Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:21 - ಪರಿಶುದ್ದ ಬೈಬಲ್‌

21

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಅಲ್ಲಿಗೆ ಸರಿದು ಹೋಗು’ ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಿಮ್ಮಿಂದ ಅಸಾಧ್ಯವಾದುದು ಒಂದೂ ಇರದು. (ಈ ಬಗೆಯ ದೆವ್ವಗಳನ್ನು ಹೊರಗಟ್ಟಲು ಪ್ರಾರ್ಥನೆ ಮತ್ತು ಉಪವಾಸ ಮಾಡುವುದನ್ನು ಬಿಟ್ಟು ಬೇರೆ ಮಾರ್ಗವಿಲ್ಲ),” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಲ್ಲಿಂದ ಅಲ್ಲಿಗೆ ಹೋಗು ಎಂದು ಹೇಳಿದರೂ ಅದು ಹೋಗುವದು; ಮತ್ತು ನಿಮ್ಮ ಕೈಯಿಂದಾಗದಂಥದು ಒಂದೂ ಇರುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೂ ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಈ ರೀತಿಯಾದ ದೆವ್ವ ಹೊರಟು ಹೋಗುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಾಗ್ನಿ ಅನಿ ಉಪಾಸ್ ಸೊಡುನ್ ಅನಿ ಕೆಚ್ಯಾನ್ಬಿ ಅಸ್ಲ್ಯಾ ಗಿರ್‍ಯಾಕ್ನಿ ಬಾಯ್ರ್ ಘಾಲುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:21
10 ತಿಳಿವುಗಳ ಹೋಲಿಕೆ  

ಯೇಸು, “ಈ ಬಗೆಯ ದೆವ್ವವನ್ನು ಪ್ರಾರ್ಥನೆಯಿಂದ ಮಾತ್ರ ಬಿಡಿಸಲು ಸಾಧ್ಯ” ಎಂದು ಉತ್ತರಿಸಿದನು.


ಒಮ್ಮೆ ಶಿಷ್ಯರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದರು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು.


ನಂತರ ಎಲೀಯನು, “ನನ್ನ ದೇವರಾದ ಯೆಹೋವನೇ, ಈ ವಿಧವೆಯು ತನ್ನ ಮನೆಯಲ್ಲಿ ನನಗೆ ಸ್ಥಳವನ್ನು ಕೊಟ್ಟಿದ್ದಾಳೆ. ನೀನು ಅವಳಿಗೆ ಈ ಕೇಡನ್ನು ಮಾಡುವೆಯಾ? ನೀನು ಅವಳ ಮಗುವನ್ನು ಸಾಯಿಸುವೆಯಾ?” ಎಂದು ಪ್ರಾರ್ಥಿಸಿದನು.


ಆಗ ನಾನು ದೇವರಾದ ನನ್ನ ಯೆಹೋವನನ್ನು ಪ್ರಾರ್ಥಿಸಿದೆ ಮತ್ತು ಆತನ ಸಹಾಯವನ್ನು ಕೋರಿದೆ. ನಾನು ಯಾವ ಆಹಾರವನ್ನೂ ಸ್ವೀಕರಿಸಲಿಲ್ಲ ಮತ್ತು ದುಃಖಸೂಚಕವಾದ ವಸ್ತ್ರಗಳನ್ನು ಧರಿಸಿಕೊಂಡೆ. ನನ್ನ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡೆ.


ಆಗ ಅದು ಹೊರಗೆ ಹೋಗಿ ತನಗಿಂತಲೂ ಹೆಚ್ಚು ದುಷ್ಟರಾದ ಏಳು ದುರಾತ್ಮಗಳನ್ನು ಕರೆದುಕೊಂಡು ಬರುತ್ತದೆ. ಆ ದುರಾತ್ಮಗಳೆಲ್ಲಾ ಆ ಮನುಷ್ಯನೊಳಗೆ ಸೇರಿಕೊಂಡು ವಾಸಮಾಡಲಾರಂಭಿಸುತ್ತವೆ. ಆಗ ಆ ಮನುಷ್ಯನಿಗೆ ಮೊದಲಿಗಿಂತಲೂ ಹೆಚ್ಚಿನ ಕಷ್ಟಗಳು ಉಂಟಾಗುತ್ತವೆ. ಈ ದಿನಗಳಲ್ಲಿ ಜೀವಿಸುವ ದುಷ್ಟ ಜನರಿಗೆ ಅದೇ ರೀತಿ ಆಗುವುದು” ಎಂದನು.


ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು.


ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಈ ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು.


ಆದ್ದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.


ಕಷ್ಟಕರವಾದ ಮತ್ತು ಅಪಾಯಕರವಾದ ಕೆಲಸಗಳನ್ನು ಮಾಡಿದ್ದೇನೆ. ಕೆಲವು ಸಲ ನಿದ್ರಿಸಲೂ ಇಲ್ಲ. ಹಸಿವೆ ಬಾಯಾರಿಕೆಗಳಿಂದ ಕಷ್ಟಪಟ್ಟಿದ್ದೇನೆ. ಅನೇಕಸಲ ನನಗೆ ಊಟ ಇರಲಿಲ್ಲ. ಚಳಿಯಿಂದ ನಡುಗುತ್ತಿದ್ದರೂ ಬಟ್ಟೆಯಿರಲಿಲ್ಲ.


ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು