ಮತ್ತಾಯ 18:13 - ಪರಿಶುದ್ದ ಬೈಬಲ್13 ತಪ್ಪಿಸಿಕೊಂಡ ಕುರಿಯು ಸಿಕ್ಕಿದರೆ, ತಪ್ಪಿಸಕೊಳ್ಳದಿದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದು ಕುರಿಯ ವಿಷಯದಲ್ಲಿ ಅವನು ಬಹಳ ಸಂತೋಷಪಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಆ ತೊಂಬತ್ತೊಂಬತ್ತು ಕುರಿಗಳಿಗಿಂತ ಸಿಕ್ಕಿದ ಆ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದು ಸಿಕ್ಕಿದರೆ ತಪ್ಪಿಸಿಕೊಳ್ಳದೆ ಇರುವ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದಕ್ಕೋಸ್ಕರ ಹೆಚ್ಚಾಗಿ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವನು ಅದನ್ನು ಕಂಡರೆ, ತಪ್ಪಿಸಿಕೊಳ್ಳದ ತೊಂಬತ್ತೊಂಬತ್ತು ಕುರಿಗಳಿಗಿಂತ ಈ ಒಂದು ಕುರಿಯ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಮಿಯಾ ಖರೆಚ್ ಸಾಂಗ್ತಾ,ತೆಕಾ ತೆ ಬಕ್ರೆ ಗಾವಲ್ಲ್ಯಾ ತನ್ನಾ, ಹುರಲ್ಲ್ಯಾ ನ್ಹವದಾರ್ ನ್ಹವ್ ಬಕ್ರ್ಯಾಂಚ್ಯಾನ್ಕಿ ಹೆ ಕಳ್ದಲ್ಲೆ ಎಕ್ ಬಕ್ರೆ ಗಾವಲ್ಲ್ಯಾ ಸಾಟ್ನಿ ತೊ ಲೈ ಮಟ್ಲ್ಯಾರ್ ಲೈ ಕುಶಿ ಹೊತಾ. ಅಧ್ಯಾಯವನ್ನು ನೋಡಿ |
ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.