Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:1 - ಪರಿಶುದ್ದ ಬೈಬಲ್‌

1 ಆ ಕಾಲದಲ್ಲಿ ಹೆರೋದನು ಗಲಿಲಾಯದಲ್ಲಿ ಆಳುತ್ತಿದ್ದನು. ಜನರು ಯೇಸುವಿನ ಕುರಿತು ಹೇಳುತ್ತಿದ್ದ ಸಂಗತಿಗಳೆಲ್ಲ ಅವನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿಯ ಸಮಾಚಾರ ಆಗ ಗಲಿಲೇಯ ಪ್ರಾಂತ್ಯಕ್ಕೆ ಸಾಮಂತರಾಜನಾಗಿದ್ದ ಹೆರೋದನ ಕಿವಿಗೆ ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತ್ಯಾ ಎಳಾರ್ ಗಾಲಿಲಿಯಾಚೊ ರಾಜಾ ಹೊವ್ನ್ ಹೊತ್ತ್ಯಾ ಹೆರೊದಾನ್ ಜೆಜುಚ್ಯಾ ವಿಶಯಾತ್ ಆಯಿಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:1
15 ತಿಳಿವುಗಳ ಹೋಲಿಕೆ  

ಚಕ್ರವರ್ತಿಯಾದ ತಿಬೇರಿಯಸ್ ಸೀಸರನ ಆಳ್ವಿಕೆಯ ಹದಿನೈದನೇ ವರ್ಷ ಅದಾಗಿತ್ತು. ಆಗ, ಪೊಂತ್ಯ ಪಿಲಾತನು ಜುದೇಯ ಪ್ರಾಂತ್ಯಕ್ಕೂ ಹೆರೋದನು ಗಲಿಲಾಯಕ್ಕೂ ಹೆರೋದನ ಸಹೋದರನಾದ ಫಿಲಿಪ್ಪನು ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೂ ಲೂಸನ್ಯನು ಅಬಿಲೇನೆ ಪ್ರಾಂತ್ಯಕ್ಕೂ ಅಧಿಪತಿಯಾಗಿದ್ದರು.


ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಈ ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಈ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ.


ಯೇಸು ಅವರಿಗೆ, “ಜಾಗರೂಕರಾಗಿರಿ! ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ಬಗ್ಗೆ ಎಚ್ಚರವಹಿಸಿರಿ” ಎಂದು ಎಚ್ಚರಿಸಿದನು.


ಇದಲ್ಲದೆ ಹೆರೋದನು ಸಹ ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ಹೆರೋದನು ಯೇಸುವನ್ನು ನಮ್ಮ ಬಳಿಗೆ ಮತ್ತೆ ಕಳುಹಿಸಿದನು. ನೋಡಿರಿ, ಯೇಸು ಯಾವ ತಪ್ಪನ್ನೂ ಮಾಡಿಲ್ಲ. ಅವನಿಗೆ ಮರಣದಂಡನೆ ಆಗಬಾರದು.


ಆ ಕಾಲದಲ್ಲಿ ರಾಜ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸಿಸತೊಡಗಿ,


ರಾಜ್ಯಪಾಲ ಹೆರೋದನು ತನ್ನ ಸಹೋದರನ ಹೆಂಡತಿಯಾದ ಹೆರೋದ್ಯಳೊಂದಿಗೆ ಹೊಂದಿದ್ದ ಅನೈತಿಕ ಸಂಬಂಧವನ್ನು ಮತ್ತು ಹೆರೋದನು ಮಾಡಿದ್ದ ಅನೇಕ ದುಷ್ಕೃತ್ಯಗಳನ್ನು ಯೋಹಾನನು ಖಂಡಿಸಿದನು.


ಈ ಸುದ್ದಿಯು ಸುತ್ತಮುತ್ತಲಿನ ಪ್ರದೇಶದಲ್ಲೆಲ್ಲಾ ಹಬ್ಬಿತು.


ಆದರೆ ಆ ಕುರುಡರು ಅಲ್ಲಿಂದ ಹೊರಟುಹೋಗಿ ಯೇಸುವಿನ ಸುದ್ದಿಯನ್ನು ಆ ಪ್ರದೇಶದ ಸುತ್ತಮುತ್ತಲೆಲ್ಲಾ ಹಬ್ಬಿಸಿದರು.


ಆ ಜನರ ಅವಿಶ್ವಾಸದ ಕಾರಣ ಆತನು ಅಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲಿಲ್ಲ.


ಇದಲ್ಲದೆ ಕೂಜನ (ಹೆರೋದನ ಸಹಾಯಕ) ಹೆಂಡತಿಯಾದ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕ ಸ್ತ್ರೀಯರು ಇದ್ದರು. ಈ ಸ್ತ್ರೀಯರು ಯೇಸುವಿಗೂ ಆತನ ಅಪೊಸ್ತಲರಿಗೂ ತಮ್ಮ ಸ್ವಂತ ಹಣದಿಂದ ಸಹಾಯ ಮಾಡುತ್ತಿದ್ದರು.


ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು