Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:25 - ಪರಿಶುದ್ದ ಬೈಬಲ್‌

25 ಆಗ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನನಗೆ ಸಹಾಯ ಮಾಡು” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, “ಕರ್ತನೇ ನನಗೆ ಸಹಾಯಮಾಡು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದರೂ ಆಕೆ ಯೇಸುವಿಗೆ ಅಡ್ಡಬಿದ್ದು, “ಸ್ವಾಮೀ, ಸಹಾಯ ಮಾಡಿ,” ಎಂದು ಯಾಚಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಆಕೆ ಬಂದು ಆತನಿಗೆ ಅಡ್ಡಬಿದ್ದು - ಸ್ವಾಮೀ, ನನಗೆ ಅನುಗ್ರಹ ಮಾಡಬೇಕು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಕೆಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮೀ, ನನಗೆ ಸಹಾಯಮಾಡು!” ಎಂದು ಕೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ತ್ಯಾ ಬಾಯ್ಕೊಮನ್ಸಿನ್ ಫಿಡೆ ಯೆವ್ನ್ ಜೆಜುಚ್ಯಾ ಪಾಯಾ ಪಡ್ಲಿನ್ ಅನಿ, “ಧನಿಯಾ ಮಾಜಿ ಮಜತ್ ಕರ್!” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:25
10 ತಿಳಿವುಗಳ ಹೋಲಿಕೆ  

ಆಗಿಂದಾಗ್ಗೆ ದೆವ್ವವು ಅವನನ್ನು ಕೊಲ್ಲಲು ಬೆಂಕಿಯೊಳಗೆ ಅಥವಾ ನೀರಿನೊಳಗೆ ಎಸೆಯುತ್ತದೆ. ನಿನಗೆ ಸಾಧ್ಯವಿರುವುದಾದರೆ, ದಯವಿಟ್ಟು ನಮ್ಮ ಮೇಲೆ ಕರುಣೆಯಿಟ್ಟು ಸಹಾಯಮಾಡು” ಎಂದು ಉತ್ತರಿಸಿದನು.


ಜನರೆಲ್ಲರೂ ಕುರುಡರನ್ನು ಗದರಿಸಿ, ಸುಮ್ಮನಿರಬೇಕೆಂದು ಹೇಳಿದರು. ಆದರೆ ಆ ಕುರುಡರು, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಹೆಚ್ಚುಹೆಚ್ಚು ಕೂಗಿಕೊಂಡರು.


ದೋಣಿಯಲ್ಲಿದ್ದ ಶಿಷ್ಯರು ಯೇಸುವನ್ನು ಆರಾಧಿಸಿ, “ನೀನು ನಿಜವಾಗಿಯೂ ದೇವರ ಮಗನು” ಎಂದು ಹೇಳಿದರು.


ಯಾಕೋಬನು ದೇವದೂತನೊಡನೆ ಹೋರಾಡಿ ಗೆದ್ದನು. ಅವನು ಕನಿಕರಕ್ಕಾಗಿ ಮೊರೆಯಿಟ್ಟನು. ಇದು ಬೇತೇಲ್ ಎಂಬಲ್ಲಿ ನಡೆಯಿತು. ಆ ಸ್ಥಳದಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.


ಆ ಪುರುಷನು ಯಾಕೋಬನಿಗೆ, “ನನ್ನನ್ನು ಬಿಡು, ಸೂರ್ಯೋದಯವಾಗುತ್ತಿದೆ” ಎಂದು ಹೇಳಿದನು. ಆದರೆ ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನು ಬಿಡುವುದಿಲ್ಲ” ಎಂದು ಹೇಳಿದನು.


ಆ ಹುಡುಗನ ತಂದೆಯು ಸಂತೋಷದಿಂದ, “ನಾನು ನಂಬುತ್ತೇನೆ. ಇನ್ನೂ ಹೆಚ್ಚಾಗಿ ನಂಬಲು ನನಗೆ ಸಹಾಯ ಮಾಡು” ಎಂದನು.


ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದನು. ಅವನು ಯೇಸುವಿನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಇಷ್ಟಪಟ್ಟರೆ ನನ್ನನ್ನು ಗುಣಪಡಿಸಬಲ್ಲೆ” ಎಂದನು.


ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು