Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:16 - ಪರಿಶುದ್ದ ಬೈಬಲ್‌

16 ಯೇಸು, “ನಿಮಗೆ ಇನ್ನೂ ಅರ್ಥವಾಗುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದಕ್ಕೆ ಯೇಸು, “ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯೇಸು ಇಂತೆಂದರು: “ನೀವು ಕೂಡ ಮಂದಮತಿಗಳೇನು? ಇದರ ಅರ್ಥ ನಿಮಗೂ ಆಗದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನು - ನಿಮಗೂ ಇನ್ನು ಬುದ್ಧಿ ಇಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದಕ್ಕೆ ಯೇಸು, “ನೀವು ಸಹ ಇನ್ನೂ ಬುದ್ಧಿಯಿಲ್ಲದವರಾಗಿದ್ದೀರಾ?” ಎಂದು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ಜೆಜುನ್ ತೆಂಕಾ,“ತುಮಿ ಅಜುನ್‍ಬಿ ದುಸ್ರ್ಯಾ ಲೊಕಾಂಚ್ಯಾನ್ಕಿ ಉಶಾರ್ ಹೊವ್ಕ್‌ನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:16
15 ತಿಳಿವುಗಳ ಹೋಲಿಕೆ  

ನೀವಿನ್ನೂ ಅರ್ಥಮಾಡಿಕೊಳ್ಳಲಿಲ್ಲವೇ? ಐದು ರೊಟ್ಟಿಗಳಿಂದ ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು ನಿಮಗೆ ನೆನಪಿಲ್ಲವೇ? ಜನರು ಊಟ ಮಾಡಿದ ಮೇಲೆ ನೀವು ಅನೇಕ ಬುಟ್ಟಿಗಳಲ್ಲಿ ರೊಟ್ಟಿಗಳನ್ನು ತುಂಬಿಸಿದ್ದು ನಿಮಗೆ ನೆನಪಿಲ್ಲವೇ?


ಆದರೆ ಯೇಸು ಹೇಳಿದ್ದು ಶಿಷ್ಯರಿಗೆ ಅರ್ಥವಾಗಲಿಲ್ಲ. ಮತ್ತು ಅದರ ಅರ್ಥವನ್ನು ಕೇಳುವುದಕ್ಕೂ ಅವರು ಭಯಪಟ್ಟರು.


ಯೇಸು, “ನಿಮಗೂ ಅರ್ಥವಾಗುವುದಿಲ್ಲವೇ? ಒಬ್ಬ ವ್ಯಕ್ತಿಯ ಒಳಗೆ ಹೋಗುವ ಯಾವ ಪದಾರ್ಥವೂ ಅವನನ್ನು ಅಶುದ್ಧನನ್ನಾಗಿ ಮಾಡುವುದಿಲ್ಲ ಎಂಬುದು ನಿಮಗೆ ತಿಳಿದೇ ಇದೆ.


ಆದರೆ ಯೇಸುವಿನ ಈ ಮಾತುಗಳು ಶಿಷ್ಯರಿಗೆ ಅರ್ಥವಾಗಲಿಲ್ಲ. ಏಕೆಂದರೆ ಅವುಗಳ ಅರ್ಥವು ಅವರಿಗೆ ಮರೆಯಾಗಿತ್ತು. ಆದರೂ ಯೇಸು ಹೇಳಿದ್ದರ ಬಗ್ಗೆ ಆತನನ್ನು ಕೇಳುವದಕ್ಕೆ ಶಿಷ್ಯರು ಭಯಪಟ್ಟರು.


ಯೇಸು ಜನರನ್ನು ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಆಲಿಸಿರಿ ಮತ್ತು ಅರ್ಥಮಾಡಿಕೊಳ್ಳಿರಿ.


ನಿಮಗೆ ಕಾಲವು ಬೇಕಾದಷ್ಟಿದ್ದುದರಿಂದ ಈಗಾಗಲೇ ನೀವು ಉಪದೇಶಕರಾಗಿರಬೇಕಿತ್ತು. (ಆದರೆ ನೀವಿನ್ನೂ ಆಗಿಲ್ಲ.) ಹೀಗಿರಲು ದೇವರ ಉಪದೇಶಗಳನ್ನು ಮೊದಲ ಪಾಠದಿಂದ ಮತ್ತೆ ಉಪದೇಶಿಸಲು ನಿಮಗೆ ಮತ್ತೊಬ್ಬ ವ್ಯಕ್ತಿಯ ಅಗತ್ಯವಿದೆ. ಹಾಲಿನಂತಿರುವ ಉಪದೇಶವನ್ನು ನಾವು ನಿಮಗೆ ಮಾಡಬೇಕಾಗಿದೆ. ನೀವು ಗಟ್ಟಿ ಆಹಾರವನ್ನು ತಿನ್ನುವವರಾಗಿಲ್ಲ.


ಬಳಿಕ ಯೇಸು ಪವಿತ್ರ ಗ್ರಂಥವನ್ನು ತನ್ನ ಶಿಷ್ಯರಿಗೆ ವಿವರಿಸಿದನು. ತನ್ನ ಬಗ್ಗೆ ಬರೆದಿರುವ ಸಂಗತಿಗಳನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಹಾಯ ಮಾಡಿದನು.


ಅಪೊಸ್ತಲರು ಇದನ್ನು ಗ್ರಹಿಸಿಕೊಳ್ಳಲು ಪ್ರಯತ್ನಿಸಿದರೂ ಅವರಿಗೆ ಸಾಧ್ಯವಾಗಲಿಲ್ಲ, ಏಕೆಂದರೆ ಅದರ ಅರ್ಥವು ಅವರಿಗೆ ಮರೆಯಾಗಿತ್ತು.


ಯೇಸು ಐದು ರೊಟ್ಟಿಗಳಿಂದ ಐದು ಸಾವಿರ ಜನರಿಗೆ ಊಟ ಮಾಡಿಸಿದ್ದನ್ನು ಅವರು ನೋಡಿದ್ದರೂ ಅದರ ಅರ್ಥವನ್ನು ಗ್ರಹಿಸಲಿಲ್ಲ. ಅವರು ಅದನ್ನು ಅರ್ಥಮಾಡಿಕೊಳ್ಳುವಷ್ಟು ಸಮರ್ಥರಾಗಿರಲಿಲ್ಲ.


ಆದ್ದರಿಂದ ನಾನು ನಿಮಗೆ ಹೇಳಿದ್ದು ರೊಟ್ಟಿಯ ಕುರಿತಲ್ಲ. ನೀವು ಇದನ್ನು ಅರ್ಥ ಮಾಡಿಕೊಳ್ಳುವುದಿಲ್ಲವೇಕೆ? ಫರಿಸಾಯರು ಮತ್ತು ಸದ್ದುಕಾಯರ ಹುಳಿಗೆ (ಕೆಟ್ಟ ಪ್ರಭಾವಕ್ಕೆ) ಒಳಗಾಗದಂತೆ ನೀವು ಎಚ್ಚರಿಕೆಯಿಂದಿರಬೇಕೆಂದು ನಾನು ನಿಮ್ಮನ್ನು ಎಚ್ಚರಿಸಿದೆನು” ಅಂದನು.


ಯೇಸು ತನ್ನ ಶಿಷ್ಯರಿಗೆ, “ನೀವು ಈ ವಿಷಯಗಳನ್ನೆಲ್ಲಾ ಅರ್ಥಮಾಡಿಕೊಂಡಿರೋ?” ಎಂದು ಕೇಳಿದನು. ಅದಕ್ಕೆ ಶಿಷ್ಯರು, “ನಾವು ಅರ್ಥಮಾಡಿಕೊಂಡೆವು” ಎಂದು ಉತ್ತರಕೊಟ್ಟರು.


ಆಗ ಪೇತ್ರನು, “ನೀನು ಜನರಿಗೆ ಮೊದಲು ಹೇಳಿದ್ದನ್ನು ನಮಗೆ ವಿವರಿಸು” ಎಂದನು.


ಒಬ್ಬ ಮನುಷ್ಯನ ಬಾಯಿಂದ ಆಹಾರ ಹೊಟ್ಟೆಯೊಳಕ್ಕೆ ಹೋಗುತ್ತದೆ. ನಂತರ ಅದು ದೇಹದಿಂದ ಹೊರಗೆ ಹೋಗಿಬಿಡುತ್ತದೆ. ಇದು ನಿಮಗೆ ತಿಳಿದೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು