Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:10 - ಪರಿಶುದ್ದ ಬೈಬಲ್‌

10 “ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ಹೀನೈಸದಂತೆ ನೋಡಿಕೊಳ್ಳಿರಿ. ಪರಲೋಕದಲ್ಲಿರುವ ಅವರ ದೂತರು ಪರಲೋಕದ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 “ಅಬಕಾ, ಹ್ಯಾ ಬಾರಿಕ್ಲ್ಯಾತ್ಲ್ಯಾ ಕೊನಾಕ್ಬಿ ತುಮಿ ಕಿಮ್ಮತ್‍ನಾ ಮನುನ್ ಯವ್ಜುನಕಾಶಿ. ಮಿಯಾ ತುಮ್ಕಾ ಸಾಂಗ್ತಾ ತೆಂಚೆಸಾಟ್ನಿ ಮನುನ್ ಹೊತ್ತಿ ದೆವಾಚಿ ದುತಾ ಕನ್ನಾಬಿ ಸರ್‍ಗಾರ್ ಬಾಬಾಚ್ಯಾ ಇದ್ರಾಕುಚ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:10
45 ತಿಳಿವುಗಳ ಹೋಲಿಕೆ  

ನೀನು ಹೋದಲ್ಲೆಲ್ಲಾ ನಿನ್ನನ್ನು ಕಾಯಲು ಆತನು ತನ್ನ ದೂತರಿಗೆ ಆಜ್ಞಾಪಿಸುವನು.


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ಯೆಹೋವನ ಭಕ್ತರ ಸುತ್ತಲೂ ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು.


“ಸ್ವಲ್ಪ ಸಮಯದ ನಂತರ ಲಾಜರನು ಸತ್ತನು. ದೇವದೂತರು ಲಾಜರನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಒಂದು ದಿನ ಐಶ್ವರ್ಯವಂತನೂ ಸತ್ತನು. ಅವನಿಗೆ ಸಮಾಧಿ ಮಾಡಲಾಯಿತು.


ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.


ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.


ಅದೇ ರೀತಿ ಈ ಚಿಕ್ಕ ಮಕ್ಕಳಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳಬಾರದೆಂಬುದೇ ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಾಗಿದೆ.


“ದೀನತೆಯಿಂದ ನನ್ನನ್ನು ಹಿಂಬಾಲಿಸುವವರಲ್ಲಿ ಯಾರನ್ನಾದರೂ ಪಾಪಕ್ಕೆ ನಡೆಸುವವನಿಗೆ ಬಹಳ ಕೇಡಾಗುವುದು. ಅವನು ತನ್ನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಆಳವಾದ ಸಮುದ್ರದಲ್ಲಿ ಮುಳುಗುವುದೇ ಉತ್ತಮ.


ಹೆರೋದನು ಸತ್ತನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಯೋಸೇಫನು ಈಜಿಪ್ಟಿನಲ್ಲಿ ಇರುವಾಗಲೇ ಇದು ಸಂಭವಿಸಿತು.


ಜ್ಞಾನಿಗಳು ಹೊರಟುಹೋದ ನಂತರ ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ಹೆರೋದನು ಮಗುವನ್ನು ಹುಡುಕಲು ಪ್ರಾರಂಭಿಸುವನು. ಅವನು ಮಗುವನ್ನು ಕೊಲ್ಲಬೇಕೆಂದಿದ್ದಾನೆ. ‘ಅಪಾಯವಿಲ್ಲ’ ಎಂದು ನಾನು ನಿನಗೆ ಹೇಳುವ ತನಕ ನೀನು ಈಜಿಪ್ಟಿನಲ್ಲೇ ಇರು” ಎಂದು ಹೇಳಿದನು.


ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.


ಆದುದರಿಂದ ಈ ಉಪದೇಶವನ್ನು ಅನುಸರಿಸದವನು ಅವಿಧೇಯನಾಗಿರುವುದು ದೇವರಿಗೇ ಹೊರತು ಮಾನವನಿಗಲ್ಲ. ನಮಗೆ ತನ್ನ ಪವಿತ್ರಾತ್ಮನನ್ನು ನೀಡಿದಾತನು ದೇವರೇ.


ನೀವು ನಿಮ್ಮ ಸ್ವಂತ ಮನೆಗಳಲ್ಲಿ ತಿನ್ನಬಹುದು, ಕುಡಿಯಬಹುದು. ದೇವರ ಸಭೆಯು ಮುಖ್ಯವಾದದ್ದಲ್ಲವೆಂದು ನೀವು ಯೋಚಿಸುವಂತೆ ತೋರುತ್ತದೆ. ನೀವು ಬಡವರನ್ನು ನಾಚಿಕೆಗೆ ಗುರಿಮಾಡುತ್ತೀರಿ. ನಾನು ನಿಮಗೆ ಏನು ಹೇಳಲಿ? ನೀವು ಮಾಡುತ್ತಿರುವ ಈ ಕಾರ್ಯಕ್ಕೋಸ್ಕರ ನಾನು ನಿಮ್ಮನ್ನು ಹೊಗಳಬೇಕೇ? ನಾನು ನಿಮ್ಮನ್ನು ಹೊಗಳುವುದಿಲ್ಲ.


ಆದ್ದರಿಂದ ನಿಮ್ಮಲ್ಲಿ ಯಾರೂ ಅವನನ್ನು ತಿರಸ್ಕರಿಸಬಾರದು. ಅವನನ್ನು ನನ್ನ ಬಳಿಗೆ ಸಮಾಧಾನದಿಂದ ಕಳುಹಿಸಿಕೊಡಿರಿ. ಅವನು ಸಹೋದರರೊಂದಿಗೆ ಬರುವುದನ್ನು ನಾನು ಎದುರು ನೋಡುತ್ತಿದ್ದೇನೆ.


ಹೀಗಿರಲು, ಕ್ರಿಸ್ತನಲ್ಲಿ ನಿನ್ನ ಸಹೋದರನಾಗಿರುವವನನ್ನು ನೀನು ಟೀಕಿಸುವುದೇಕೆ? ನೀನು ನಿನ್ನ ಸಹೋದರಿನಿಗಿಂತಲೂ ಉತ್ತಮನೆಂದು ಯೋಚಿಸುವುದೇಕೆ? ನಾವೆಲ್ಲರೂ ದೇವರ ಮುಂದೆ ನಿಂತುಕೊಳ್ಳುವೆವು, ಆಗ ಆತನು ನಮ್ಮೆಲ್ಲರಿಗೂ ತೀರ್ಪು ಕೊಡುವನು.


ಕಳೆದ ರಾತ್ರಿ ದೇವರ ಬಳಿಯಿಂದ ದೂತನೊಬ್ಬನು ನನ್ನ ಬಳಿಗೆ ಬಂದಿದ್ದನು. ಆ ದೇವರನ್ನೇ ನಾನು ಆರಾಧಿಸುವುದು. ನಾನು ಆತನವನು.


ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.


ಆ ವಿಶ್ವಾಸಿಗಳು ಆಕೆಗೆ, “ನಿನಗೆ ಹುಚ್ಚು ಹಿಡಿದಿದೆ!” ಎಂದರು. ಆದರೆ ಅವಳು ತಾನು ಹೇಳುತ್ತಿರುವುದು ನಿಜವೆಂದು ಒತ್ತಿಹೇಳಿದಳು. ಆದ್ದರಿಂದ ಅವರು, “ಅವನು ಪೇತ್ರನ ದೂತನಿರಬೇಕು” ಎಂದು ಹೇಳಿದರು.


ಒಂದು ಮಧ್ಯಾಹ್ನ ಸುಮಾರು ಮೂರು ಗಂಟೆಯಲ್ಲಿ ಕೊರ್ನೇಲಿಯನಿಗೆ ಒಂದು ದರ್ಶನವಾಯಿತು. ಅವನು ಅದನ್ನು ಸ್ಪಷ್ಟವಾಗಿ ಕಂಡನು. ಆ ದರ್ಶನದಲ್ಲಿ ದೇವದೂತನೊಬ್ಬನು ಅವನ ಬಳಿಗೆ ಬಂದು, “ಕೊರ್ನೇಲಿಯನೇ” ಎಂದು ಕರೆದನು.


ಆದರೆ ರಾತ್ರಿಯಲ್ಲಿ ಪ್ರಭುವಿನ ದೂತನೊಬ್ಬನು ಸೆರೆಮನೆಯ ಬಾಗಿಲುಗಳನ್ನು ತೆರೆದನು. ದೇವದೂತನು ಅಪೊಸ್ತಲರನ್ನು ಕರೆದುಕೊಂಡು ಹೊರಗೆ ಬಂದು ಅವರಿಗೆ,


ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.


ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.


ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಈ ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು.


ನೀನು ಯೌವನಸ್ಥನಾಗಿರುವುದರಿಂದ ನಿನ್ನನ್ನು ಪ್ರಮುಖನಲ್ಲವೆಂದು ಪರಿಗಣಿಸಿ ಅಸಡ್ಡೆಮಾಡಲು ಯಾರಿಗೂ ಅವಕಾಶಕೊಡದಿರು. ವಿಶ್ವಾಸಿಗಳು ಹೇಗೆ ಜೀವಿಸಬೇಕೆಂಬುದಕ್ಕೆ ನೀನೇ ಅವರಿಗೆ ಮಾದರಿಯಾಗಿರು. ನಡೆನುಡಿಗಳಲ್ಲಿ, ಪ್ರೀತಿಯಲ್ಲಿ, ನಂಬಿಕೆಯಲ್ಲಿ ಮತ್ತು ಪರಿಶುದ್ಧ ಜೀವನದಲ್ಲಿ ನೀನೇ ಅವರಿಗೆ ಮಾದರಿಯಾಗಿರು.


ಬಲಹೀನರಾದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಬಲಹೀನನಂತಾದೆನು. ಯಾವ ರೀತಿಯಲ್ಲಾದರೂ ರಕ್ಷಣಾ ಮಾರ್ಗಕ್ಕೆ ನಡೆಸಬೇಕೆಂದು ಯಾರ್ಯಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾದೆನು.


ಆದ್ದರಿಂದ ನಂಬಿಕೆಯಲ್ಲಿ ಬಲಹೀನವಾಗಿರುವವರ ಬಲಹೀನತೆಗಳನ್ನು ನಾವು ಸಹಿಸಿಕೊಳ್ಳಬೇಕು. ನಾವು ಕೇವಲ ನಮ್ಮ ಹಿತವನ್ನು ಮಾತ್ರ ನೋಡಿಕೊಳ್ಳಬಾರದು.


ನೀನು ಮಾಂಸ ತಿನ್ನುವುದು ಅಥವಾ ದ್ರಾಕ್ಷಾರಸ ಕುಡಿಯುವುದು, ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವುದಾಗಿದ್ದರೆ ಮಾಂಸವನ್ನು ತಿನ್ನದೆ, ದ್ರಾಕ್ಷಾರಸವನ್ನು ಕುಡಿಯದೇ ಇರುವುದು ಉತ್ತಮ. ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವಂಥದ್ದನ್ನು ಮಾಡದಿರುವುದೇ ಉತ್ತಮ.


ದೇವರ ಎದುರಿನಲ್ಲಿ ಏಳು ದೇವದೂತರು ನಿಂತಿರುವುದನ್ನು ನಾನು ನೋಡಿದೆನು. ಅವರಿಗೆ ಏಳು ತುತೂರಿಗಳನ್ನು ಕೊಡಲಾಯಿತು.


ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.


“ಪೌಲನ ಪತ್ರಗಳು ಬಲಯುತವಾಗಿವೆ ಮತ್ತು ಪ್ರಾಮುಖ್ಯವಾಗಿವೆ, ಆದರೆ ಅವನು ನಮ್ಮೊಂದಿಗಿರುವಾಗ ಬಲಹೀನನಾಗಿರುತ್ತಾನೆ, ಅವನ ಮಾತುಗಳು ನಿಸ್ಸಾರವಾಗಿರುತ್ತವೆ” ಎಂದು ಕೆಲವರು ಹೇಳುತ್ತಾರೆ.


ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.


“ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.


ಬಾಗಿಹೋದ ದಂಟನ್ನು ಆತನು ಮುರಿಯುವುದಿಲ್ಲ; ಆರಿಹೋಗುತ್ತಿರುವ ದೀಪವನ್ನು ಆತನು ನಂದಿಸುವುದಿಲ್ಲ. ನ್ಯಾಯವಾದ ತೀರ್ಪು ಜಯಗಳಿಸುವಂತೆ ಆತನು ಮಾಡುವನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.”


ಅಬ್ಷಾಲೋಮನು ಎರಡು ವರ್ಷಗಳ ಕಾಲ ಜೆರುಸಲೇಮಿನಲ್ಲಿ ಇದ್ದನು. ಆದರೂ ರಾಜನಾದ ದಾವೀದನನ್ನು ಭೇಟಿಯಾಗಲು ಅವನಿಗೆ ಅವಕಾಶ ದೊರಕಲಿಲ್ಲ.


ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು