Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:10 - ಪರಿಶುದ್ದ ಬೈಬಲ್‌

10 ಸೆರೆಮನೆಗೆ ಹೋಗಿ ಯೋಹಾನನ ತಲೆಯನ್ನು ಕತ್ತರಿಸಿಕೊಂಡು ಬರಲು ಅವನು ಸೈನಿಕರನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದರಂತೆಯೇ ಆಳುಗಳನ್ನು ಕಳುಹಿಸಿ, ಸೆರೆಮನೆಯಲ್ಲಿದ್ದ ಯೊವಾನ್ನನ ತಲೆಯನ್ನು ಕಡಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮತ್ತು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿದ್ದ ಯೋಹಾನನ ತಲೆಯನ್ನು ಕಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಶೆ ತೆನಿ ಬಂದಿಖಾನ್ಯಾತುಚ್ ಜುವಾಂವಾಚೆ ಚಂಡ್ ತೊಡುಕ್ ಲಾವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:10
12 ತಿಳಿವುಗಳ ಹೋಲಿಕೆ  

ಆದರೆ ನಾನು ನಿಮಗೆ ಹೇಳುವುದೇನೆಂದರೆ, ಎಲೀಯನು ಈಗಾಗಲೇ ಬಂದಿದ್ದಾನೆ. ಆದರೆ ಆತನು ಯಾರೆಂಬುದು ಜನರಿಗೆ ತಿಳಿಯಲಿಲ್ಲ. ಜನರು ತಮಗಿಷ್ಟಬಂದಂತೆ ಅವನನ್ನು ಹಿಂಸಿಸಿದರು. ಅದೇ ರೀತಿ ಅವರು ಮನುಷ್ಯಕುಮಾರನನ್ನು ಹಿಂಸೆಪಡಿಸುವರು” ಎಂದು ಉತ್ತರಕೊಟ್ಟನು.


ಈ ಇಬ್ಬರು ಸಾಕ್ಷಿಗಳು ತಮ್ಮ ಸಂದೇಶವನ್ನು ಹೇಳಿ ಮುಗಿಸಿದ ನಂತರ, ತಳವಿಲ್ಲದ ಕೂಪದಿಂದ ಮೇಲಕ್ಕೆ ಬರುವ ಮೃಗವು ಅವರ ವಿರುದ್ಧ ಹೋರಾಟ ಮಾಡುತ್ತದೆ. ಈ ಮೃಗವು ಅವರನ್ನು ಸೋಲಿಸಿ, ಕೊಂದು ಹಾಕುತ್ತದೆ.


ಹೆರೋದನು, “ನಾನು ಯೋಹಾನನ ತಲೆಯನ್ನು ಕತ್ತರಿಸಿದೆನು. ಆದರೆ ಈ ಸಂಗತಿಗಳನ್ನು ಮಾಡುತ್ತಿರುವ ಈ ಮನುಷ್ಯನು ಯಾರು?” ಎಂದು ಆಲೋಚಿಸುತ್ತಾ ಯೇಸುವನ್ನು ನೋಡಲು ಪ್ರಯತ್ನಿಸಿದನು.


ಎಲೀಯನು ಈಗಾಗಲೇ ಬಂದಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ ಮತ್ತು ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಕೇಡನ್ನು ಮಾಡಿದರು. ಅವನಿಗೆ ಹೀಗಾಗುವುದೆಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆದಿತ್ತು” ಎಂದು ಉತ್ತರಿಸಿದನು.


“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


ರಾಜ ಹೆರೋದನು ಬಹಳವಾಗಿ ದುಃಖಪಟ್ಟನು. ಆದರೆ ಏನು ಕೇಳಿದರೂ ಕೊಡುತ್ತೇನೆಂದು ಅವನು ಅವಳಿಗೆ ವಾಗ್ದಾನ ಮಾಡಿದ್ದನು. ಹೆರೋದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದವರು ಸಹ ಆ ವಾಗ್ದಾನವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ಕೊಡುವುದಕ್ಕೆ ಹೆರೋದನು ಅಪ್ಪಣೆಕೊಟ್ಟನು.


ಅವರು ಯೋಹಾನನ ತಲೆಯನ್ನು ತಟ್ಟೆಯ ಮೇಲೆ ತಂದು ಅವಳಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯಾದ ಹೆರೋದ್ಯಳ ಬಳಿಗೆ ತೆಗೆದುಕೊಂಡು ಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು