ಮತ್ತಾಯ 18:19 - ಪರಿಶುದ್ದ ಬೈಬಲ್19 ಇದಲ್ಲದೆ ನಿಮ್ಮಲ್ಲಿ ಇಬ್ಬರು ಈ ಲೋಕದಲ್ಲಿ ಒಮ್ಮನಸ್ಸಿನಿಂದ ಏನನ್ನೇ ಬೇಡಿಕೊಂಡರೂ ಪರಲೋಕದಲ್ಲಿರುವ ನನ್ನ ತಂದೆ ಅದನ್ನು ನೆರವೇರಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇದಲ್ಲದೆ ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳತಕ್ಕ ಯಾವದಾದರೂ ಒಂದು ಕಾರ್ಯದ ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದೆಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 “ಅನಿ ಜಾಸ್ತಿಚೆ ಮಿಯಾ ತುಮ್ಕಾ ಖರೆಚ್ ಸಾಂಗುಚೆ ಜಾಲ್ಯಾರ್, ಹ್ಯಾ ಜಗಾತ್ ಕನ್ನಾಬಿ ತುಮಿ ದೊಗೆ ಜಾನಾ ಎಕುಚ್ ಮನಾಚೆ ಹೊವ್ನ್ ಕಸ್ಲ್ಯಾಸಾಟ್ನಿಬಿ ಮಾಗ್ನಿ ಕರ್‍ಲ್ಯಾರ್, ಸರ್ಗಾ ವರ್‍ತಿಬಿ ಮಾಜೊ ಸರ್‍ಗಾ ವೈಲೊ ಬಾಬಾ ತೆ ತುಮ್ಕಾ ಕರುನ್ ದಿತಾ. ಅಧ್ಯಾಯವನ್ನು ನೋಡಿ |