ಮತ್ತಾಯ 18:25 - ಪರಿಶುದ್ದ ಬೈಬಲ್25 ಆ ಸೇವಕನು ತನ್ನ ಯಜಮಾನನಾದ ರಾಜನಿಗೆ ಹಣವನ್ನು ಕೊಡಲು ಸಮರ್ಥನಾಗಿರಲಿಲ್ಲ. ಆದ್ದರಿಂದ ಆ ಸೇವಕನನ್ನು ಮತ್ತು ಅವನಲ್ಲಿದ್ದ ಪ್ರತಿಯೊಂದನ್ನೂ ಅವನ ಹೆಂಡತಿ ಮತ್ತು ಮಕ್ಕಳ ಸಮೇತವಾಗಿ ಮಾರಿ, ಬಂದ ಹಣವನ್ನೆಲ್ಲಾ ಕೊಡಬೇಕಾದ ಸಾಲಕ್ಕೆ ವಜಾ ಮಾಡಬೇಕೆಂದು ರಾಜನು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆ ಸಾಲಾ ತೀರಿಸುವದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನ ಒಡೆಯನು ಅವನನ್ನೂ ಅವನ ಹೆಂಡತಿಮಕ್ಕಳನ್ನೂ ಅವನ ಬದುಕೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಕೊಡುವುದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅರಸನು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತ್ಯಾ ಅಳಾಕ್ಡೆ ತೆ, ಫೆಡುಕ್ ಹೊಯ್ ಸರ್ಕೆ ಪೈಸೆ ನತ್ತೆ. ತಸೆಮನುನ್ ರಾಜಾನ್ ತೆಚೆ ರಿನ್ ಭರುನ್ ಘೆವ್‍ಸಾಟ್ನಿ ತ್ಯಾ ಅಳಾಕ್, ಅನಿ ತೆಚ್ಯಾ ಬಾಯ್ಕೊ ಪೊರಾಕ್ನಿ ಗುಲಾಮ್ ಕರುನ್ ಇಕಾ ಮನುನ್ ಹುಕುಮ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.