ಮತ್ತಾಯ 18:28 - ಪರಿಶುದ್ದ ಬೈಬಲ್28 “ತರುವಾಯ, ಅದೇ ಸೇವಕನು ತನಗೆ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕಾಗಿದ್ದ ಬೇರೊಬ್ಬ ಸೇವಕನನ್ನು ಕಂಡು ಅವನ ಕುತ್ತಿಗೆ ಹಿಡಿದು, ‘ನೀನು ನನಗೆ ಕೊಡಬೇಕಾಗಿರುವ ಹಣವನ್ನು ಕೊಡು’ ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಆದರೆ ಅದೇ ಸೇವಕ ಹೊರಗೆಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಹಣಾ ಕೊಡಬೇಕಾದ ಒಬ್ಬ ಜೊತೇಸೇವಕನನ್ನು ಕಂಡು ಅವನನ್ನು ಹಿಡಿದು - ಎಲಾ, ನನ್ನ ಸಾಲ ತೀರಿಸು ಎಂದು ಹೇಳಿ ಕುತ್ತಿಗೆ ಹಿಸಿಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ಆದರೆ ಅದೇ ಸೇವಕನು ಹೊರಗೆ ಹೋಗಿ, ತನಗೆ ಸುಮಾರು ನೂರು ಬೆಳ್ಳಿ ನಾಣ್ಯಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆಯ ಸೇವಕರಲ್ಲಿ ಒಬ್ಬನನ್ನು ಕಂಡು, ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲವನ್ನು ತೀರಿಸು,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತನ್ನಾ ತೊ ಸೆವಕ್ ಭಾಯ್ರ್ ಗೆಲೊ, ಅನಿ ಜಾತಾನಾ ತೆಕಾ ತೆಚ್ಯಾ ವಾಂಗುಡ್ಚೊ ಎಕ್ ಆಳ್ ಗಾವ್ಲೊ. ತೆನಿ ತೆಕಾ ಎಕ್ ಸೆಂಬರ್ ರುಪಯ್ ರಿನ್ ದಿತಲೆ ಹೊತ್ತೆ. ತನ್ನಾ ತೆನಿ ತೆಕಾ ಧರ್‍ಲ್ಯಾನ್, ಅನಿ ತೆಚೊ ನರ್‍ಡೊ ಹಿಚ್ಕುನ್, ಮಾಜೆ ದಿತಲೆ ಹಾಯ್ ತೆ ಅತ್ತಾಚ್ ಮಾಕಾ ದಿ. ಮನುನ್ ಸಾಂಗುಕ್ ಲಾಗ್ಲೊ. ಅಧ್ಯಾಯವನ್ನು ನೋಡಿ |
ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.
“ಸಬ್ಬತ್ ದಿನದಲ್ಲಿ ಯಾವ ಕೆಲಸವನ್ನೂ ಮಾಡುವುದಿಲ್ಲವೆಂದು ಪ್ರಮಾಣಮಾಡುತ್ತೇವೆ. ನಮ್ಮ ಸುತ್ತಮುತ್ತಲಿನ ಜನರು ಸಬ್ಬತ್ ದಿನದಲ್ಲಿ ಮಾರಲು ದವಸಧಾನ್ಯವನ್ನಾಗಲಿ ಬೇರೆ ವಸ್ತುಗಳನ್ನಾಗಲಿ ತಂದರೆ ನಾವು ಸಬ್ಬತ್ ದಿನದಲ್ಲಿ ಮತ್ತು ಇತರ ಯಾವುದೇ ಹಬ್ಬದ ದಿನದಲ್ಲಿ ಅವುಗಳನ್ನು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷ ನಾವು ನೆಡುವುದೂ ಇಲ್ಲ. ಹೊಲದಲ್ಲಿ ಕೆಲಸ ಮಾಡುವುದೂ ಇಲ್ಲ. ನಮಗೆ ಬೇರೆಯವರು ಕೊಡಬೇಕಾಗಿರುವ ಸಾಲವನ್ನು ಏಳನೆಯ ವರ್ಷದಲ್ಲಿ ವಜಾ ಮಾಡುತ್ತೇವೆ.