Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 19:17 - ಪರಿಶುದ್ದ ಬೈಬಲ್‌

17 ಯೇಸು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ಕೇಳುವುದೇಕೆ? ದೇವರೊಬ್ಬನೇ ಒಳ್ಳೆಯವನು. ಆದರೆ ನೀನು ನಿತ್ಯಜೀವವನ್ನು ಹೊಂದಬೇಕೆಂದಿದ್ದರೆ ಈ ಆಜ್ಞೆಗಳಿಗೆ ವಿಧೇಯನಾಗು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದಕ್ಕೆ ಅವರು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ವಿಚಾರಿಸುವುದು ಏಕೆ? ಒಳ್ಳೆಯವರು ಒಬ್ಚರೇ. ನೀನು ಆ ಜೀವಕ್ಕೆ ಪ್ರವೇಶಿಸಬೇಕಾದರೆ ದೈವಾಜ್ಞೆಗಳನ್ನು ಅನುಸರಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನು ಅವನಿಗೆ - ಒಳ್ಳೇದನ್ನು ಕುರಿತು ನನ್ನನ್ನು ಯಾಕೆ ಕೇಳುತ್ತೀ? ಒಳ್ಳೆಯವನು ಒಬ್ಬನೇ. ಆದರೆ ಆ ಜೀವದಲ್ಲಿ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ಸರಿಯಾಗಿ ನಡೆದುಕೋ ಎಂದು ಹೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನೀನು ಒಳ್ಳೆಯದನ್ನು ಕುರಿತು ನನ್ನನ್ನು ಕೇಳುವುದೇಕೆ? ಒಬ್ಬಾತನೇ ಒಳ್ಳೆಯವನು. ಆದರೆ ನೀನು ಜೀವದಲ್ಲಿ ಪ್ರವೇಶಿಸಬೇಕಾದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆದುಕೋ,” ಎಂದು ಯೇಸು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ಜೆಜುನ್,“ಬರೆ ಕಾಮಾಚ್ಯಾ ವಿಶಯಾತ್ ಮಾಕಾ ಕಶ್ಯಾಕ್ ಇಚಾರ್‍ತೆ? ಬರೊ ಮನುನ್ ಹೊತ್ತೊ ದೆವ್ ಎಕ್ಲೊಚ್. ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವುಚೆ ತರ್, ಜಾ ಅನಿ ಖಾಯ್ದೆ ಪಾಳ್.” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 19:17
14 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾಗಬೇಕು. ಒಬ್ಬನು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯನಾದರೆ, ಅವನು ಜೀವಿಸುವನು! ನಾನೇ ಯೆಹೋವನು!


ಧರ್ಮಶಾಸ್ತ್ರದಿಂದಾಗುವ ನೀತಿಯ ಬಗ್ಗೆ, “ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಜೀವವನ್ನು ಪಡೆದುಕೊಳ್ಳಲು ಬಯಸುವವನು, ಧರ್ಮಶಾಸ್ತವು ಹೇಳುವ ಕಾರ್ಯಗಳನ್ನು ಮಾಡಲೇಬೇಕು” ಎಂದು ಮೋಶೆ ಹೇಳಿದ್ದಾನೆ.


ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಅನ್ಯದೇವರಿಲ್ಲ! ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ.


ಹೀಗಿರಲಾಗಿ ನಮ್ಮ ಮೇಲೆ ದೇವರಿಗಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ನಾವು ಆ ಪ್ರೀತಿಯಲ್ಲಿ ಭರವಸವಿಟ್ಟಿದ್ದೇವೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿದ್ದಾನೆ.


“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.


ನೀನು ಅವರನ್ನು ಎಚ್ಚರಿಸಿದೆ. ನನ್ನ ಕಡೆಗೆ ತಿರುಗಿರಿ ಎಂದು ಎಚ್ಚರಿಸಿದೆ. ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; ಅವರು ಹಠಮಾರಿಗಳಾಗಿ ನಿನಗೆ ವಿಮುಖರಾದರು; ನಿನ್ನ ಮಾತುಗಳನ್ನು ಕೇಳದೆಹೋದರು.


ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.


ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ.


ನೀನು ಒಳ್ಳೆಯವನೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಆಗಿರುವೆ. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು