Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 16:21 - ಪರಿಶುದ್ದ ಬೈಬಲ್‌

21 ಆ ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದುಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ" ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇವಿುಗೆ ಹೋಗಿ ಅಲ್ಲಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕೆಂದು ತನ್ನ ಶಿಷ್ಯರಿಗೆ ತಿಳಿಸುವದಕ್ಕೆ ಪ್ರಾರಂಭಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತ್ಯಾ ದಿಸಾಕ್ನಾ ಪಿಢೆ ಜೆಜು ಅಪ್ನಾಚ್ಯಾ ಶಿಸಾಕ್ನಿ, “ಮಿಯಾ ಜೆರುಜಲೆಮಾಕ್ ಜಾವ್ಕ್ ಪಾಜೆ ಅನಿ ಥೈ ಮುಖಂಡಾನಿಕ್ನಾ, ಮುಖ್ಯ ಯಾಜಕಾನಿಕ್ನಾ ಅನಿ ಖಾಯ್ದೆ ಶಿಕ್ವುತಲ್ಯಾನಿಕ್ನಾ ಮಿಯಾ ಲೈ ತರಾಸ್ ಸೊಸುಕ್ ಪಾಜೆ. ಮಾಕಾ ಜಿವಾನಿ ಮಾರುನ್ ಹೊತಾ; ಖರೆ ತಿನ್ ದಿಸಾಂಚ್ಯಾ ಮಾನಾ ಮಿಯಾ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಕಾಯ್ಬಿ ಧಾಪುನ್ ಘೆಯ್ನಸ್ತಾನಾ ಫೊಡುನ್ ಸಾಂಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 16:21
31 ತಿಳಿವುಗಳ ಹೋಲಿಕೆ  

ಆದರೆ ನಾನು ನಿಮಗೆ ಹೇಳುವುದೇನೆಂದರೆ, ಎಲೀಯನು ಈಗಾಗಲೇ ಬಂದಿದ್ದಾನೆ. ಆದರೆ ಆತನು ಯಾರೆಂಬುದು ಜನರಿಗೆ ತಿಳಿಯಲಿಲ್ಲ. ಜನರು ತಮಗಿಷ್ಟಬಂದಂತೆ ಅವನನ್ನು ಹಿಂಸಿಸಿದರು. ಅದೇ ರೀತಿ ಅವರು ಮನುಷ್ಯಕುಮಾರನನ್ನು ಹಿಂಸೆಪಡಿಸುವರು” ಎಂದು ಉತ್ತರಕೊಟ್ಟನು.


“ಸ್ವಾಮೀ, ಆ ಸುಳ್ಳುಗಾರನು ಬದುಕಿದ್ದಾಗ, ‘ಮೂರು ದಿನಗಳ ಬಳಿಕ ನಾನು ಪುನರುತ್ಥಾನ ಹೊಂದುತ್ತೇನೆ’ ಎಂದು ಹೇಳಿದ್ದು ನಮಗಿನ್ನೂ ನೆನಪಿದೆ.


ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.


ಆದರೆ ಅದಕ್ಕಿಂತಲೂ ಮೊದಲು, ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಿ ಈ ಕಾಲದ ಜನರಿಂದ ತಿರಸ್ಕರಿಸಲ್ಪಡುವನು.


ಬಳಿಕ ಯೇಸು ಅವರಿಗೆ, “ಕ್ರಿಸ್ತನು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಎದ್ದುಬರುವನು ಎಂದು ಬರೆಯಲ್ಪಟ್ಟಿದೆ.


ನಂತರ ಯೇಸು ತನ್ನ ಶಿಷ್ಯರಿಗೆ ಉಪದೇಶಿಸುತ್ತಾ “ಮನುಷ್ಯಕುಮಾರನು ಅನೇಕ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಿರಿಯ ಯೆಹೂದ್ಯನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಆತನನ್ನು ತಿರಸ್ಕರಿಸಿ ಕೊಲ್ಲುವರು. ಆದರೆ ಮೂರನೆಯ ದಿನದಲ್ಲಿ ಆತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬರುತ್ತಾನೆ” ಎಂದು ಹೇಳಿದನು.


ಇವರಿಬ್ಬರು ಸಹ ಪ್ರಕಾಶಮಾನವಾಗಿ ಹೊಳೆಯುತ್ತಿದ್ದರು. ಜೆರುಸಲೇಮಿನಲ್ಲಿ ಸಂಭವಿಸಲಿಕ್ಕಿದ್ದ ಆತನ ಮರಣದ ಬಗ್ಗೆ ಅವರು ಮಾತಾಡುತ್ತಿದ್ದರು.


ಯೇಸು ಮಾತಾಡುತ್ತಿರವಷ್ಟರಲ್ಲೇ ಯೂದನು ಅಲ್ಲಿಗೆ ಬಂದನು. ಯೂದನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾಗಿದ್ದನು. ಮಹಾಯಾಜಕರು ಮತ್ತು ಹಿರಿಯ ನಾಯಕರು ಕಳುಹಿಸಿದ್ದ ಅನೇಕ ಜನರು ಅವನೊಂದಿಗಿದ್ದರು. ಅವರು ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡಿದ್ದರು.


“ನಾಳಿದ್ದು ಪಸ್ಕಹಬ್ಬವೆಂಬುದು ನಿಮಗೆ ತಿಳಿದಿದೆ. ಅಂದು ಮನುಷ್ಯಕುಮಾರನನ್ನು ಶಿಲುಬೆಗೇರಿಸಲು ವೈರಿಗಳಿಗೆ ಒಪ್ಪಿಸುವರು” ಎಂದನು.


ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಯೇಸುವಿನ ಮೇಲೆ ದೂರು ಹೇಳಿದಾಗ, ಆತನು ಮೌನವಾಗಿದ್ದನು.


ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.


ಸಲ್ಲೂ, ಅಮೋಕ್, ಹಿಲ್ಕೀಯ ಮತ್ತು ಯೆದಾಯ. ಇವರೆಲ್ಲಾ ಯಾಜಕರ ನಾಯಕರು. ಇವರು ಯೇಷೂವನ ಕಾಲದಲ್ಲಿದ್ದವರು.


ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.


ಆಗ ಪೇತ್ರನು ಯೇಸುವನ್ನು ಸ್ವಲ್ಪ ದೂರದಲ್ಲಿ ಕರೆದೊಯ್ದು, “ದೇವರು ನಿನ್ನನ್ನು ಕಾಪಾಡಲಿ, ನಿನಗೆಂದಿಗೂ ಹಾಗೆ ಸಂಭವಿಸದಿರಲಿ!” ಎಂದು ಪ್ರತಿಭಟಿಸಿದನು.


ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ತನ್ನ ಶಿಷ್ಯರಿಗೆ, “ನೀವು ಬೆಟ್ಟದ ಮೇಲೆ ಕಂಡ ದರ್ಶನವನ್ನು ಈಗ ಯಾರಿಗೂ ಹೇಳದೆ ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬಂದ ಮೇಲೆ ತಿಳಿಸಿರಿ” ಎಂದು ಆಜ್ಞಾಪಿಸಿದನು.


ಆದರೆ ಯೇಸು ಇಲ್ಲಿಲ್ಲ. ಆತನು ತಾನು ತಿಳಿಸಿದ್ದಂತೆಯೇ ಪುನರುತ್ಥಾನ ಹೊಂದಿದ್ದಾನೆ. ಬನ್ನಿ, ಆತನ ದೇಹವಿದ್ದ ಸ್ಥಳವನ್ನು ನೋಡಿ.


ಯೇಸು ಅವರಿಗೆ, “ಎಲೀಯನೇ ಮೊದಲು ಬರಬೇಕೆಂದು ಅವರು ಹೇಳುವುದು ಸರಿ. ಎಲೀಯನು ಎಲ್ಲವನ್ನು ಸರಿಪಡಿಸುತ್ತಾನೆ. ಆದರೆ ಮನುಷ್ಯಕುಮಾರನು ಬಹಳ ಸಂಕಟವನ್ನು ಅನುಭವಿಸುವನೆಂತಲೂ ಜನರು ಆತನನ್ನು ಹೀನೈಸುವರೆಂತಲೂ ಪವಿತ್ರಗ್ರಂಥವು ಏಕೆ ಹೇಳುತ್ತದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು