ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.
ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.
ಆಗ, ಸೈತಾನನು ಯೆಹೋವನ ಬಳಿಯಿಂದ ಹೊರಟುಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು.