Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:19 - ಪರಿಶುದ್ದ ಬೈಬಲ್‌

19 ಬಳಿಕ ಆತನು ಜನರಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ರೊಟ್ಟಿಯನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರು ರೊಟ್ಟಿಯನ್ನು ಜನರಿಗೆ ಹಂಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬಳಿಕ ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿನೋಡಿ, ದೇವರಿಗೆ ಸ್ತೋತ್ರಸಲ್ಲಿಸಿದರು. ತರುವಾಯ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನರಿಗೆ ಹಂಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮತ್ತು ಜನರಿಗೆ ಹುಲ್ಲಿನ ಮೇಲೆ ಕೂತುಕೊಳ್ಳುವದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತಕ್ಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರ ಕೈಗೆ ಕೊಟ್ಟನು; ಶಿಷ್ಯರು ಜನರ ಗುಂಪಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಜನಸಮೂಹವು ಹುಲ್ಲಿನ ಮೇಲೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಕೊಟ್ಟು, ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನಸಮೂಹಕ್ಕೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆನಿ ಲೊಕಾಕ್ನಿ ಜಿಮ್ನಿರ್ ಗವ್ತಾ ವರ್‍ತಿ ಬಸುಕ್ ಸಾಂಗ್ಲ್ಯಾನ್; ತನ್ನಾ ತೆನಿ ಪಾಚ್ ಭಾಕ್ರಿಯಾ ಅನಿ ದೊನ್ ಮೊಸೊಳ್ಯಾ ಹಾತಿತ್ ಘೆಟ್ಲ್ಯಾನ್ ಅನಿ ವೈರ್ ಸರ್‍ಗಾಕ್ ಅಪ್ನಾಚಿ ನದರ್ ಲಾವ್ಲ್ಯಾನ್ ಅನಿ ದೆವಾಕ್ ಧನ್ಯವಾದ್ ದಿವ್ನ್ ಭಾಕ್ರಿಯಾ ಮೊಡ್ಲ್ಯಾನ್ ಅನಿ ಶಿಸಾನಿಕ್ಡೆ ದಿಲ್ಯಾನ್ ತನ್ನಾ ಶಿಸಾನಿ ಲೊಕಾಕ್ನಿ ವಾಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:19
24 ತಿಳಿವುಗಳ ಹೋಲಿಕೆ  

ಯೇಸು ಅವರ ಸಂಗಡ ಕುಳಿತುಕೊಂಡು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ಆಹಾರಕ್ಕಾಗಿ ದೇವರಿಗೆ ಸೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟನು.


ನೀವು ಪಟ್ಟಣದೊಳಕ್ಕೆ ಹೋದರೆ ಅವನನ್ನು ಕಾಣಬಹುದು. ನೀವು ಬೇಗನೆ ನೋಡಬೇಕೆಂದಿದ್ದರೆ, ಅವನು ಊಟ ಮಾಡುವುದಕ್ಕಾಗಿ ಆರಾಧನೆಯ ಸ್ಥಳಕ್ಕೆ ಹೋಗುವುದಕ್ಕಿಂತ ಮೊದಲೇ ಅವನನ್ನು ಕಾಣಬೇಕು. ದರ್ಶಿಯು ಯಜ್ಞವನ್ನು ಆಶೀರ್ವದಿಸಬೇಕಾಗಿರುವುದರಿಂದ ಅವನು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಆದ್ದರಿಂದ ನೀವು ಬೇಗನೆ ಹೋದರೆ ಅವನನ್ನು ಕಾಣಬಹುದು” ಎಂದು ಹೇಳಿದರು.


ಹೀಗೆ ಹೇಳಿದ ಬಳಿಕ, ಪೌಲನು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಅವನು ಒಂದು ತುಂಡನ್ನು ಮುರಿದು ತಿನ್ನತೊಡಗಿದನು.


ಯೇಸು ಐದು ರೊಟ್ಟಿಗಳನ್ನು ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ, ರೊಟ್ಟಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದನು. ಬಳಿಕ ರೊಟ್ಟಿಯನ್ನು ಮುರಿದು, ಅದನ್ನು ಶಿಷ್ಯರಿಗೆ ಕೊಟ್ಟು ಜನರಿಗೆಲ್ಲ ಹಂಚಲು ತಿಳಿಸಿದನು. ಅಂತೆಯೇ ಎರಡು ಮೀನುಗಳನ್ನು ಮುರಿದು ಜನರಿಗೆ ಹಂಚಬೇಕೆಂದು ಶಿಷ್ಯರಿಗೆ ಕೊಟ್ಟನು.


ಅದಕ್ಕಾಗಿ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ಇದು ನನ್ನ ದೇಹ; ಇದನ್ನು ನಿಮಗೋಸ್ಕರ ಕೊಡಲಾಗಿದೆ. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಎಂದು ಹೇಳಿದನು.


ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಮುಖ್ಯವೆಂದು ಯೋಚಿಸುವ ವ್ಯಕ್ತಿಯು ಪ್ರಭುವಿಗೋಸ್ಕರವಾಗಿಯೇ ಹಾಗೆ ಯೋಚಿಸುವವನಾಗಿದ್ದಾನೆ. ಅಂತೆಯೇ ಎಲ್ಲಾ ಬಗೆಯ ಆಹಾರಪದಾರ್ಥಗಳನ್ನು ತಿನ್ನುವ ವ್ಯಕ್ತಿಯು ಪ್ರಭುವಿಗೋಸ್ಕರವೇ ಅವುಗಳನ್ನು ತಿನ್ನುತ್ತಾನೆ. ಹೌದು, ಅವನು ಆ ಆಹಾರಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.


ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ನಾವು ದ್ರಾಕ್ಷಾರಸದ ಪಾತ್ರೆಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಕುಡಿಯುವಾಗ ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಲಿಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಲಿಲ್ಲವೇ?


(ಅಲ್ಲಿ ಸುಮಾರು ಐದು ಸಾವಿರ ಮಂದಿ ಗಂಡಸರು ಇದ್ದರು.) ಯೇಸು ತನ್ನ ಶಿಷ್ಯರಿಗೆ, “ಇವರನ್ನು ಸುಮಾರು ಐವತ್ತೈವತ್ತು ಜನರಂತೆ ಸಾಲಾಗಿ ಕುಳ್ಳಿರಿಸಿರಿ” ಅಂದನು.


ಬಳಿಕ ಆಕಾಶದ ಕಡೆಗೆ ನೋಡಿ, ನಿಟ್ಟುಸಿರು ಬಿಟ್ಟು, “ಎಪ್ಫಥಾ” ಎಂದು ಹೇಳಿದನು. (ಎಪ್ಫಥಾ ಎಂದರೆ “ತೆರೆಯಲಿ”)


ಆದ್ದರಿಂದ ನೀವು ತಿಂದರೂ ಕುಡಿದರೂ ಏನೇ ಮಾಡಿದರೂ ದೇವರ ಮಹಿಮೆಗಾಗಿ ಅದನ್ನು ಮಾಡಿರಿ.


ಆದರೆ ಅಷ್ಟರಲ್ಲಿಯೇ, ಕೆಲವು ದೋಣಿಗಳು ತಿಬೇರಿಯಾದಿಂದ ಬಂದವು. ಅವರು ಊಟ ಮಾಡಿದ ಸ್ಥಳಕ್ಕೆ ಸಮೀಪದ ದಡದಲ್ಲಿಯೇ ಆ ದೋಣಿಗಳು ನಿಂತುಕೊಂಡವು. ಪ್ರಭುವು ಸ್ತೋತ್ರ ಮಾಡಿದ ಮೇಲೆ ಅವರು ರೊಟ್ಟಿಯನ್ನು ಆ ಸ್ಥಳದಲ್ಲೇ ತಿಂದಿದ್ದರು.


ಆಗ ಯೇಸು ಶಿಷ್ಯರಿಗೆ, “ಹಸಿರು ಹುಲ್ಲಿನ ಮೇಲೆ ಸಾಲುಸಾಲಾಗಿ ಕುಳಿತುಕೊಳ್ಳಲು ಜನರಿಗೆ ತಿಳಿಸಿ” ಎಂದು ಹೇಳಿದನು.


ಆದ್ದರಿಂದ ಅವರು ಸಮಾಧಿಯ ಬಾಯಿಂದ ಕಲ್ಲನ್ನು ತೆಗೆದುಹಾಕಿದರು. ಆಗ ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ, ನನ್ನ ಪ್ರಾರ್ಥನೆಯನ್ನು ಕೇಳಿದರಿಂದ ನಿನ್ನನ್ನು ಕೊಂಡಾಡುತ್ತೇನೆ.


ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು.


ಆಗ ಯೇಸು ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ಕೈಯಲ್ಲಿ ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಯೇಸು ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚಬೇಕೆಂದು ಹೇಳಿದನು.


ಯೇಸು, “ಆ ರೊಟ್ಟಿ ಮತ್ತು ಮೀನುಗಳನ್ನು ನನ್ನ ಬಳಿಗೆ ತನ್ನಿರಿ” ಅಂದನು.


ಬಳಿಕ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಆತನು, “ಈ ಪಾತ್ರೆಯಲ್ಲಿರುವ ದ್ರಾಕ್ಷಾರಸವನ್ನು ನೀವೆಲ್ಲರೂ ಹಂಚಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು