ಮತ್ತಾಯ 18:15 - ಪರಿಶುದ್ದ ಬೈಬಲ್15 “ನಿನ್ನ ಸಹೋದರನಾಗಲಿ ಸಹೋದರಿಯಾಗಲಿ ನಿನಗೆ ಯಾವುದಾದರೂ ತಪ್ಪು ಮಾಡಿದರೆ, ನೀನು ಹೋಗಿ ಅವನೊಬ್ಬನೇ ಇರುವಾಗ ಅವನ ತಪ್ಪನ್ನು ತಿಳಿಸು. ಅವನು ನಿನ್ನ ಮಾತಿಗೆ ಕಿವಿಗೊಟ್ಟರೆ, ಮತ್ತೆ ನಿನ್ನ ಸಹೋದರನಾಗಿರಲು ನೀನೇ ಅವನಿಗೆ ಸಹಾಯ ಮಾಡಿದಂತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇದಲ್ಲದೆ ನಿನ್ನ ಸಹೋದರನು ತಪ್ಪುಮಾಡಿದರೆ ನೀನು ಹೋಗಿ ನೀನೂ ಅವನೂ ಇಬ್ಬರೇ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಜರ್ ತರ್ ಎಕ್ ಭಾವಾನ್, ತುಮ್ಚ್ಯಾ ವಿರೊದ್ ಜಾವ್ನ್ ಪಾಪ್ ಕರ್ಲ್ಯಾರ್, ತೆಕಾ ಕಡೆಕ್ ಬಲ್ವುನ್ ಘೆವ್ನ್ ತೆಚಿ ಚುಕ್ ತೆಕಾ ದಾಕ್ವುನ್ ದಿವಾ, ತೆನಿ ತುಮಿ ಸಾಂಗಲ್ಲೆ ಆಯಿಕ್ಲ್ಯಾನ್ ತರ್ ತಿಯಾ ತುಜ್ಯಾ ಭಾವಾಕ್ ಜಿಕ್ಲ್ಯಾ ಸರ್ಕೆ ಹೊತಾ. ಅಧ್ಯಾಯವನ್ನು ನೋಡಿ |