Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:1 - ಪರಿಶುದ್ದ ಬೈಬಲ್‌

1 ಆ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪರಲೋಕರಾಜ್ಯದಲ್ಲಿ ಯಾರಿಗೆ ಅತ್ಯುತ್ತಮ ಸ್ಥಾನ ದೊರೆಯುತ್ತದೆ” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ಸಮಯದಲ್ಲಿ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು - ಪರಲೋಕರಾಜ್ಯದಲ್ಲಿ ಯಾವನು ಹೆಚ್ಚಿನವನು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಶಿಸಾ ಜೆಜುಕ್ಡೆ ಯೆಲಿ, ಅನಿ, “ಸರ್‍ಗಾಚ್ಯಾ ರಾಜಾತ್ ಕೊನ್ ಮೊಟೊ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:1
13 ತಿಳಿವುಗಳ ಹೋಲಿಕೆ  

ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.


ಸೇವಕನಂತೆ ನಿಮಗೆ ಸೇವೆ ಮಾಡುವವನೇ ನಿಮ್ಮಲ್ಲಿ ಅತ್ಯಂತ ದೊಡ್ಡವನಾಗಿದ್ದಾನೆ.


ಸಹೋದರ ಸಹೋದರಿಯರೆಂಬ ಅನ್ಯೋನ್ಯಭಾವದಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ. ನೀವು ನಿಮಗೋಸ್ಕರ ಬಯಸುವ ಮರ್ಯಾದೆಗಿಂತಲೂ ಹೆಚ್ಚು ಮರ್ಯಾದೆಯನ್ನು ನಿಮ್ಮ ಸಹೋದರ ಸಹೋದರಿಯರಿಗೆ ಕೊಡಿರಿ.


“‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.


“ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.


ಯೇಸು ಚಿಕ್ಕ ಮಗುವನ್ನು ತನ್ನ ಹತ್ತಿರಕ್ಕೆ ಕರೆದು ತನ್ನ ಶಿಷ್ಯರ ಮುಂದೆ ಆ ಮಗುವನ್ನು ನಿಲ್ಲಿಸಿ ಹೀಗೆಂದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು