Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:3 - ಪರಿಶುದ್ದ ಬೈಬಲ್‌

3 “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಬದಲಾವಣೆ ಹೊಂದಿಕೊಂಡು ನಿಮ್ಮ ಹೃದಯದಲ್ಲಿ ಚಿಕ್ಕ ಮಕ್ಕಳಂತೆ ಆಗಬೇಕು. ಇಲ್ಲವಾದರೆ, ನೀವು ಪರಲೋಕರಾಜ್ಯಕ್ಕೆ ಸೇರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಿಗೆ - ನೀವು ತಿರುಗಿಕೊಂಡು ಚಿಕ್ಕ ಮಕ್ಕಳಂತೆ ಆಗದೆ ಹೋದರೆ ನೀವು ಪರಲೋಕರಾಜ್ಯದಲ್ಲಿ ಸೇರುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನೀವು ಪರಿವರ್ತನೆ ಹೊಂದಿ ಚಿಕ್ಕಮಕ್ಕಳಂತೆ ಆಗದಿದ್ದರೆ, ಪರಲೋಕ ರಾಜ್ಯದೊಳಗೆ ಪ್ರವೇಶಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ, “ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತುಮಿ ತುಮ್ಚೆ ಮನ್ ಬದ್ಲುನ್, ಎಕ್ ಬಾರಿಕ್ ಪೊರಾ ಸರ್ಕೆ ಹೊಯ್ನಸ್ಲ್ಯಾರ್ ತುಮ್ಕಾ ಸರ್‍ಗಾಚ್ಯಾ ರಾಜಾತ್ ಭುತ್ತುರ್ ಗುಸುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:3
28 ತಿಳಿವುಗಳ ಹೋಲಿಕೆ  

ಹೊಸದಾಗಿ ಹುಟ್ಟಿದ ಕೂಸುಗಳಂತಿರಿ. ನಿಮ್ಮ ಆತ್ಮವನ್ನು ಪೋಷಿಸುವಂಥ ಶುದ್ಧ ಹಾಲನ್ನು (ದೇವರ ವಾಕ್ಯವೆಂಬ) ಬಯಸಿರಿ. ನೀವು ಅದನ್ನು ಕುಡಿಯುವುದರಿಂದ ಬೆಳವಣಿಗೆ ಹೊಂದಿ ರಕ್ಷಿಸಲ್ಪಡುವಿರಿ.


ಆದರೆ ಯೇಸು, “ಚಿಕ್ಕ ಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿ ಮಾಡಬೇಡಿ. ಏಕೆಂದರೆ ಪರಲೋಕರಾಜ್ಯ ಈ ಚಿಕ್ಕ ಮಕ್ಕಳಂಥವರದೇ” ಎಂದನು.


ಸಹೋದರ ಸಹೋದರಿಯರೇ, ಮಕ್ಕಳಂತೆ ಆಲೋಚಿಸಬೇಡಿ. ಕೆಟ್ಟ ವಿಷಯಗಳಲ್ಲಿ ಎಳೆಗೂಸುಗಳಂತಿರಿ. ಆದರೆ ನಿಮ್ಮ ಆಲೋಚನೆಗಳಲ್ಲಿ ಪ್ರಾಯಸ್ಥರಂತಿರಿ.


ನಾನು ಸಮಾಧಾನದಿಂದಿರುವೆ. ನನ್ನ ಆತ್ಮವು ನೆಮ್ಮದಿಯಿಂದಿದೆ. ತನ್ನ ತಾಯಿಯ ತೋಳುಗಳಲ್ಲಿ ಸಂತೃಪ್ತಿಯಾಗಿರುವ ಮಗುವಿನಂತೆ ನನ್ನ ಆತ್ಮವು ಸಮಾಧಾನದಿಂದಲೂ ನೆಮ್ಮದಿಯಿಂದಲೂ ಇದೆ.


ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು.


ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು.


“ಸ್ವರ್ಗಕ್ಕೆ ನಡೆಸುವ ಕಿರಿದಾದ ಬಾಗಿಲಿನ ಮೂಲಕ ಹೋಗಲು ಪ್ರಯಾಸಪಡಿರಿ! ಅನೇಕ ಜನರು ಅದರ ಮೂಲಕ ಹೋಗಲು ಪ್ರಯತ್ನಿಸುತ್ತಾರೆ. ಆದರೆ ಅವರಿಂದ ಆಗುವುದಿಲ್ಲ.


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ಹೌದು, ಈ ಜನರ ಹೃದಯಗಳು ಕಠಿಣವಾಗಿವೆ. ಈ ಜನರಿಗೆ ಕಿವಿಗಳಿದ್ದರೂ ಕೇಳುವುದಿಲ್ಲ. ಸತ್ಯವಿದ್ದರೂ ನೋಡಬಯಸರು. ಅಲ್ಲದಿದ್ದರೆ ಇವರು ಕಣ್ಣಾರೆ ಕಂಡು, ಕಿವಿಯಾರೆ ಕೇಳಿ, ಮನಸಾರೆ ಗ್ರಹಿಸಿಕೊಂಡು ನನ್ನತ್ತ ತಿರುಗಿಕೊಳ್ಳುತ್ತಿದ್ದರು; ನನ್ನಿಂದ ಗುಣಹೊಂದುತ್ತಿದ್ದರು.’


ಅದಲ್ಲದೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರುಗಳು ಏರಿಹೋಗುವುದನ್ನೂ ಕೆಳಗೆ ಇಳಿದುಬರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.


ಧರ್ಮೋಪದೇಶಕರಿಗಿಂತಲೂ ಫರಿಸಾಯರಿಗಿಂತಲೂ ನೀವು ಉತ್ತಮವಾದದ್ದನ್ನು ಮಾಡಬೇಕು. ಇಲ್ಲವಾದರೆ ನೀವು ಪರಲೋಕರಾಜ್ಯವನ್ನು ಪ್ರವೇಶಿಸಲಾರಿರಿ.


ನಿನ್ನ ನಂಬಿಕೆಯು ಕುಂದಿಹೋಗಬಾರದೆಂದು ನಾನು ಪ್ರಾರ್ಥಿಸಿದೆನು! ನೀನು ಪರಿವರ್ತನೆಗೊಂಡ ನಂತರ ನಿನ್ನ ಸಹೋದರರನ್ನು ಬಲಪಡಿಸು” ಎಂದು ಹೇಳಿದನು.


ಏಕೆಂದರೆ: ‘ಅವರು ಕಣ್ಣಾರೆ ನೋಡಿಯೂ ಕಾಣರು. ಕಿವಿಯಾರೆ ಕೇಳಿಯೂ ಗ್ರಹಿಸರು. ಅವರು ನೋಡಿ ಗ್ರಹಿಸಿಕೊಂಡರೆ, ಪರಿವರ್ತನೆಗೊಂಡು ಪಾಪಕ್ಷಮೆ ಹೊಂದಿಯಾರು’” ಎಂದನು.


ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸುಕ್ರಿಸ್ತನ ರಾಜ್ಯದಲ್ಲಿ ನಿಮಗೆ ಮಹಾ ಸ್ವಾಗತವನ್ನು ನೀಡಲಾಗುವುದು. ಆ ರಾಜ್ಯವು ಶಾಶ್ವತವಾದದ್ದು.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ಆಗ ಯೇಸು ತನ್ನ ಶಿಷ್ಯರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಐಶ್ವರ್ಯವಂತನು ಪರಲೋಕರಾಜ್ಯಕ್ಕೆ ಪ್ರವೇಶಿಸುವುದು ಬಹಳ ಕಷ್ಟಕರ.


ಹೌದು, ಇವರ ಮನಸ್ಸುಗಳು ಕಠಿಣವಾಗಿವೆ. ಕಿವಿ ಮಂದವಾಗಿವೆ, ಕಣ್ಣು ಮಬ್ಬಾಗಿವೆ. ಅವರು ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆಯೂ ನನ್ನ ಕಡೆಗೆ ತಿರುಗಿಕೊಳ್ಳದಂತೆಯೂ ನನ್ನಿಂದ ಗುಣಹೊಂದದಂತೆಯೂ ಹೀಗಾಯಿತು.’


“ನೀವು ಉಪವಾಸ ಮಾಡುವಾಗ ನಿಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿ. ಕಪಟಿಗಳು ಹಾಗೆ ಮಾಡುತ್ತಾರೆ. ಆದರೆ ನೀವು ಕಪಟಿಗಳಂತಿರಬೇಡಿ. ತಾವು ಉಪವಾಸ ಮಾಡುತ್ತಿರುವುದಾಗಿ ಜನರಿಗೆ ತೋರ್ಪಡಿಸಿಕೊಳ್ಳಲು ಅವರು ತಮ್ಮ ಮುಖಗಳನ್ನು ವಿಕಾರಮಾಡಿಕೊಳ್ಳುತ್ತಾರೆ. ಆ ಕಪಟಿಗಳು ತಮಗೆ ಬರತಕ್ಕ ಪ್ರತಿಫಲವನ್ನು ಸಂಪೂರ್ಣವಾಗಿ ಹೊಂದಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ನೀವು ಪ್ರಾರ್ಥಿಸುವಾಗ ಕಪಟಿಗಳ ಹಾಗೆ ಪ್ರಾರ್ಥಿಸಬೇಡಿ. ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಯ ಮೂಲೆಗಳಲ್ಲಿ ನಿಂತುಕೊಂಡು ಗಟ್ಟಿಯಾಗಿ ಪ್ರಾರ್ಥಿಸಲು ಇಷ್ಟಪಡುತ್ತಾರೆ. ತಾವು ಪ್ರಾರ್ಥಿಸುವುದನ್ನು ಜನರು ನೋಡಬೇಕೆಂಬುದೇ ಅವರ ಬಯಕೆ. ಅವರು ಆಗಲೇ ಅದರ ಪೂರ್ಣ ಪ್ರತಿಫಲವನ್ನು ಹೊಂದಿಕೊಂಡಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.


“ನೀವು ಬಡಜನರಿಗೆ ಮಾಡುವ ದಾನವನ್ನು ಪ್ರಕಟಿಸಬೇಡಿ. ನೀವು ಕಪಟಿಗಳಂತೆ ಮಾಡಕೂಡದು. ತಾವು ಮಾಡುವ ದಾನವನ್ನು ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಗಳಲ್ಲಿ ತುತ್ತೂರಿ ಊದಿಸುತ್ತಾರೆ. ಜನರಿಂದ ಗೌರವ ಪಡೆಯಬೇಕೆಂಬುದೇ ಅವರ ಉದ್ದೇಶ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.


ಯೇಸು ಚಿಕ್ಕ ಮಗುವನ್ನು ತನ್ನ ಹತ್ತಿರಕ್ಕೆ ಕರೆದು ತನ್ನ ಶಿಷ್ಯರ ಮುಂದೆ ಆ ಮಗುವನ್ನು ನಿಲ್ಲಿಸಿ ಹೀಗೆಂದನು:


ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುವವನೇ ಪರಲೋಕರಾಜ್ಯದಲ್ಲಿ ಅತ್ಯುತ್ತಮ ಸ್ಥಾನ ಪಡೆಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು