ಮತ್ತಾಯ 17:27 - ಪರಿಶುದ್ದ ಬೈಬಲ್27 ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆದರೂ, ನಾವು ಇವರಿಗೆ ಅಡ್ಡಿಯಾಗಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆದರೂ ನಮ್ಮ ವಿಷಯವಾಗಿ ಅವರು ಬೇಸರಗೊಳ್ಳಬಾರದು; ನೀನು ಸಮುದ್ರಕ್ಕೆ ಹೋಗಿ ಗಾಳಾ ಹಾಕಿ ಮೊದಲು ಸಿಕ್ಕುವ ಮೀನನ್ನು ಎತ್ತು; ಅದರ ಬಾಯಿ ತೆರೆದು ನೋಡಿದರೆ ಅದರಲ್ಲಿ ಒಂದು ರೂಪಾಯಿ ಸಿಕ್ಕುವದು; ಅದನ್ನು ತೆಗೆದುಕೊಂಡು ನಮ್ಮಿಬ್ಬರದಂತ ಹೇಳಿ ಅವರಿಗೆ ಕೊಡು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಖರೆ ಅಮಿ ತೆಂಚೊ ಮನ್ ದುಕ್ವುತಲೊ ನಕ್ಕೊ. ತೆಚೆಸಾಟ್ನಿ ಸಮುಂದರಾಕ್ ಜಾ ಅನಿ ಗರಿ ಟಾಕ್ ಗರಿಕ್‍ಲಾಗಲ್ಲಿ ಪಯ್ಲಿಚಿ ಮಾಸೊಳಿ ಕಾಡ್. ತ್ಯಾ ಮಾಸೊಳಿಚ್ಯಾ ತೊಂಡಾತ್ ದೆವಾಚ್ಯಾ ಗುಡಿಚಿ ಅನಿ ಅಮ್ಚಿ ತೆರ್‍ಗಿ ಭರಿಸರ್ಕ್ಯಾ ಕಿಮ್ತಿಚೊ ಎಕ್ ಪೈಸೊ ಗಾವ್ತಾ. ತೊ ಘೆ ಅನಿ ತೆಂಕಾ ಅಮ್ಚಿ ತೆರ್‍ಗಿ ಮನುನ್ ದಿ.” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |