Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:17 - ಪರಿಶುದ್ದ ಬೈಬಲ್‌

17 ಒಬ್ಬ ಮನುಷ್ಯನ ಬಾಯಿಂದ ಆಹಾರ ಹೊಟ್ಟೆಯೊಳಕ್ಕೆ ಹೋಗುತ್ತದೆ. ನಂತರ ಅದು ದೇಹದಿಂದ ಹೊರಗೆ ಹೋಗಿಬಿಡುತ್ತದೆ. ಇದು ನಿಮಗೆ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬಾಯೊಳಕ್ಕೆ ಹೋಗುವಂಥದ್ದು ಹೊಟ್ಟೆಯಲ್ಲಿ ಸೇರಿ ವಿಸರ್ಜಿತವಾಗುತ್ತದೆಂದು ನಿಮಗೆ ತಿಳಿಯಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬಾಯೊಳಕ್ಕೆ ಹೋಗುವುದೆಲ್ಲಾ ಹೊಟ್ಟೆಯನ್ನು ಸೇರಿ ಅಲ್ಲಿಂದ ವಿಸರ್ಜಿತವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಬಾಯೊಳಕ್ಕೆ ಹೋಗುವಂಥದು ಹೊಟ್ಟೆಯಲ್ಲಿ ಸೇರಿ ಬಹಿರ್ದೇಶಕ್ಕೆ ಹೋಗುತ್ತದೆಂದು ನಿಮಗೆ ತಿಳಿಯಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಬಾಯೊಳಕ್ಕೆ ಹೋಗಿ ಹೊಟ್ಟೆಯಲ್ಲಿ ಸೇರುವುದೆಲ್ಲವೂ ವಿಸರ್ಜಿತವಾಗುವುದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತುಮ್ಕಾ ಕಳಿನಾ ಕಾಯ್? ಮಾನ್ಸಾಚ್ಯಾ ತೊಂಡಾತ್ನಾ ಜೆ ಕಾಯ್ ಭುತ್ತುರ್ ಜಾತಾ ತೆ ಮಾನ್ಸಾಚ್ಯಾ ಪೊಟಾತ್ ಜಾತಾ ಅನಿ ಮಾನಾ ಭಾಯ್ರ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:17
9 ತಿಳಿವುಗಳ ಹೋಲಿಕೆ  

ಒಳ್ಳೆಯವನ ಹೃದಯದಲ್ಲಿ ಒಳ್ಳೆಯವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಒಳ್ಳೆಯವು ಹೊರಬರುತ್ತವೆ. ಆದರೆ ಕೆಟ್ಟವನ ಹೃದಯದಲ್ಲಿ ಕೆಟ್ಟವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಕೆಟ್ಟವು ಹೊರಬರುತ್ತವೆ. ಹೃದಯದಲ್ಲಿ ತುಂಬಿರುವುದೇ ಬಾಯಲ್ಲಿ ಬರುವುದು.


“ಆಹಾರವು ಹೊಟ್ಟೆಗೋಸ್ಕರವಿದೆ, ಹೊಟ್ಟೆಯು ಆಹಾರಕ್ಕೋಸ್ಕರವಿದೆ.” ಹೌದು, ದೇವರು ಅವೆರಡನ್ನು ನಾಶಮಾಡುವನು. ದೇಹವಿರುವುದು ಲೈಂಗಿಕ ಪಾಪಮಾಡುವುದಕ್ಕಾಗಿಯಲ್ಲ. ದೇಹವು ಪ್ರಭುವಿಗೋಸ್ಕರವಿದೆ, ಪ್ರಭುವು ದೇಹಕ್ಕೋಸ್ಕರವಿದ್ದಾನೆ.


ನಾಲಿಗೆಯು ಬೆಂಕಿಯ ಕಿಡಿಯಂತೆ ನಮ್ಮ ದೇಹದ ಭಾಗಗಳಲ್ಲಿ ಅದು ಕೆಟ್ಟ ಲೋಕದಂತಿದೆ. ಹೇಗೆಂದರೆ, ನಾಲಿಗೆಯು ನಮ್ಮ ದೇಹದಲ್ಲೆಲ್ಲಾ ಕೆಟ್ಟತನವನ್ನು ಹರಡುತ್ತದೆ. ನಮ್ಮ ಜೀವಿತದ ಮೇಲೆಲ್ಲಾ ಪ್ರಭಾವ ಬೀರುವ ಬೆಂಕಿಯನ್ನು ಅದು ನರಕದಿಂದ ಪಡೆದು ಹೊತ್ತಿಸುತ್ತದೆ.


ಬಾಳನ ಆಲಯವನ್ನೂ ಅವರು ಹಾಳುಗೆಡವಿದರು. ಅವರು ಬಾಳನ ಆಲಯವನ್ನು ಶೌಚಗೃಹವನ್ನಾಗಿ ಮಾಡಿದರು. ಇಂದೂ ಸಹ ಅದನ್ನು ಶೌಚಗೃಹವಾಗಿ ಬಳಸುತ್ತಾರೆ.


ಯೇಸು, “ನಿಮಗೆ ಇನ್ನೂ ಅರ್ಥವಾಗುವುದಿಲ್ಲವೇ?


ಆದರೆ ಒಬ್ಬ ಮನುಷ್ಯನ ಬಾಯಿಂದ ಹೊರಡುವ ಕೆಟ್ಟಮಾತುಗಳು ಅವನ ಆಲೋಚನೆಯಿಂದ ಉದ್ಭವಿಸಿ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ.


ಆಹಾರವು ಒಬ್ಬ ಮನುಷ್ಯನ ಹೃದಯದೊಳಕ್ಕೆ ಹೋಗದೆ ಹೊಟ್ಟೆಯೊಳಕ್ಕೆ ಹೋಗುತ್ತದೆ. ಅನಂತರ ಅದು ಅಲ್ಲಿಂದ ಹೊರಬರುತ್ತದೆ” ಎಂದು ಹೇಳಿದನು. (ಹೀಗೆ ತಿನ್ನತಕ್ಕ ಯಾವ ಆಹಾರವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದನು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು