ಮತ್ತಾಯ 17:25 - ಪರಿಶುದ್ದ ಬೈಬಲ್25 ಅದಕ್ಕೆ ಪೇತ್ರನು, “ಹೌದು, ಸಲ್ಲಿಸುತ್ತಾನೆ” ಎಂದು ಉತ್ತರಕೊಟ್ಟನು. ಬಳಿಕ ಪೇತ್ರನು ಯೇಸುವಿದ್ದ ಮನೆಯೊಳಕ್ಕೆ ಹೋದನು. ಅವನು ಈ ವಿಷಯವನ್ನು ಹೇಳುವುದಕ್ಕಿಂತ ಮೊದಲೇ ಯೇಸು ಅವನಿಗೆ, “ಭೂಲೋಕದ ರಾಜರುಗಳು ಜನರಿಂದ ಅನೇಕ ಬಗೆಯ ತೆರಿಗೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ತೆರಿಗೆ ಕೊಡುವ ಜನರು ಯಾರು? ರಾಜನ ಮಕ್ಕಳೇ ಅಥವಾ ಬೇರೆ ಜನರೇ? ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಬಳಿಕ ಮನೆಗೆ ಬಂದಾಗ, ಅವನು ಮಾತೆತ್ತುವುದಕ್ಕೆ ಮೊದಲೇ ಯೇಸು, “ಸಿಮೋನಾ, ನಿನಗೆ ಏನನ್ನಿಸುತ್ತದೆ? ಇಹಲೋಕದ ರಾಜರು ಕಂದಾಯವನ್ನಾಗಲಿ, ತೆರಿಗೆಯನ್ನಾಗಲಿ ಯಾರಿಂದ ವಸೂಲಿಮಾಡುತ್ತಾರೆ? ತಮ್ಮ ಪುತ್ರರಿಂದಲೋ ಅಥವಾ ಪರರಿಂದಲೋ?" ಎಂದು ಕೇಳಿದರು. “ಪರರಿಂದಲೇ,” ಎಂದು ಪೇತ್ರನು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಪೇತ್ರನು ಮನೆಯೊಳಕ್ಕೆ ಬಂದಾಗ ಯೇಸು ಅವನಿಗಿಂತ ಮೊದಲೇ - ಸೀಮೋನಾ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಸುಂಕವನ್ನಾಗಲಿ ಮಂಡೇತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ? ಬೇರೆಯವರಿಂದಲೋ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದನು. ಅವನು ಮನೆಯೊಳಕ್ಕೆ ಬಂದಾಗ ಯೇಸು ಮುಂದಾಗಿಯೇ ಅವನಿಗೆ, “ಸೀಮೋನನೇ ನಿನಗೆ ಹೇಗೆ ತೋರುತ್ತದೆ? ಭೂಲೋಕದ ರಾಜರು ಯಾರಿಂದ ಕಂದಾಯವನ್ನು ಇಲ್ಲವೆ ತೆರಿಗೆಯನ್ನು ವಸೂಲಿ ಮಾಡುತ್ತಾರೆ? ತಮ್ಮ ಪುತ್ರರಿಂದಲೋ ಇಲ್ಲವೆ ಪರರಿಂದಲೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತನ್ನಾ ಪೆದ್ರುನ್, “ಹೊಯ್, ಕಶ್ಯಾಕ್ ಭರಿನಾ;” ಮನುನ್ ಜಬಾಬ್ ದಿಲ್ಯಾನ್. ಪೆದ್ರು ಘರಾತ್ ಗೆಲ್ಲ್ಯಾ ತನ್ನಾ ಜೆಜುನ್,“ಸಿಮಾವ್ ತಿಯಾ ಕಾಯ್ ಮನ್ತೆ? ಹ್ಯಾ ಜಗಾಚ್ಯಾ ರಾಜಾಕ್ನಿ ತೆರ್‍ಗಿ ಕೊನ್ ದಿವ್ಕ್ ಪಾಜೆ? ತೆಂಚ್ಯಾ ದೆಸಾಚ್ಯಾ ಲೊಕಾನಿ ಕಾಯ್ ದುಸ್ರ್ಯಾ ದೆಸಾಚ್ಯಾ ಲೊಕಾನಿ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |
ಇಸ್ರೇಲರಲ್ಲಿನ ಒಬ್ಬನು, “ನೀವು ಅವನನ್ನು ನೋಡಿದಿರಾ! ಅವನನ್ನು ನೋಡಿ! ಆ ಗೊಲ್ಯಾತನು ಪ್ರತಿನಿತ್ಯ ಹೊರಗೆ ಬಂದು ಇಸ್ರೇಲರನ್ನು ಮತ್ತೆಮತ್ತೆ ಹಾಸ್ಯಮಾಡುತ್ತಿದ್ದಾನೆ. ಅವನನ್ನು ಕೊಂದವನಿಗೆ ಸೌಲನು ಅಪಾರ ಐಶ್ವರ್ಯವನ್ನು ಕೊಡುವುದಲ್ಲದೆ ತನ್ನ ಮಗಳನ್ನೂ ಅವನಿಗೆ ಕೊಟ್ಟು ಮದುವೆ ಮಾಡುತ್ತಾನೆ; ಅಲ್ಲದೆ ಅವನ ವಂಶವನ್ನು ಇಸ್ರೇಲಿನಲ್ಲಿ ಸ್ವತಂತ್ರಗೊಳಿಸುತ್ತಾನೆ” ಎಂದು ಹೇಳಿದನು.