Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:8 - ಪರಿಶುದ್ದ ಬೈಬಲ್‌

8 ಏನು ಕೇಳಿಕೊಳ್ಳಬೇಕೆಂದು ಹೆರೋದ್ಯಳು ತನ್ನ ಮಗಳಿಗೆ ಹೇಳಿಕೊಟ್ಟಳು. ಆದ್ದರಿಂದ ಅವಳು ಹೆರೋದನಿಗೆ, “ಸ್ನಾನಿಕ ಯೋಹಾನನ ತಲೆಯನ್ನು ಇಲ್ಲಿಯೇ ಈ ತಟ್ಟೆಯ ಮೇಲೆಯೇ ನನಗೆ ಕೊಡು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವಳು ತನ್ನ ತಾಯಿಯ ಸಲಹೆ ಪಡೆದು, “ನನಗೆ ಸ್ನಾನಿಕ ಯೊವಾನ್ನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿಕೊಡಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಅವಳು ತನ್ನ ತಾಯಿಯ ಬೋಧನೆಯನ್ನು ಕೇಳಿ - ಇಲ್ಲಿಯೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವಳು ತನ್ನ ತಾಯಿಯ ಸಲಹೆ ಪಡೆದು, “ಸ್ನಾನಿಕನಾದ ಯೋಹಾನನ ತಲೆಯನ್ನು ಇಲ್ಲಿಯೇ ಒಂದು ತಟ್ಟೆಯಲ್ಲಿ ನನಗೆ ತರಿಸಿಕೊಡು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆನಿ ಅಪ್ನಾಚ್ಯಾ ಬಾಯ್‍ಕಡೆ ಇಚಾರುನ್ ಘೆಟ್ಲಿನ್. ತನ್ನಾ ತೆನಿ ರಾಜಾಕ್ಡೆ, “ ಹಿತ್ತೆ ಅತ್ತಾಚ್ ಮಾಕಾ ಜುವಾಂವ್ ಬಾವ್ತಿಸಾಚೆ ಟಕ್ಲೆ ಎಕ್ ಆಯ್ದಾನಾತ್ನಾ ಪಾಜೆ!” ಮನುನ್ ಮಾಗಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:8
17 ತಿಳಿವುಗಳ ಹೋಲಿಕೆ  

ಆ ಹುಡುಗಿಯು ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನ್ನನ್ನು ಕೇಳಿಕೊಳ್ಳಲಿ?” ಎಂದು ಕೇಳಿದಳು. ಅವಳ ತಾಯಿ, “ಸ್ನಾನಿಕ ಯೋಹಾನನ ತಲೆಯನ್ನು ಕೇಳಿಕೊ” ಎಂದು ಹೇಳಿಕೊಟ್ಟಳು.


ಕೊಲೆಗಾರರು ಯಥಾರ್ಥವಂತರನ್ನು ಯಾವಾಗಲೂ ದ್ವೇಷಿಸುವರು. ಆ ಕೆಡುಕರು ಅವರನ್ನು ಕೊಲ್ಲಬಯಸುವರು.


ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ.


ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗ ಸತ್ತದ್ದನ್ನು ನೋಡಿದಳು. ಅವಳು ಮೇಲೆದ್ದು ರಾಜನ ಕುಟುಂಬವನ್ನೆಲ್ಲ ಕೊಂದುಬಿಟ್ಟಳು.


ಆದ್ದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು.


ನಾನು ಏನು ಮಾಡಿದೆನೆಂಬುದು ನಿನಗೆ ತಿಳಿಯಲಿಲ್ಲವೇ? ಯೆಹೋವನ ಪ್ರವಾದಿಗಳನ್ನು ಈಜೆಬೆಲಳು ಕೊಲ್ಲುತ್ತಿದ್ದಾಗ ನೂರು ಮಂದಿ ಪ್ರವಾದಿಗಳನ್ನು ನಾನು ಗುಹೆಗಳಲ್ಲಿ ಅಡಗಿಸಿಟ್ಟೆನು. ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿಯನ್ನು ಮತ್ತೊಂದು ಗುಹೆಯಲ್ಲಿಯೂ ನಾನು ಅಡಗಿಸಿಟ್ಟೆನು. ಅವರಿಗೆ ಆಹಾರವನ್ನೂ ನೀರನ್ನೂ ನಾನು ತಂದುಕೊಡುತ್ತಿದ್ದೆನು.


ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)


ಅವು ಯಾವುವೆಂದರೆ: ಬಂಗಾರದ ಬೋಗುಣಿಗಳು 30 ಬೆಳ್ಳಿ ಬೋಗುಣಿಗಳು 1,000 ಕತ್ತಿಗಳು ಮತ್ತು ಪಾತ್ರೆಗಳು 29


ಆದ್ದರಿಂದ ಅವನು, “ನಿನಗೆ ಏನು ಬೇಕಾದರೂ ನಾನು ಕೊಡುತ್ತೇನೆ” ಎಂದು ಅವಳಿಗೆ ವಾಗ್ದಾನ ಮಾಡಿದನು.


ರಾಜ ಹೆರೋದನು ಬಹಳವಾಗಿ ದುಃಖಪಟ್ಟನು. ಆದರೆ ಏನು ಕೇಳಿದರೂ ಕೊಡುತ್ತೇನೆಂದು ಅವನು ಅವಳಿಗೆ ವಾಗ್ದಾನ ಮಾಡಿದ್ದನು. ಹೆರೋದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದವರು ಸಹ ಆ ವಾಗ್ದಾನವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ಕೊಡುವುದಕ್ಕೆ ಹೆರೋದನು ಅಪ್ಪಣೆಕೊಟ್ಟನು.


ಅವರು ಯೋಹಾನನ ತಲೆಯನ್ನು ತಟ್ಟೆಯ ಮೇಲೆ ತಂದು ಅವಳಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯಾದ ಹೆರೋದ್ಯಳ ಬಳಿಗೆ ತೆಗೆದುಕೊಂಡು ಹೋದಳು.


ಆ ಹುಡುಗಿ ಬೇಗನೆ ರಾಜನ ಬಳಿಗೆ ಬಂದು, “ಸ್ನಾನಿಕ ಯೋಹಾನನ ತಲೆಯನ್ನು ಒಂದು ತಟ್ಟೆಯಲ್ಲಿ ಈಗಲೇ ತರಿಸಿಕೊಡಿ, ಇದೇ ನನ್ನ ಬೇಡಿಕೆ” ಎಂದು ಹೇಳಿದಳು.


ಅದನ್ನು ಒಂದು ತಟ್ಟೆಯ ಮೇಲಿಟ್ಟು ತಂದು ಆ ಹುಡುಗಿಗೆ ಕೊಟ್ಟನು. ಅವಳು ಆ ತಲೆಯನ್ನು ತನ್ನ ತಾಯಿಗೆ ಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು