ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.
ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು.