ಮತ್ತಾಯ 17:1 - ಪರಿಶುದ್ದ ಬೈಬಲ್1 ಆರು ದಿನಗಳ ತರುವಾಯ, ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ಸಹೋದರನಾದ ಯೋಹಾನನನ್ನು ಕರೆದುಕೊಂಡು ಯೇಸು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು. ಅವರಲ್ಲದೆ ಬೇರೆ ಯಾರೂ ಅಲ್ಲಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆರು ದಿನಗಳ ಬಳಿಕ ಪೇತ್ರ, ಯೊವಾನ್ನ ಇವರನ್ನು ಯೇಸುಸ್ವಾಮಿ ಪ್ರತ್ಯೇಕವಾಗಿ ತಮ್ಮೊಡನೆ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆರು ದಿವಸಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಇವನ ತಮ್ಮನಾದ ಯೋಹಾನನನ್ನೂ ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಅವನ ಸಹೋದರ ಯೋಹಾನನನ್ನೂ ಪ್ರತ್ಯೇಕವಾಗಿ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಸಾ ದಿಸಾ ಹೊಲ್ಲ್ಯಾ ಮಾನಾ ಜೆಜು ಪೆದ್ರುಕ್, ಜಾಕೊಬಾಕ್ ಅನಿ ತೆಚ್ಯಾ ಭಾವಾಕ್ ಜುವಾಂವಾಕ್ ಘೆವ್ನ್ ಎಕ್ ಉಪ್ಪರ್ಲ್ಯಾ ಮಡ್ಡಿ ವರ್‍ತಿ ಗೆಲೊ. ಥೈ ತೆನಿ ಎವ್ಡೆಚ್ ಹೊತ್ತೆ. ಅಧ್ಯಾಯವನ್ನು ನೋಡಿ |