Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:28 - ಪರಿಶುದ್ದ ಬೈಬಲ್‌

28 ಪೇತ್ರನು, “ಪ್ರಭುವೇ, ನಿಜವಾಗಿಯೂ ನೀನೇ ಆಗಿದ್ದರೆ, ನೀರಿನ ಮೇಲೆ ನಡೆದುಕೊಂಡು ನಿನ್ನ ಬಳಿಗೆ ಬರಲು ನನಗೆ ಆಜ್ಞಾಪಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಪೇತ್ರನು, “ಸ್ವಾಮೀ, ನೀವೇ ಆದರೆ ನಾನೂ ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರುವಂತೆ ಆಜ್ಞಾಪಿಸಿ,” ಎಂದನು. ಯೇಸು, “ಬಾ” ಎಂದು ಕರೆಯಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅದಕ್ಕೆ ಪೇತ್ರನು - ಸ್ವಾಮೀ, ನೀನೇಯಾದರೆ ನನಗೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವದಕ್ಕೆ ಅಪ್ಪಣೆಕೊಡು ಅನ್ನಲು ಆತನು - ಬಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಪೇತ್ರನು ಯೇಸುವಿಗೆ, “ಸ್ವಾಮೀ, ನೀವೇ ಆಗಿದ್ದರೆ, ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರಲು ನನಗೆ ಅಪ್ಪಣೆಕೊಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ಪೆದ್ರುನ್,“ಧನಿಯಾ, ಖರೆಚ್ ತಿಯಾ ಹೊಯ್ ಹೊಲ್ಯಾರ್ ಪಾನಿಯಾ ವೈನಾ ಚಲುನ್ ತುಜೆಕ್ಡೆ ಯೆ ಮನುನ್ ಮಾಕಾ ಬಲ್ವು!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:28
11 ತಿಳಿವುಗಳ ಹೋಲಿಕೆ  

ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನಾವೆಲ್ಲಿಗೆ ಹೋಗೋಣ? ನಿತ್ಯಜೀವವನ್ನು ಕೊಡುವ ಸಂಗತಿಗಳು ನಿನ್ನಲ್ಲಿವೆ.


ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.


ಪೇತ್ರನು ಯೇಸುವಿಗೆ, “ನಾವು ನಮಗಿದ್ದ ಪ್ರತಿಯೊಂದನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು. ನಮಗೆ ಏನು ದೊರಕುವುದು” ಎಂದನು.


ಆದರೆ ಪೇತ್ರನು ಖಚಿತವಾಗಿ, “ನಾನು ನಿನ್ನೊಂದಿಗೆ ಸಾಯಬೇಕಾದರೂ ಸರಿಯೇ, ನಿನ್ನನ್ನು ತಿಳಿದೇ ಇಲ್ಲವೆಂದು ನಾನೆಂದಿಗೂ ಹೇಳುವುದಿಲ್ಲ” ಎಂದು ಉತ್ತರಿಸಿದನು. ಉಳಿದ ಶಿಷ್ಯರು ಸಹ ಇದೇ ರೀತಿ ಹೇಳಿದರು.


ಕೂಡಲೇ ಯೇಸು, “ಚಿಂತಿಸಬೇಡಿ! ನಾನೇ! ಭಯಪಡಬೇಡಿ” ಎಂದು ಅವರೊಂದಿಗೆ ಮಾತಾಡಿದನು.


ಯೇಸು, “ಪೇತ್ರನೇ, ಬಾ” ಅಂದನು. ಕೂಡಲೆ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ನೀರಿನ ಮೇಲೆ ನಡೆದನು.


ಆದರೆ ನೀವು ದೇವರನ್ನು ಕೇಳಿಕೊಳ್ಳುವಾಗ ಆತನಲ್ಲಿ ನಿಮಗೆ ನಂಬಿಕೆಯಿರಬೇಕು. ದೇವರ ಬಗ್ಗೆ ಸಂದೇಹಪಡದಿರಿ. ಸಂದೇಹಪಡುವವನು ಸಾಗರದಲ್ಲಿನ ಅಲೆಯಂತಿದ್ದಾನೆ. ಗಾಳಿಯು ಬೀಸಿದಾಗ ಅಲೆಯು ಮೇಲೆದ್ದು ಬೀಳುತ್ತದೆ. ಸಂದೇಹಪಡುವವನು ಆ ಅಲೆಯಂತಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು