Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:6 - ಪರಿಶುದ್ದ ಬೈಬಲ್‌

6 ಆದರೆ ಬಿಸಿಲೇರಿದಾಗ ಆ ಮೊಳಕೆಗಳು ಒಣಗಿಹೋದವು. ಏಕೆಂದರೆ ಅವುಗಳಿಗೆ ಆಳವಾದ ಬೇರಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಬಿಸಿಲೇರಿದಾಗ ಬಾಡಿದವು. ಬೇರು ಬಲವಾಗಿಲ್ಲದ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಬಿಸಿಲೇರಿದಾಗ ಬಾಡಿ ಬೇರಿಲ್ಲದ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ನಿಂಬಾರ್ ಯೆಲ್ಲ್ಯಾ ತನ್ನಾ ತಿ ಕವ್ಳಿ ಝಾಡಾ ಭಾಜುನ್ ಗೆಲಿ ಕಶ್ಯಾಕ್ ಮಟ್ಲ್ಯಾರ್ ತೆಂಚಿ ಮುಳಾ ಮಾಟಿತ್ ಭುತ್ತುರ್ ಉತ್ರುಕ್‍ನತ್ತಿ, ತಸೆಮನುನ್ ತಿ ಝಾಡಾ ಬಾಡುನ್ ವಾಳುನ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:6
12 ತಿಳಿವುಗಳ ಹೋಲಿಕೆ  

ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು.


ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.


ನಿಮ್ಮ ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಬೇಕೆಂದು ಪ್ರಾರ್ಥಿಸುತ್ತೇನೆ. ನಿಮ್ಮ ಜೀವಿತವು ಪ್ರೀತಿಯಲ್ಲಿ ಬಲವಾಗಿ ಬೇರೂರಿರಬೇಕೆಂದು ಮತ್ತು ಪ್ರೀತಿಯ ಮೇಲೆ ಕಟ್ಟಲ್ಪಟ್ಟಿರಬೇಕೆಂದು ಪ್ರಾರ್ಥಿಸುತ್ತೇನೆ.


ಬಂಡೆಯ ಮೇಲೆ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯ ಕೇಳಿ ಸಂತೋಷದಿಂದ ಸ್ವೀಕರಿಸಿಕೊಳ್ಳುತ್ತಾರೆ. ಆದರೆ ಅವರಿಗೆ ಆಳವಾದ ಬೇರುಗಳಿರುವುದಿಲ್ಲ. ಅವರು ಸ್ವಲ್ಪಕಾಲ ಮಾತ್ರವೇ ನಂಬುತ್ತಾರೆ. ಬಳಿಕ ತೊಂದರೆಯೇನಾದರೂ ಬಂದರೆ ತಮ್ಮ ನಂಬಿಕೆಯನ್ನು ಕಳೆದುಕೊಂಡು ದೇವರಿಂದ ದೂರ ಸರಿಯುತ್ತಾರೆ.


ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.


ಆ ಜನರಿಗೆ ಮತ್ತೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಸೂರ್ಯನ ತಾಪವಾಗಲಿ ಇರುವುದಿಲ್ಲ. ಅವರನ್ನು ಯಾವ ತಾಪವೂ ಸುಡುವುದಿಲ್ಲ.


ಕ್ರಿಸ್ತನನ್ನು ಮಾತ್ರ ನೀವು ಅವಲಂಬಿಸಬೇಕು. ಜೀವವೂ ಶಕ್ತಿಯೂ ಆತನಿಂದಲೇ ಬರುತ್ತವೆ. ನಿಮಗೆ ಸತ್ಯವನ್ನು ಉಪದೇಶಿಸಲಾಗಿದೆ. ನೀವು ಆ ಸತ್ಯ ಬೋಧನೆಯಲ್ಲಿ ದೃಢವಾಗಿ ನೆಲೆಗೊಂಡಿರಬೇಕು ಮತ್ತು ದೇವರಿಗೆ ಸಲ್ಲತಕ್ಕ ಕೃತಜ್ಞತಾಸ್ತುತಿಯಿಂದ ತುಂಬಿದವರಾಗಿರಬೇಕು.


ಕೆಲವು ಬೀಜಗಳು ಬಂಡೆಯ ನೆಲದಲ್ಲಿ ಬಿದ್ದವು. ಅಲ್ಲಿಯ ನೆಲದಲ್ಲಿ ಸಾಕಷ್ಟು ಮಣ್ಣಿಲ್ಲದಿದ್ದುದರಿಂದ ಬೀಜಗಳು ಬೇಗ ಮೊಳೆತವು.


ಬೇರೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಒಳ್ಳೆಯ ಗಿಡಗಳು ಬೆಳೆಯುವುದನ್ನು ತಡೆದುಬಿಟ್ಟವು.


ಆದರೆ ಸೂರ್ಯನು ಮೇಲೇರಿದಾಗ, ಆಳವಾದ ಬೇರಿಲ್ಲದ ಕಾರಣ ಆ ಸಸಿಗಳು ಒಣಗಿಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು