Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:4 - ಪರಿಶುದ್ದ ಬೈಬಲ್‌

4 ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುವವನೇ ಪರಲೋಕರಾಜ್ಯದಲ್ಲಿ ಅತ್ಯುತ್ತಮ ಸ್ಥಾನ ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರುವದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುತ್ತಾನೋ, ಅವನೇ ಪರಲೋಕರಾಜ್ಯದಲ್ಲಿ ಹೆಚ್ಚಿನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾರು ಈ ಚಿಕ್ಕಮಗುವಿನಂತೆ ತಮ್ಮನ್ನು ತಾವು ತಗ್ಗಿಸಿಕೊಳ್ಳುವರೋ ಅವರೇ ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜೊ ಕೊನ್ ಅಪ್ನಾಕುಚ್ ಎಕ್ ಬಾರಿಕ್ ಪೊರಾ ಸರ್ಕೆ ಖಾಲ್ತಿ ಕರ್‍ತಾ, ತೊ ಸರ್‍ಗಾಚ್ಯಾ ರಾಜಾತ್‍ ಲೈ ಮೊಟೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:4
13 ತಿಳಿವುಗಳ ಹೋಲಿಕೆ  

ಪ್ರಭುವಿನ ಎದುರಿನಲ್ಲಿ ದೀನರಾಗಿರಿ, ಆತನು ನಿಮ್ಮನ್ನು ಉನ್ನತ ಮಟ್ಟಕ್ಕೆ ತರುತ್ತಾನೆ.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಆದರೆ ನೀವು ಅವರಂತಾಗಬಾರದು.


ಬಳಿಕ ಯೇಸು ತನ್ನ ಶಿಷ್ಯರಿಗೆ, “ಒಬ್ಬನು ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ಒಬ್ಬನು ನನ್ನನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನು ಕಳುಹಿಸಿದಾತನನ್ನೇ (ದೇವರನ್ನು) ಸ್ವೀಕರಿಸಿಕೊಂಡಂತಾಯಿತು. ನಿಮ್ಮಲ್ಲಿ ಯಾವನು ದೀನನಾಗಿದ್ದಾನೋ ಅವನೇ ನಿಮ್ಮಲ್ಲಿ ಪ್ರಮುಖನಾಗಿದ್ದಾನೆ” ಎಂದು ಹೇಳಿದನು.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ಆ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪರಲೋಕರಾಜ್ಯದಲ್ಲಿ ಯಾರಿಗೆ ಅತ್ಯುತ್ತಮ ಸ್ಥಾನ ದೊರೆಯುತ್ತದೆ” ಎಂದು ಕೇಳಿದರು.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಬದಲಾವಣೆ ಹೊಂದಿಕೊಂಡು ನಿಮ್ಮ ಹೃದಯದಲ್ಲಿ ಚಿಕ್ಕ ಮಕ್ಕಳಂತೆ ಆಗಬೇಕು. ಇಲ್ಲವಾದರೆ, ನೀವು ಪರಲೋಕರಾಜ್ಯಕ್ಕೆ ಸೇರುವುದೇ ಇಲ್ಲ.


“ಯಾವನಾದರೂ ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು.


ಆದರೆ ಶಿಷ್ಯರು ಉತ್ತರಿಸಲಿಲ್ಲ. ಏಕೆಂದರೆ ತಮ್ಮಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರೆಂಬುದರ ಕುರಿತು ಅವರು ವಾಗ್ವಾದ ಮಾಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು