ಮತ್ತಾಯ 14:23 - ಪರಿಶುದ್ದ ಬೈಬಲ್23 ಆತನು ಜನರಿಗೆ ಶುಭವನ್ನು ಕೋರಿ ಕಳುಹಿಸಿದ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ತಾನೊಬ್ಬನೇ ಬೆಟ್ಟದ ಮೇಲಕ್ಕೆ ಹೋದನು. ಆಗಲೇ ರಾತ್ರಿಯಾಗಿತ್ತು. ಅಲ್ಲಿ ಆತನೊಬ್ಬನೇ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಜನರನ್ನು ಬೀಳ್ಕೊಟ್ಟ ಬಳಿಕ ಪ್ರಾರ್ಥನೆಮಾಡಲು ಯೇಸು ಒಬ್ಬರೇ ಬೆಟ್ಟಕ್ಕೆ ಹೋದರು. ಕತ್ತಲೆ ಕವಿದಾಗ ಅವರು ಅಲ್ಲಿ ಒಬ್ಬಂಟಿಗರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆತನು ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟ ಮೇಲೆ ಪ್ರಾರ್ಥನೆಮಾಡುವದಕ್ಕೆ ಏಕಾಂತವಾಗಿ ಬೆಟ್ಟವನ್ನು ಹತ್ತಿದನು. ಮತ್ತು ಹೊತ್ತು ಮುಳುಗಿದ ಮೇಲೆ ಒಬ್ಬನೇ ಅಲ್ಲಿ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ, ಪ್ರಾರ್ಥನೆಮಾಡಲು ಏಕಾಂತವಾಗಿ ಬೆಟ್ಟಕ್ಕೆ ಹೋದರು. ಸಂಜೆಯಾದಾಗ ಯೇಸು ಒಬ್ಬರೇ ಅಲ್ಲಿ ಇದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಸಗ್ಳ್ಯಾ ಲೊಕಾಕ್ನಿ ಧಾಡುನ್ ಹೊಲ್ಲ್ಯಾ ತನ್ನಾ ತೊ ಎಕ್ಲೊಚ್ ಮಾಗ್ನಿ ಕರುಕ್ ಮನುನ್ ಎಕ್ ಮಡ್ಡಿ ವರ್‍ತಿ ಗೆಲೊ. ತನ್ನಾ ಕಾಳೊಕ್ ಹೊವ್ನಗೆತ್ ಯೆಲ್ಲೊ; ತನ್ನಾ ಥೈ ಜೆಜು ಎಕ್ಲೊಚ್ ಹೊತ್ತೊ. ಅಧ್ಯಾಯವನ್ನು ನೋಡಿ |