇನೆ” ಎಂದು ಬೇಡಿಕೊಂಡನು.