ಮತ್ತಾಯ 2:11 - ಪರಿಶುದ್ದ ಬೈಬಲ್11 ಅವರು ಆ ಮನೆಗೆ ಬಂದಾಗ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ ತಾವು ಮಗುವಿಗಾಗಿ ತಂದಿದ್ದ ಕಾಣಿಕೆಗಳನ್ನು ತೆರೆದು ಚಿನ್ನ, ಧೂಪ ಮತ್ತು ಸುಗಂಧ ದ್ರವ್ಯಗಳನ್ನು ನೀಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮತ್ತು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ ಧೂಪ ರಕ್ತಬೋಳಗಳನ್ನು ಕಾಣಿಕೆಯಾಗಿ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಜ್ಞಾನಿಗಳು ಮನೆಯನ್ನು ಪ್ರವೇಶಿಸಿ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಮಗುವಿಗೆ ಅಡ್ಡಬಿದ್ದು ಆರಾಧಿಸಿದರು. ತಮ್ಮ ಬೊಕ್ಕಸಗಳನ್ನು ತೆರೆದು ಮಗುವಿಗೆ ಚಿನ್ನ, ಧೂಪ ಮತ್ತು ರಕ್ತಬೋಳಗಳನ್ನು ಕಾಣಿಕೆಯಾಗಿ ಸಮರ್ಪಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತೆನಿ ತ್ಯಾ ಘರಾತ್ ಗೆಲ್ಯಾನಿ ಅನಿ ತೆಚ್ಯಾ ಬಾಯ್ ಮರಿಕ್ಡೆ ಹೊತ್ತ್ಯಾ ಪೊರಾಕ್ ಬಗುನ್ ಡೊಗ್ಲಾ ಟೆಕುನ್ ತೆಕಾ ಮಾನ್ ಕರ್‍ಲ್ಯಾನಿ. ಮಾನಾ ಅಪ್ನಿ ಹಾನಲ್ಲೆ ಸೊನೆ, ಧುಪ್ ಅನಿ ರಗಾತ್ಬೊಳ್ ಕಾನಿಕ್ ಮನುನ್ ತ್ಯಾ ಪೊರಾಕ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |
ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.