Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:12 - ಪರಿಶುದ್ದ ಬೈಬಲ್‌

12 ಕೆಲವರು ಮದುವೆ ಆಗದಿರಲು ಬೇರೆಬೇರೆ ಕಾರಣಗಳಿವೆ. ಹುಟ್ಟಿದಂದಿನಿಂದಲೇ ಕೆಲವರು ನಪುಂಸಕರಾಗಿರುತ್ತಾರೆ. ಇನ್ನು ಕೆಲವರು ಬೇರೆಯವರಿಂದ ನಪುಂಸಕರಾಗಿ ಮಾಡಲ್ಪಡುತ್ತಾರೆ. ಬೇರೆ ಕೆಲವರು ಪರಲೋಕರಾಜ್ಯಕ್ಕೋಸ್ಕರ ಮದುವೆಯನ್ನು ತೊರೆದುಬಿಡುತ್ತಾರೆ. ಆದರೆ ಮದುವೆ ಆಗುವಂಥವನು ಮದುವೆ ವಿಷಯವಾದ ಈ ಬೋಧನೆಯನ್ನು ಸ್ವೀಕರಿಸಬೇಕು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಾಯಿಯ ಉದರದಿಂದಲೇ ನಪುಂಸಕರಾಗಿ ಹುಟ್ಟಿದವರಿದ್ದಾರೆ; ಜನರಿಂದ ನಪುಂಸಕರಾದವರು ಕೂಡ ಇದ್ದಾರೆ; ಸ್ವರ್ಗಸಾಮ್ರಾಜ್ಯದ ನಿಮಿತ್ತ ಅವಿವಾಹಿತರಾಗಿ ಇರುವವರೂ ಇದ್ದಾರೆ; ಇದನ್ನು ಅಂಗೀಕರಿಸಬಲ್ಲವನು ಅಂಗೀಕರಿಸಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ; ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ; ಮತ್ತು ಪರಲೋಕರಾಜ್ಯದ ನಿವಿುತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಅಂಗೀಕರಿಸಬಲ್ಲವನು ಅಂಗೀಕರಿಸಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತಮ್ಮ ತಾಯಿಯ ಗರ್ಭದಿಂದ ಹುಟ್ಟಿದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಕೆಲವರು ಮನುಷ್ಯರಿಂದ ಮಾಡಲಾದ ನಪುಂಸಕರು ಇದ್ದಾರೆ. ಇನ್ನು ಕೆಲವರು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರೂ ಇದ್ದಾರೆ. ಇದನ್ನು ಸ್ವೀಕರಿಸಬಲ್ಲವನು ಸ್ವೀಕರಿಸಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾನುಸ್ ನಗಿನ್ ಹೊಯ್‍ನಸ್ತಾನಾ ರ್‍ಹಾವ್ಕ್ ದುಸ್ರೆ- ದುಸ್ರೆ ಕಾರನ್ ಹಾತ್. ಉಲ್ಲಿ ಲೊಕಾ, ಹಿಜ್ಡೆ ಹೊವ್ನ್ ಉಪಾಜ್ತಾತ್ , ಅನಿ ಉಲ್ಲ್ಯಾಸ್ಯಾ ಲೊಕಾಕ್ನಿ ಮಾನ್ಸಾನಿ ಹಿಜ್ಡೆ ಕರುನ್ ಥವ್ಲ್ಯಾನಾತ್, ಅನಿ ಉಲ್ಲಿ ಲೊಕಾ ಸರ್‍ಗಾಚ್ಯಾ ರಾಜಾ ಸಾಟ್ನಿ ಹಿಜ್ಡೆ ಹೊವ್ನ್ ಹಾತ್. ಜೊ ಕೊನ್ ಹೆ ಶಿಕಾಪ್ ಮಾನುನ್ ಘೆವ್ಕ್ ತಯಾರ್ ಹಾಯ್ ತೊ ತೆ, ಮಾನುನ್ ಘೆಂವ್ದಿತ್.” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:12
8 ತಿಳಿವುಗಳ ಹೋಲಿಕೆ  

ಕ್ರಿಸ್ತ ವಿಶ್ವಾಸಿಯಾದ ಹೆಂಡತಿಯನ್ನು ನಮ್ಮೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಲು ಉಳಿದ ಅಪೊಸ್ತಲರಂತೆ, ಪ್ರಭುವಿನ ಸಹೋದರರಂತೆ ಮತ್ತು ಕೇಫನಂತೆ ನಮಗೆ ಹಕ್ಕಿಲ್ಲವೇ?


ಬಾಬಿಲೋನಿನವರು ನಿನ್ನ ಗಂಡುಮಕ್ಕಳನ್ನು ತೆಗೆದುಕೊಂಡು ಹೋಗುವರು. ಅವರು ಬಾಬಿಲೋನಿನ ಅರಮನೆಗಳಲ್ಲಿ ಕಂಚುಕಿಯರಾಗಿ ಸೇವೆ ಮಾಡುವರು” ಎಂದು ಹೇಳಿದನು.


ಆದರೆ ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಉಪಯೋಗಿಸಲಿಲ್ಲ. ನನಗೆ ಅಗತ್ಯವಾದುವುಗಳನ್ನು ಪಡೆದುಕೊಳ್ಳುವುದಕ್ಕಾಗಿಯೂ ನಾನು ಪ್ರಯತ್ನಿಸುತ್ತಿಲ್ಲ. ನಿಮಗೆ ಇದನ್ನು ಬರೆಯುತ್ತಿರುವ ಉದ್ದೇಶವೂ ಅದಲ್ಲ. ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವನ್ನು ಕಳೆದುಕೊಳ್ಳುವುದಕ್ಕಿಂತ ಸಾಯುವುದೇ ನನಗೆ ಲೇಸು.


ಅದಕ್ಕೆ ಯೇಸು, “ಮದುವೆಯ ವಿಷಯವಾದ ಈ ಸತ್ಯವನ್ನು ಪ್ರತಿಯೊಬ್ಬರೂ ಸ್ವೀಕರಿಸಲು ಸಾಧ್ಯವಿಲ್ಲ. ಇದನ್ನು ಸ್ವೀಕರಿಸಲು ದೇವರು ಯಾರನ್ನು ಸಮರ್ಥರನ್ನಾಗಿ ಮಾಡಿದ್ದಾನೋ ಅವರಿಗೆ ಮಾತ್ರ ಸಾಧ್ಯ.


ಬಳಿಕ ಜನರು ಯೇಸುವಿನ ಬಳಿಗೆ ಬಂದು ತಮ್ಮ ಚಿಕ್ಕ ಮಕ್ಕಳನ್ನು ತಂದು ಅವರಿಗಾಗಿ ಪ್ರಾರ್ಥಿಸಬೇಕೆಂದು ಆತನನ್ನು ಬೇಡಿಕೊಂಡರು. ಇದನ್ನು ಕಂಡ ಶಿಷ್ಯರು ಚಿಕ್ಕ ಮಕ್ಕಳನ್ನು ಆತನ ಬಳಿಗೆ ತರಕೂಡದೆಂದು ಗದರಿಸಿದರು.


ಇವರು ಸ್ತ್ರೀ ಸಹವಾಸದಿಂದ ಮಲಿನರಾಗದೆ ಕನ್ನಿಕೆಯರಂತೆ ಉಳಿದಿದ್ದರು. ಕುರಿಮರಿಯಾದಾತನು ಹೋದಕಡೆಯಲ್ಲೆಲ್ಲಾ ಅವರು ಆತನನ್ನು ಹಿಂಬಾಲಿಸುತ್ತಾರೆ. ಭೂಲೋಕದ ಜನರ ಮಧ್ಯದಿಂದ ಬಿಡುಗಡೆ ಹೊಂದಿದವರೇ 1,44,000 ಮಂದಿ. ದೇವರಿಗೂ ಕುರಿಮರಿಯಾದಾತನಿಗೂ ಅರ್ಪಿತರಾದವರಲ್ಲಿ ಇವರೇ ಮೊದಲಿಗರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು