Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:52 - ಪರಿಶುದ್ದ ಬೈಬಲ್‌

52 ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಆಗ ಆತನು ಅವರಿಗೆ - ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು ಮನೇಯಜಮಾನನಿಗೆ ಹೋಲಿಕೆಯಾಗಿದ್ದಾನೆ. ಅವನು ತನ್ನ ಬೊಕ್ಕಸದೊಳಗಿಂದ ಹೊಸ ವಸ್ತುಗಳನ್ನೂ ಹಳೇ ವಸ್ತುಗಳನ್ನೂ ಹೊರಗೆ ತರುತ್ತಿರುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ತನ್ನಾ ಜೆಜುನ್, “ತಸೆಮಟ್ಲ್ಯಾರ್, ತನ್ನಾ ಸರ್‍ಗಾಚ್ಯಾ ರಾಜಾತ್ ಹರಿ ಎಕ್ ಖಾಯ್ದೆ ಶಿಕ್ವುತಲೊ ಎಕ್ ಸಿಸ್ ಹೊತಾ ದೆವಾಚ್ಯಾ ರಾಜಾಚೆ ಮನುನ್ ಹೊತ್ತೆ ಸಾಮಾನಾ ಥವ್ತಲ್ಯಾ ಖೊಲಿತ್ನಾ ನ್ಹವಿ ಅನಿ ಜುನ್ನಿ ಸಾಮಾನಾ ಭಾಯ್ರ್ ಕಾಡ್ತಲ್ಯಾ ಘರಾಚ್ಯಾ ವ್ಹಡಿಲಾ ಸರ್‍ಕೊ,” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:52
31 ತಿಳಿವುಗಳ ಹೋಲಿಕೆ  

ನಾವು ಬೋಧಿಸುವ ಸತ್ಯವಾಕ್ಯವನ್ನು ಅವನು ನಂಬಿಗಸ್ತಿಕೆಯಿಂದ ಅನುಸರಿಸಬೇಕು. ಸತ್ಯವಾದ ಮತ್ತು ಯೋಗ್ಯವಾದ ಬೋಧನೆಯಿಂದ ಅವನು ಜನರಿಗೆ ಸಹಾಯ ಮಾಡುವವನಾಗಿರಬೇಕು. ಅವನು ಸತ್ಯಬೋಧನೆಗೆ ವಿರುದ್ಧವಾದ ಜನರಿಗೆ ಅವರ ತಪ್ಪನ್ನು ತೋರಿಸಿಕೊಡುವ ಸಾಮರ್ಥ್ಯ ಉಳ್ಳವನಾಗಿರಬೇಕು.


ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.


ಜ್ಞಾನಿಯ ಮಾತುಗಳು ತಿಳುವಳಿಕೆಯನ್ನು ಹರಡುತ್ತವೆ. ಮೂಢರ ಮಾತುಗಳು ಕೇಳಲು ಯೋಗ್ಯವಲ್ಲ.


ಅರಸನಾದ ಅರ್ತಷಸ್ತನೆಂಬ ನಾನು ಈ ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಈ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು.


ಧರ್ಮಶಾಸ್ತ್ರವನ್ನು ಓದಲೂ, ಅಭ್ಯಾಸಿಸಲೂ ಮತ್ತು ಅದಕ್ಕೆ ವಿಧೇಯನಾಗಲು ಎಜ್ರನು ತನ್ನ ಸಮಯವನ್ನೆಲ್ಲಾ ವಿನಿಯೋಗಿಸಿದನು. ಯೆಹೋವನ ಆಜ್ಞೆಗಳನ್ನು, ವಿಧಿನಿಯಮಗಳನ್ನು ಇಸ್ರೇಲ್ ಜನರಿಗೆ ಕಲಿಸಬೇಕೆಂಬ ಇಚ್ಫೆ ಅವನಲ್ಲಿತ್ತು. ಯೆಹೋವನ ಕಟ್ಟಳೆಗಳಿಗೆ ವಿಧೇಯರಾಗುವಂತೆ ಇಸ್ರೇಲರೆಲ್ಲರಿಗೆ ಸಹಾಯ ಮಾಡಬೇಕೆಂಬ ಅಭಿಲಾಷೆಯು ಅವನಲ್ಲಿತ್ತು.


ಆದಕಾರಣ ದೇವರ ಜ್ಞಾನವು ಹೇಳಿದ್ದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು. ನನ್ನ ಕೆಲವು ಪ್ರವಾದಿಗಳು ಮತ್ತು ಅಪೊಸ್ತಲರು ಕೆಡುಕರಿಂದ ಹತರಾಗುವರು. ಬೇರೆ ಕೆಲವರು ಸಂಕಟಕ್ಕೆ ಗುರಿಯಾಗುವರು.’


ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಉಪದೇಶಕರನ್ನೂ ಕಳುಹಿಸುತ್ತೇನೆ. ನೀವು ಅವರಲ್ಲಿ ಕೆಲವರನ್ನು ಕೊಲ್ಲುವಿರಿ; ಇನ್ನು ಕೆಲವರನ್ನು ಶಿಲುಬೆಗೇರಿಸುವಿರಿ; ಇತರ ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಹೊಡೆಯುವಿರಿ; ನೀವು ಅವರನ್ನು ಊರಿಂದ ಊರಿಗೆ ಅಟ್ಟಿಬಿಡುವಿರಿ.


ಬಾಯಿಮಾತುಗಳು ಆಳವಾದ ನೀರಿನಂತಿರಲು ಸಾಧ್ಯ; ಆದರೆ ಜ್ಞಾನದ ಮೂಲವು ನುಗ್ಗಿಬರುವ ತೊರೆಯಂತಿದೆ.


ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.


ನೀವು ಎಪಫ್ರನಿಂದ ದೇವರ ಕೃಪೆಯ ಬಗ್ಗೆ ತಿಳಿದುಕೊಂಡಿರಿ. ಅವನು ನಮ್ಮ ಜೊತೆಯಲ್ಲಿಯೇ ಸೇವೆ ಮಾಡುತ್ತಿದ್ದಾನೆ. ನಾವು ಅವನನ್ನು ಪ್ರೀತಿಸುತ್ತೇವೆ. ಅವನು ನಮಗೋಸ್ಕರ ಕ್ರಿಸ್ತನ ನಂಬಿಗಸ್ತ ಸೇವಕನಾಗಿದ್ದಾನೆ.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


“ನಾನು ನಿಮಗೆ ಹೊಸ ಆಜ್ಞೆಯನ್ನು ಕೊಡುತ್ತೇನೆ. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು.


ಕಾಮಜನಕ ಸಸಿಗಳು ಸುವಾಸನೆ ಬೀರುತ್ತವೆ. ನನ್ನ ಪ್ರಿಯನೇ, ನಾನು ನಿನಗೋಸ್ಕರ ಉಳಿಸಿದ ರುಚಿಕರವಾದ ಬಗೆಬಗೆಯ ಹೊಸ ಮತ್ತು ಹಳೆ ಹಣ್ಣುಗಳು ನಮ್ಮ ಬಾಗಿಲ ಬಳಿಯಲ್ಲಿವೆ.


ನೀತಿವಂತನ ಕಾರ್ಯಗಳು ಜೀವವುಳ್ಳ ಮರಗಳಂತಿವೆ. ಜ್ಞಾನಿಯು ಆತ್ಮಗಳನ್ನು ಗೆದ್ದುಕೊಳ್ಳುವನು.


ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.


ನಾನು ಬರೆದಿರುವ ಈ ಸಂಗತಿಗಳನ್ನು ನೀವು ಓದಿದರೆ ಕ್ರಿಸ್ತನ ರಹಸ್ಯವಾದ ಸತ್ಯವನ್ನು ನಾನು ನಿಜವಾಗಿಯೂ ಅರ್ಥಮಾಡಿಕೊಂಡಿದ್ದೇನೆ ಎಂಬುದು ನಿಮಗೇ ತಿಳಿಯುತ್ತದೆ.


ದುಃಖಿತರಂತೆ ಕಂಡರೂ ಯಾವಾಗಲೂ ಉಲ್ಲಾಸಿಸುವವರಾಗಿದ್ದೇವೆ; ಬಡವರಂತೆ ಕಂಡರೂ ಅನೇಕರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿ ಮಾಡುತ್ತಿದ್ದೇವೆ; ಏನೂ ಇಲ್ಲದವರಂತೆ ಕಂಡರೂ ವಾಸ್ತವವಾಗಿ ಎಲ್ಲವನ್ನೂ ಹೊಂದಿದವರಾಗಿದ್ದೇವೆ.


ಅವನು ಹೊಸ ವಿಶ್ವಾಸಿಯಾಗಿರಬಾರದು. ಹೊಸ ವಿಶ್ವಾಸಿಯನ್ನು ಸಭಾಧ್ಯಕ್ಷನನ್ನಾಗಿ ಮಾಡಿದರೆ, ಅವನು ಗರ್ವಿಷ್ಠನಾಗುವನು. ಸೈತಾನನು ತನ್ನ ಗರ್ವದ ನಿಮಿತ್ತ ಶಿಕ್ಷೆಗೆ ಒಳಗಾದಂತೆ ಇವನೂ ಶಿಕ್ಷೆಗೆ ಗುರಿಯಾಗುವನು.


ಯೇಸು ತನ್ನ ಶಿಷ್ಯರಿಗೆ, “ನೀವು ಈ ವಿಷಯಗಳನ್ನೆಲ್ಲಾ ಅರ್ಥಮಾಡಿಕೊಂಡಿರೋ?” ಎಂದು ಕೇಳಿದನು. ಅದಕ್ಕೆ ಶಿಷ್ಯರು, “ನಾವು ಅರ್ಥಮಾಡಿಕೊಂಡೆವು” ಎಂದು ಉತ್ತರಕೊಟ್ಟರು.


ಯೇಸು ಈ ಸಾಮ್ಯಗಳ ಮೂಲಕ ಬೋಧಿಸಿದ ನಂತರ ಅಲ್ಲಿಂದ ತನ್ನ ಸ್ವಂತ ಊರಿಗೆ ಹೋದನು.


ಆದ್ದರಿಂದ ನೀವು ಹೋಗಿ, ಲೋಕದಲ್ಲಿರುವ ಜನರೆಲ್ಲರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ. ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ಅವರಿಗೆಲ್ಲ ದೀಕ್ಷಾಸ್ನಾನ ಮಾಡಿಸಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು