ಮತ್ತಾಯ 16:27 - ಪರಿಶುದ್ದ ಬೈಬಲ್27 ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಮಾನ್ಸಾಚೊ ಲೆಕ್ ಅಪ್ನಾಚ್ಯಾ ಬಾಬಾಚ್ಯಾ ಮಹಿಮೆನ್ ಭರುನ್ ದೆವಾಚ್ಯಾ ದುತಾಂಚ್ಯಾ ವಾಂಗ್ಡಾ ಯೆತಲೊ ಹಾಯ್ ಅನಿ ತನ್ನಾ ತೊ ಸಗ್ಳ್ಯಾಕ್ನಿ ತೆಂಚ್ಯಾ ಕರ್ನಾಂಚ್ಯಾ ಪರ್‍ಕಾರ್ ತೆಂಕಾ-ತೆಂಕಾ ಭೊಮಾನ್ ದಿತಾ. ಅಧ್ಯಾಯವನ್ನು ನೋಡಿ |