Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:13 - ಪರಿಶುದ್ದ ಬೈಬಲ್‌

13 ಯೇಸು, “ಪರಲೋಕದಲ್ಲಿರುವ ನನ್ನ ತಂದೆ ನೆಡದಿರುವ ಪ್ರತಿಯೊಂದು ಗಿಡವನ್ನು ಬೇರಿನೊಂದಿಗೆ ಕಿತ್ತುಹಾಕಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಯೇಸು, “ನನ್ನ ಪರಮಪಿತನು ನೆಡದ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಆತನು - ಪರಲೋಕದಲ್ಲಿರುವ ನನ್ನ ತಂದೆಯು ನೆಡದೆ ಇರುವ ಗಿಡಗಳೆಲ್ಲಾ ಬೇರಿನೊಂದಿಗೆ ಕಿತ್ತುಹಾಕಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಪರಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊಂದು ಗಿಡವು ಬೇರುಸಹಿತವಾಗಿ ಕಿತ್ತುಹಾಕಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ಜೆಜುನ್,“ಮಾಜ್ಯಾ ಸರ್‍ಗಾಚ್ಯಾ ಬಾಬಾನ್ ಜಮ್ನಿ ವರ್‍ತಿ ಲಾವಿನಸಲ್ಲೆ ಹರ್ ಎಕ್ ಝಾಡ್ ಮುಳಾತ್ನಾ ಉಪ್ಸುನ್ ಕಾಡುನ್ ಟಾಕುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:13
11 ತಿಳಿವುಗಳ ಹೋಲಿಕೆ  

ಫಲಕೊಡದಿರುವ ಪ್ರತಿಯೊಂದು ಕವಲನ್ನು ಆತನು ಕತ್ತರಿಸಿಹಾಕುವನು. ಫಲಕೊಡುವ ಕವಲು ಇನ್ನೂ ಹೆಚ್ಚು ಫಲಕೊಡುವಂತೆ ಅದನ್ನು ಶುದ್ಧಗೊಳಿಸುವನು.


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಆ ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ನೀವು ದೇವರ ಹೊಲವಾಗಿದ್ದೀರಿ. ಇದಲ್ಲದೆ ನೀವು ದೇವರ ಕಟ್ಟಡವಾಗಿದ್ದೀರಿ.


ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಹೇಳಿದ್ದನ್ನು ಕೇಳಿ ಫರಿಸಾಯರು ಬೇಸರಗೊಂಡದ್ದು ನಿನಗೆ ತಿಳಿಯಿತೋ?” ಎಂದು ಕೇಳಿದರು.


“ನಾನು ನಿಜವಾದ ದ್ರಾಕ್ಷಿಬಳ್ಳಿ. ನನ್ನ ತಂದೆ ತೋಟಗಾರನು.


ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು