ಮತ್ತಾಯ 18:6 - ಪರಿಶುದ್ದ ಬೈಬಲ್6 “ದೀನತೆಯಿಂದ ನನ್ನನ್ನು ಹಿಂಬಾಲಿಸುವವರಲ್ಲಿ ಯಾರನ್ನಾದರೂ ಪಾಪಕ್ಕೆ ನಡೆಸುವವನಿಗೆ ಬಹಳ ಕೇಡಾಗುವುದು. ಅವನು ತನ್ನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಆಳವಾದ ಸಮುದ್ರದಲ್ಲಿ ಮುಳುಗುವುದೇ ಉತ್ತಮ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ನನ್ನಲ್ಲಿ ವಿಶ್ವಾಸವಿಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ ಅಂಥವನು ದೊಡ್ಡ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು, ಆಳವಾದ ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಣುಗಿಸಿಬಿಡುವದು ಅವನಿಗೆ ಹಿತವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದ ಆಳದಲ್ಲಿ ಮುಳುಗಿಸಿಡುವುದೇ ಲೇಸು, ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 “ಜರ್ ತರ್ ಕೊನ್ಬಿ ಎಕ್ಲೊ, ಹ್ಯಾ ಬಾರಿಕ್ಲ್ಯಾ ಲೊಕಾನಿತ್ಲ್ಯಾ ಎಕ್ಲ್ಯಾಕ್ ಸೈತ್ ಮಾಜೆ ವೈಲೊ ವಿಶ್ವಾಸ್ ಕಳ್ದುನ್ ಘೆಯ್ ಸರ್ಕೆ ಕರುಕ್ ಕಾರನ್ ಹೊತಾ, ತ್ಯಾ ಮಾನ್ಸಾನ್ ಅಪ್ನಾಚ್ಯಾ ಗಳ್ಯಾತ್ ಎಕ್ ಮೊಟೊ ಜಾತ್ಯಾಚೊ ಗುಂಡೊ ಭಾಂದುನ್ ಘೆವ್ನ್ ಖೊಲ್ ಹೊತ್ತ್ಯಾ ಸಮುಂದರಾತ್ ಹುಡಿ ಮಾರುನ್ ಬುಡಲ್ಲೆ ಬರೆ. ಅಧ್ಯಾಯವನ್ನು ನೋಡಿ |
ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು.