Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:18 - ಪರಿಶುದ್ದ ಬೈಬಲ್‌

18 ಯೇಸು ಬಾಲಕನಲ್ಲಿದ್ದ ದೆವ್ವಕ್ಕೆ ಬಲವಾಗಿ ಗದರಿಸಲು ದೆವ್ವವು ಅವನನ್ನು ಬಿಟ್ಟುಹೋಯಿತು. ಅವನಿಗೆ ಆ ಕ್ಷಣದಲ್ಲೇ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅನಂತರ ಆ ಹುಡುಗನಲ್ಲಿದ್ದ ದೆವ್ವವನ್ನು ಅವರು ಗದರಿಸಿದೊಡನೆಯೇ, ಅದು ಅವನನ್ನು ಬಿಟ್ಟುಹೋಯಿತು. ಅವನು ತಕ್ಷಣವೇ ಸ್ವಸ್ಥನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೇಸು ಅವನನ್ನು ಗದರಿಸಲು ದೆವ್ವ ಅವನನ್ನು ಬಿಟ್ಟುಹೋಯಿತು; ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಹುಡುಗನೊಳಗಿಂದ ಹೊರಟುಹೋಯಿತು. ಆಗ ಆ ಹುಡುಗನು ಅದೇ ಗಳಿಗೆಯಲ್ಲಿಯೇ ಗುಣಮುಖನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜೆಜುನ್ ತ್ಯಾ ಗಿರ್‍ಯಾಕ್ ಭಾಯ್ರ್ ಯೆವ್ಕ್ ಸಾಂಗ್ಲ್ಯಾನ್ ಅನಿ ತೊ ಗಿರೊ ತ್ಯಾ ಪೊರಾತ್ನಾ ಭಾಯ್ರ್ ಗೆಲೊ, ಅನಿ ತಾಬೊಡ್ತೊಬ್ ತೊ ಪೊರ್ ಗುನ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:18
15 ತಿಳಿವುಗಳ ಹೋಲಿಕೆ  

ಯೇಸು ಹಿಂತಿರುಗಿ ಆ ಹೆಂಗಸನ್ನು ನೋಡಿ, “ಮಗಳೇ, ಸಂತೋಷಪಡು! ನಿನ್ನ ನಂಬಿಕೆಯಿಂದಲೇ ನಿನಗೆ ಗುಣವಾಯಿತು” ಎಂದು ಹೇಳಿದನು. ಆಗ ಅವಳು ಗುಣಮುಖಳಾದಳು.


ಹೀಗೆ ಆಕೆ ಅನೇಕ ದಿನಗಳವರೆಗೆ ಮಾಡಿದಳು. ಇದರಿಂದ ಬೇಸರಗೊಂಡ ಪೌಲನು ಹಿಂತಿರುಗಿ, ಆ ಆತ್ಮಕ್ಕೆ, “ಅವಳನ್ನು ಬಿಟ್ಟು ಹೋಗಬೇಕೆಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ!” ಎಂದು ಹೇಳಿದನು. ಆ ಕೂಡಲೇ ಆ ಆತ್ಮವು ಹೊರಬಂದಿತು.


ಆ ಹುಡುಗನು ಬರುತ್ತಿದ್ದಾಗ, ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿತು. ಹುಡುಗನು ತನ್ನ ಸ್ವಾಧೀನ ಕಳೆದುಕೊಂಡನು. ಆಗ ಯೇಸು ದೆವ್ವವನ್ನು ಗದರಿಸಿ ಆ ಹುಡುಗನನ್ನು ಗುಣಪಡಿಸಿದನು. ಬಳಿಕ ಅವನನ್ನು ಅವನ ತಂದೆಗೆ ಒಪ್ಪಿಸಿಕೊಟ್ಟನು.


ಯೇಸು ನಾನಾ ಬಗೆಯ ರೋಗಗಳಿಂದ ನರಳುತ್ತಿದ್ದ ಅನೇಕ ಜನರನ್ನು ಗುಣಪಡಿಸಿದನು; ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಬಿಡಿಸಿದನು. ಆದರೆ ಆ ದೆವ್ವಗಳಿಗೆ ಮಾತನಾಡಲು ಆತನು ಅವಕಾಶ ಕೊಡಲಿಲ್ಲ; ಏಕೆಂದರೆ ಯೇಸು ಯಾರೆಂಬುದು ದೆವ್ವಗಳಿಗೆ ಗೊತ್ತಿತ್ತು.


ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.


ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು.


ಅನೇಕ ಜನರೊಳಗಿಂದ ದೆವ್ವಗಳು, “ನೀನು ದೇವಕುಮಾರ” ಎಂದು ಆರ್ಭಟಿಸುತ್ತಾ ಬಿಟ್ಟುಹೋದವು. ಆದರೆ ಯೇಸು ಆ ದೆವ್ವಗಳಿಗೆ, “ಮಾತಾಡಕೂಡದೆಂದು” ಬಲವಾಗಿ ಆಜ್ಞಾಪಿಸಿದನು. ಯೇಸುವೇ “ಕ್ರಿಸ್ತ”ನೆಂದು ದೆವ್ವಗಳಿಗೆ ತಿಳಿದಿತ್ತು.


ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು.


ಆಗ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅವನನ್ನು ದೆವ್ವದಿಂದ ಬಿಡಿಸಲು ನಾವು ಪ್ರಯತ್ನಿಸಿದರೂ ನಮಗೇಕೆ ಸಾಧ್ಯವಾಗಲಿಲ್ಲ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು