Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:13 - ಪರಿಶುದ್ದ ಬೈಬಲ್‌

13 ಯೋಹಾನನಿಗೆ ಸಂಭವಿಸಿದ್ದನ್ನು ಕೇಳಿದಾಗ ಯೇಸು ದೋಣಿಹತ್ತಿ ನಿರ್ಜನವಾದ ಸ್ಥಳಕ್ಕೆ ಒಬ್ಬನೇ ಹೋದನು. ಆದರೆ ಈ ಸುದ್ದಿ ಜನರಿಗೆ ತಿಳಿಯಿತು. ಆದ್ದರಿಂದ ಅವರು ತಮ್ಮ ಊರುಗಳನ್ನು ಬಿಟ್ಟು ಕಾಲುನಡಿಗೆಯಲ್ಲೇ ಆತನಿದ್ದ ಸ್ಥಳಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈ ಸಮಾಚಾರವನ್ನು ಕೇಳಿದ ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು, ದೋಣಿಹತ್ತಿ ನಿರ್ಜನಪ್ರದೇಶಕ್ಕೆ ಒಬ್ಬಂಟಿಗರಾಗಿ ಹೊರಟರು. ಇದನ್ನು ತಿಳಿದುಕೊಂಡ ಜನರು ಊರೂರುಗಳಿಂದ ಹೊರಟು ಗುಂಪುಗುಂಪಾಗಿ ಅವರ ಹಿಂದೆಯೇ ಕಾಲ್ದಾರಿಯಲ್ಲಿ ನಡೆದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ವಿಂಗಡವಾಗಿ ಅಡವಿಗೆ ಹೋದನು. ಇದನ್ನು ಕೇಳಿದ ಜನರು ಗುಂಪುಗುಂಪಾಗಿ ತಮ್ಮ ತಮ್ಮ ಊರುಗಳಿಂದ ಕಾಲುನಡಿಗೆಯಿಂದ ಆತನ ಹಿಂದೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ಆ ವಿಷಯವನ್ನು ಕೇಳಿದಾಗ ದೋಣಿಯನ್ನು ಹತ್ತಿ ಅಲ್ಲಿಂದ ಏಕಾಂತ ಸ್ಥಳಕ್ಕೆ ಹೊರಟರು. ಜನರು ಇದನ್ನು ಕೇಳಿ ಪಟ್ಟಣಗಳಿಂದ ಕಾಲು ನಡಿಗೆಯಲ್ಲಿ ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜುಂವಾವಾಚಿ ಹಿ ಖಬರ್ ಆಯ್ಕಲ್ಲ್ಯಾ ತನ್ನಾ ಜೆಜು ಎಕ್ ಢೊನಿತ್ ಚಡ್ಲೊ. ಅನಿ ತೊ ಅಪ್ನಾಚ್ಯಾ ಎವ್ಡ್ಯಾಕ್ ಎಕ್ ಕೊನ್‍ಬಿ ನಸಲ್ಲ್ಯಾ ಜಾಗ್ಯಾಕ್ ಗೆಲೊ. ಹೆ ಆಯ್ಕಲ್ಲಿ ಲೊಕಾ ಅಪ್ನಾಚ್ಯಾ ಗಾವಾನಿತ್ನಾ ಯೆವ್ನ್ ಪಾಯ್ ವಾಟಾನಿ ಚಲುನ್ಗೆತ್ ಜೆಜುಚ್ಯಾ ಫಾಟೊ-ಫಾಟ್ ಜೆಜು ಹೊತ್ತ್ಯಾಕ್ಡೆ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:13
10 ತಿಳಿವುಗಳ ಹೋಲಿಕೆ  

ಫರಿಸಾಯರು ಏನು ಮಾಡುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಆ ಸ್ಥಳವನ್ನು ಬಿಟ್ಟುಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿದರು. ಆತನು ಎಲ್ಲಾ ರೋಗಿಗಳನ್ನು ಗುಣಪಡಿಸಿದನು.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ತೆಗೆದುಕೊಂಡು ಹೋಗಿ ಸಮಾಧಿ ಮಾಡಿದರು. ಬಳಿಕ ಅವರು ಯೇಸುವಿನ ಬಳಿಗೆ ಹೋಗಿ ಸಂಭವಿಸಿದ್ದನ್ನೆಲ್ಲ ತಿಳಿಸಿದರು.


ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು.


ಮರುದಿನ ಯೇಸು ನಿರ್ಜನ ಸ್ಥಳಕ್ಕೆ ಹೋದನು. ಜನರು ಯೇಸುವಿಗಾಗಿ ಹುಡುಕುತ್ತಾ ಅಲ್ಲಿಗೆ ಬಂದು, ತಮ್ಮನ್ನು ಬಿಟ್ಟುಹೋಗದಂತೆ ಆತನನ್ನು ತಡೆಯಲು ಪ್ರಯತ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು