Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:5 - ಪರಿಶುದ್ದ ಬೈಬಲ್‌

5 ಹೆರೋದನು ಯೋಹಾನನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟು ಕೊಲ್ಲಿಸಿರಲಿಲ್ಲ. ಜನರು ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೊವಾನ್ನನನ್ನು ಕೊಲ್ಲಿಸಬೇಕೆಂದಿದ್ದರೂ ಹೆರೋದನು ಜನರಿಗೆ ಹೆದರಿದ್ದನು. ಅವರು ಆತನನ್ನು ಪ್ರವಾದಿಯೆಂದು ಭಾವಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರು ಅವನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟು [ಕೊಲ್ಲಿಸಲಿಲ್ಲ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹೆರೋದನು ಯೋಹಾನನನ್ನು ಕೊಲ್ಲಬೇಕೆಂದಿದ್ದರೂ ಜನಸಮೂಹಕ್ಕೆ ಭಯಪಟ್ಟನು. ಅವರು ಯೋಹಾನನನ್ನು ಪ್ರವಾದಿಯೆಂದು ಎಣಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹೆರೊದ್ ಜುವಾಂವಾಕ್ ಜಿವಾನಿ ಮಾರುಕ್ ಬಗಿ, ಖರೆ ತೊ ಜುದೆವ್ ಲೊಕಾಕ್ನಿ ಭಿಂವಲ್ಲೊ. ಕಶ್ಯಾಕ್ ಮಟ್ಲ್ಯಾರ್ ತೆನಿ ಜುವಾಂವ್ ಎಕ್ ಪ್ರವಾದಿ ಮನುನ್ ಮಾನುನ್ ಘೆಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:5
10 ತಿಳಿವುಗಳ ಹೋಲಿಕೆ  

‘ಅದು ಮನುಷ್ಯನಿಂದ ಬಂದಿತು’ ಎಂದರೆ ಜನರೆಲ್ಲರೂ ನಮ್ಮ ಮೇಲೆ ಕೋಪಗೊಳ್ಳುವರು. ಅವರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿ ಎಂದು ನಂಬಿರುವುದರಿಂದ ನಾವು ಅವರಿಗೆ ಹೆದರಬೇಕಾಗಿದೆ” ಎಂದು ಮಾತಾಡಿಕೊಂಡರು.


ಹಾಗಾದರೆ, ಏನನ್ನು ನೋಡಲು ಹೋಗಿದ್ದಿರಿ? ಒಬ್ಬ ಪ್ರವಾದಿಯನ್ನೋ? ಹೌದು! ಯೋಹಾನನು ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.


ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು.


ಯೆಹೂದ್ಯನಾಯಕರಿಗೆ ಅಪೊಸ್ತಲರನ್ನು ದಂಡಿಸಲು ಯಾವ ಮಾರ್ಗವೂ ತೋಚಲಿಲ್ಲ, ಯಾಕೆಂದರೆ ಸಂಭವಿಸಿದ ಕಾರ್ಯಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. (ಈ ಸೂಚಕಕಾರ್ಯದಿಂದ ಗುಣಹೊಂದಿದ ವ್ಯಕ್ತಿಗೆ ನಲವತ್ತು ವರ್ಷಕ್ಕಿಂತಲೂ ಹೆಚ್ಚು ವಯಸ್ಸಾಗಿತ್ತು.) ಆದ್ದರಿಂದ ಯೆಹೂದ್ಯನಾಯಕರು ಅಪೊಸ್ತಲರನ್ನು ಮತ್ತೆ ಎಚ್ಚರಿಸಿ ಕಳುಹಿಸಿಬಿಟ್ಟರು.


‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂದಿತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು.


ನೀವು ಜೀವಿಸತಕ್ಕ ಸರಿಯಾದ ಮಾರ್ಗವನ್ನು ತೋರಿಸಲು ಯೋಹಾನನು ಬಂದನು. ನೀವು ಯೋಹಾನನನ್ನು ನಂಬಲಿಲ್ಲ, ಆದರೆ ಸುಂಕವಸೂಲಿಗಾರರು ಮತ್ತು ವೇಶ್ಯೆಯರು ನಂಬಿದ್ದನ್ನು ನೀವು ನೋಡಿದ್ದೀರಿ. ಆದರೆ ನೀವಿನ್ನೂ ಬದಲಾವಣೆ ಹೊಂದಲು ಮತ್ತು ಅವನನ್ನು ನಂಬಲು ಇಷ್ಟಪಡುತ್ತಿಲ್ಲ.


ರಾಜನಾದ ಯೆಹೋಯಾಕೀಮನೂ ಅವನ ಸೇನೆಯ ಅಧಿಕಾರಿಗಳೂ ಯೆಹೂದದ ನಾಯಕರೂ ಊರೀಯನ ಪ್ರವಾದನೆಯನ್ನು ಕೇಳಿದರು. ಅವರಿಗೆ ಕೋಪಬಂದಿತು. ರಾಜನಾದ ಯೆಹೋಯಾಕೀಮನು ಊರೀಯನನ್ನು ಕೊಲ್ಲಬಯಸಿದನು. ಆದರೆ ಯೆಹೋಯಾಕೀಮನು ತನ್ನನ್ನು ಕೊಲ್ಲಬಯಸುತ್ತಾನೆಂದು ಊರೀಯನು ಕೇಳಿದನು. ಊರೀಯನು ಭಯಪಟ್ಟು ತಪ್ಪಿಸಿಕೊಂಡು ಈಜಿಪ್ಟ್ ದೇಶಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು