ಮತ್ತಾಯ 19:9 - ಪರಿಶುದ್ದ ಬೈಬಲ್9 ನಾನು ನಿಮಗೆ ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ. ಮೊದಲಿನ ಹೆಂಡತಿಯು ಬೇರೊಬ್ಬನೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವನು ಆಕೆಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆ ಆಗಬಹುದು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನು ನಿಮಗೆ ಹೇಳುವುದನ್ನು ಕೇಳಿ; ತನ್ನ ಹೆಂಡತಿಯನ್ನು ಅವಳ ದುರ್ನಡತೆಯ ಕಾರಣದಿಂದಲ್ಲದೆ ಬಿಟ್ಟುಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮತ್ತು ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗುತ್ತಾನೆಂದು ನಿಮಗೆ ಹೇಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ, ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು, ಮತ್ತೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರ ಮಾಡುವವನಾಗಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 “ಮಿಯಾ ತುಮ್ಕಾ ಸಾಂಗ್ತಾ, ಎಕ್ ಮಾನುಸ್ ಅಪ್ನಾಚಿ ಬಾಯ್ಕೊ ದುಸ್ರ್ಯಾಚ್ಯಾ ವಾಂಗ್ಡಾ ಬುರ್ಸೊ ಸಮಂದ್ ಅಸಲ್ಲ್ಯಾ ಕಾರನಾಕ್ ಸೊಡುನ್, ದುಸ್ರ್ಯಾ ಕಸ್ಲ್ಯಾಬಿ ಕಾರನಾಸಾಟಿ ತೊ ಅಪ್ನಾಚ್ಯಾ ಬಾಯ್ಕೊಕ್ ಸೊಡ್ತಾ ಅನಿ ದುಸ್ರ್ಯಾ ಬಾಯ್ಕೊಮನ್ಸಿಕ್ಡೆ ಲಗಿನ್ ಹೊತಾ. ತರ್ ತೊ ವೆಭಿಚಾರ್ ಕರ್‍ತಾ.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.