ಮತ್ತಾಯ 14:20 - ಪರಿಶುದ್ದ ಬೈಬಲ್20 ಜನರೆಲ್ಲರೂ ತಿಂದು ತೃಪ್ತರಾದರು. ಜನರು ತಿಂದು ಮುಗಿಸಿದ ನಂತರ, ತಿನ್ನಲಾರದೆ ಉಳಿಸಿದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಎಲ್ಲರೂ ಹೊಟ್ಟೆತುಂಬ ತಿಂದು ತೃಪ್ತರಾದರು. ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿಗಳ ತುಂಬ ಆದುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರೆಲ್ಲರೂ ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಸಗ್ಳ್ಯಾ ಲೊಕಾನಿ ಪೊಟ್‍ಭರ್ ಜೆವ್ಲ್ಯಾನಿ. ಮಾನಾ ಹುರಲ್ಲೆ ಶಿಸಾನಿ ಗೊಳಾ ಕರ್‍ಲ್ಯಾನಿ ತನ್ನಾ ಬಾರಾ ಭುಟಿಯಾ ಭರ್‍ಲ್ಯಾ. ಅಧ್ಯಾಯವನ್ನು ನೋಡಿ |
ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.
ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”