ಮತ್ತಾಯ 19:6 - ಪರಿಶುದ್ದ ಬೈಬಲ್6 ಆದ್ದರಿಂದ ಇವರಿಬ್ಬರು ಇನ್ನು ಮೇಲೆ ಇಬ್ಬರಲ್ಲ, ಒಬ್ಬರೇ. ಅವರಿಬ್ಬರನ್ನು ದೇವರೇ ಒಟ್ಟಿಗೆ ಕೂಡಿಸಿದ್ದಾನೆ. ಆದ್ದರಿಂದ ಯಾವ ಮನುಷ್ಯನೂ ಅವರನ್ನು ಪ್ರತ್ಯೇಕಿಸಬಾರದು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹೀಗಿರುವಲ್ಲಿ, ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರವಾಗಿರುವರು. ಈ ನಿಮಿತ್ತ ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದೆ ಇರಲಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯರು ಅಗಲಿಸಬಾರದು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿಸಿದ್ದನ್ನು, ಮನುಷ್ಯನು ಅಗಲಿಸಬಾರದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತೆಚೆಸಾಟ್ನಿ ತೆನಿ, ಅನಿ ಫಿಡೆ ದೊಗೆ ನ್ಹಯ್ ಎಕುಚ್ ಆಂಗ್. ಅಶೆ ರ್‍ಹಾತಾನಾ ದೆವಾನ್ ಜೊಡಲ್ಲೆ ಖಲ್ಯಾಬಿ ಮಾನ್ಸಾನ್ ಎಗ್ಳುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |
“ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.