ಮತ್ತಾಯ 19:14 - ಪರಿಶುದ್ದ ಬೈಬಲ್14 ಆದರೆ ಯೇಸು, “ಚಿಕ್ಕ ಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿ ಮಾಡಬೇಡಿ. ಏಕೆಂದರೆ ಪರಲೋಕರಾಜ್ಯ ಈ ಚಿಕ್ಕ ಮಕ್ಕಳಂಥವರದೇ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ, ಸ್ವರ್ಗಸಾಮ್ರಾಜ್ಯ ಇಂಥವರದೇ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೆ ಯೇಸು - ಮಕ್ಕಳನ್ನು ಬಿಡಿರಿ; ನನ್ನ ಹತ್ತರ ಬರುವದಕ್ಕೆ ಅವುಗಳಿಗೆ ಅಡ್ಡಿಮಾಡಬೇಡಿರಿ; ಪರಲೋಕರಾಜ್ಯವು ಇಂಥವರದೇ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ಪರಲೋಕ ರಾಜ್ಯವು ಇಂಥವರದೇ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಖರೆ ಜೆಜುನ್ ತೆಂಕಾ,“ಬಾರಿಕ್ ಪೊರಾಕ್ನಿ ಮಾಜೆಕ್ಡೆ ಯೆವ್ಕ್ ಸೊಡಾ, ತೆಂಕಾ ಅಡ್ವುನಕಾಶಿ, ಕಶ್ಯಾಕ್ ಮಟ್ಲ್ಯಾರ್ ಸರ್‍ಗಾಚೆ ರಾಜ್ ಬಾರಿಕ್ ಪೊರಾಂಚ್ಯಾ ಸರ್ಕೆ ಹೊತ್ತ್ಯಾಂಚೆಚ್.” ಮಟ್ಲ್ಯಾನ್ ಅನಿ, ಅಧ್ಯಾಯವನ್ನು ನೋಡಿ |
ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು